ರಾಣಿ 2ನೇ ಎಲಿಜಬೆತ್ ನಿಧನಕ್ಕೆ ಇಂದು ದೇಶಾದ್ಯಂತ ಶೋಕಾಚರಣೆ….
ಗುರುವಾರ ನಿಧನರಾದ ಯುಕೆ ರಾಣಿ ಎಲಿಜಬೆತ್ II ಅವರ ಗೌರವಾರ್ಥವಾಗಿ ಭಾನುವಾರ ಭಾರತದಾದ್ಯಂತ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುತ್ತದೆ. ರಾಣಿ ಎಲಿಜಬೆತ್ II ಅವರ ನಿಧನದ ನಂತರ ಕೆಂಪು ಕೋಟೆ ಮತ್ತು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಹಾರಿಸಲಾಯಿತು.
“ರಾಣಿ ಎಲಿಜಬೆತ್ II ರ ನಿಧನದ ನಂತರ ದೇಶದಲ್ಲಿ ಒಂದು ದಿನದ ಶೋಕಾಚರಣೆಯನ್ನು ಆಚರಿಸಲಾಗುತ್ತಿದ್ದು, ಕೆಂಪು ಕೋಟೆ ಮತ್ತು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರೀಯ ಧ್ವಜಗಳು ಅರ್ಧಕ್ಕೆ ಹಾರಿದವು” ಎಂದು ANI ಸುದ್ದಿ ಸಂಸ್ಥೆ ಪೋಟೋ ಸಹಿತ ವರದಿ ಮಾಡಿದೆ.
ಬ್ರಿಟನ್ನ ರಾಣಿಯಾಗಿ ಸುದೀರ್ಘ ಸೇವೆ ಸಲ್ಲಿಸಿದ ಎಲಿಜಬೆತ್ ಗುರುವಾರ ಸ್ಕಾಟ್ಲೆಂಡ್ನಲ್ಲಿ ತಮ್ಮ 96 ನೇ ವಯಸ್ಸಿನಲ್ಲಿ ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತದಾದ್ಯಂತ ಸೆಪ್ಟೆಂಬರ್ 11 ಭಾರತ ಸರ್ಕಾರ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಿದೆ.,” ಅಧಿಕೃತವಾಗಿ ಹೇಳಿಕೆಯಲ್ಲಿ ತಿಳಿಸಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ರಾಣಿಯ ಅಗಲಿಕೆಗೆ ಸಂತಾಪ ಸೂಚಿಸಿ, 2015 ಹಾಗೂ 2018ರಲ್ಲಿ ಬ್ರಿಟನ್ಗೆ ಭೇಟಿ ನೀಡಿದ್ದಾಗ ರಾಣಿಯೊಂದಿಗಿನ ಭೇಟಿಯನ್ನು ಸ್ಮರಿಸಿದ್ದರು.
ಈ ಬಗ್ಗೆ ಟ್ವೀಟ್ ಮಾಡಿದ್ದ ಪ್ರಧಾನಿಯವರು ಬ್ರಿಟನ್ ರಾಣಿಯ ಕಾಳಜಿ ಹಾಗೂ ದಯೆಯನ್ನು ನಾನು ಎಂದಿಗೂ ಮರೆಯುವುದಿಲ್ಲ. ಸಭೆಯೊಂದರಲ್ಲಿ ಅವರು ತಮ್ಮ ಮದುವೆಯ ಸಂದರ್ಭ ಮಹಾತ್ಮ ಗಾಂಧಿಯವರು ನೀಡಿದ್ದ ಕರವಸ್ತ್ರವನ್ನು ನನಗೆ ತೋರಿಸಿದ್ದರು. ನಾನು ಅವರ ನಡವಳಿಕೆಗೆ ಯಾವಾಗಲೂ ಋಣಿಯಾಗಿರುತ್ತೇನೆ ಎಂದು ಬರೆದಿದ್ದರು. ಅಗಲಿದ ರಾಣಿಯ ಸರ್ಕಾರಿ ಅಂತ್ಯಕ್ರಿಯೆ ಸೋಮವಾರ ಲಂಡನ್ನ ವೆಸ್ಟ್ಮಿನಿಸ್ಟರ್ ಅಬ್ಬೆಯಲ್ಲಿ ನಡೆಯಲಿದೆ ಎಂದು ವರದಿಗಳು ತಿಳಿಸಿವೆ.