ಶೀಘ್ರವೇ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಭರ್ತಿ

1 min read

ಶೀಘ್ರವೇ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಭರ್ತಿ

ಬೆಂಗಳೂರು : ಶೀಘ್ರವೇ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿಗಳ ಹುದ್ದೆ ಭರ್ತಿ ಮಾಡುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯೆ ಲಕ್ಷ್ಮಿ ಹೆಬ್ಬಾಳ್ಕರ್ ಖಾಲಿ ಇರುವ ಹುದ್ದೆಗಳನ್ನ ಭರ್ತಿ ಮಾಡುವ ಬಗ್ಗೆ ಕೇಳಿದರು.

ಇದಕ್ಕೆ ಆರ್ ಅಶೋಕ್, ರಾಜ್ಯದಲ್ಲಿ ಒಟ್ಟು 9,776 ಗ್ರಾಮ ಲೆಕ್ಕಾಧಿಕಾರಿಗಳಿದ್ದು, ಅದರಲ್ಲಿ 1,660 ಹುದ್ದೆ ಖಾಲಿ ಇದೆ.

Village Accountant

ಕೊರೊನಾ ಕಾರಣದಿಂದ ಹೊಸ ನೇಮಕಾತಿಗಳಿಗೆ ಅವಕಾಶ ಇಲ್ಲ.

ಹೊಸ ನೇಮಕಾತಿಗಳಿಗೆ ಆರ್ಥಿಕ ಇಲಾಖೆ ಅವಕಾಶ ನೀಡಿದ ನಂತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಅಲ್ಲದೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಯನ್ನು ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನೇರ ನೇಮಕಾತಿ ಮಾಡಿಕೊಳ್ಳುವ ನಿಯಮಗಳು ಪ್ರಸ್ತುತ ಜಾರಿಯಲ್ಲಿವೆ.

ಇವುಗಳನ್ನು ಬದಲಾಯಿಸಿ ಲಿಖಿತ ಪರೀಕ್ಷೆ ನಡೆಸುವ ತೀರ್ಮಾನಗಳು ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

Motera stadium
ಜಾಹೀರಾತು

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd