R Ashok
ತುಮಕೂರು: ರಾಜ್ಯದಲ್ಲಿ ಉಪಸಮರದ ಕಾವು ಜೋರಾಗಿದೆ. ಆಡಳಿತ ಪಕ್ಷ ವಿಪಕ್ಷಗಳ ನಡುವೆ ಮಾತಿಕ ಸಮರ ತಾರಕಕ್ಕೇರಿದೆ. ಆರೊಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪ ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಡಿಕೆಶಿ ಆರೋಪಕ್ಕೆ ಶಿರಾದಲ್ಲಿ ಮತಯಾಚನೆ ವೇಳೆ ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್ ಅವರು ದೆವ್ವದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಯ್ತು ಎಂದು ವ್ಯಂಗ್ಯವಾಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಪರ ಮತಯಾಚನೆ ಮಾಡಿದ ಆರ್. ಅಶೋಕ್ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಹಣ ಹಂಚಿಕೆ ಮಾಡಿದ್ದರು. ಡಿ.ಕೆ.ಶಿ.ಗೆ ಆ ವಿಷಯ ನೆನಪಾಗಿರಬೇಕು. ಹಾಗಾಗಿ ಬಿಜೆಪಿ ವಿರುದ್ಧ ಹಣ ಹಂಚಿಕೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಲ್ಲದೇ ಇದೇ ಆರೋಪ ಮಾಡಿರುವ ಮಾಜಿ ಪ್ರಧಾನಿ ದೇವೇಗೌಡರಿಗೂ ಟಾಂಗ್ ಕೊಟ್ಟಿರುವ ಆರ್ ಅಶೋಕ್ ಜೆಡಿಎಸ್ ವರಿಷ್ಠ ದೇವೇಗೌಡರಿಗೂ ಕೂಡ ಹಣ ಹಂಚಿಕೆ ಅನುಭವವಿರಬೇಕು. ಅದಕ್ಕೆ ಇಂತಹ ಆರೋಪ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಹಣ ಹಂಚಿ ಗೆಲ್ಲಬೇಕಾದ ಹೀನಾಯ ಸ್ಥಿತಿ ಬಿಜೆಪಿಗೆ ಬಂದಿಲ್ಲ. ಸೋಲುವ ಭಯದಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
R Ashok
‘ಉಪ ಚುನಾವಣೆ’ಯಲ್ಲಿ ಕೊರೊನಾ ಸೋಂಕಿತರಿಗೂ ಮತದಾನಕ್ಕೆ ಅವಕಾಶ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








