ADVERTISEMENT
Wednesday, October 28, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಜೆಪಿ–ಜೆಡಿಎಸ್‌ ಒಗ್ಗಟ್ಟು 2028ರ ಚುನಾವಣೆಯಲ್ಲೂ ಮುಂದುವರಿಯಲಿದೆ, 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

admin by admin
October 28, 2026
in Newsbeat, State, ರಾಜ್ಯ
parks-land-use-bill-withdrawn-bjp-victory-r-ashoka-seven-day-assembly

parks-land-use-bill-withdrawn-bjp-victory-r-ashoka-seven-day-assembly

Share on FacebookShare on TwitterShare on WhatsappShare on Telegram

ಬ್ಯಾಲೆಟ್‌ ಪೇಪರ್‌ನಲ್ಲೂ ಎನ್‌ಡಿಎಗೆ ಗೆಲುವು, ಕಾಂಗ್ರೆಸ್‌ಗೆ ಜನರೇ ತಕ್ಕ ಉತ್ತರ ನೀಡಿದ್ದಾರೆ.

ಬೆಂಗಳೂರು, ವಿಧಾನಪರಿಷತ್‌ ನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಎನ್‌ಡಿಎ ಸಾಧಿಸಿರುವ ಗೆಲುವು 2028 ರ ವಿಧಾನಸಭಾ ಚುನಾವಣೆಗೆ ಸ್ಪಷ್ಟ ಸಂದೇಶ ನೀಡಿದೆ. ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂಬ ವಿಶ್ವಾಸ ಮೂಡಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

Related posts

shashil-g-namoshi-nda-victory-north-east-teachers-constituency-karnataka

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ವಿಜಯ!

October 28, 2026
sv-sankanur-hat-trick-victory-west-graduates-constituency-karnataka

ಹ್ಯಾಟ್ರಿಕ್ ವಿಜಯ ದಾಖಲಿಸಿರುವ ಶ್ರೀ ಎಸ್.ವಿ. ಸಂಕನೂರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

October 28, 2026

ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ನಾಯಕರು, ಶಾಸಕರು, ಜಿಲ್ಲಾಧ್ಯಕ್ಷರು, ಮಾಜಿ ಕಾರ್ಪೊರೇಟರ್‌ಗಳು ಹಾಗೂ ಕಾರ್ಯಕರ್ತರು ಅತ್ಯುತ್ತಮ ಸಮನ್ವಯದಿಂದ ಕೆಲಸ ಮಾಡಿದ್ದಾರೆ. ಅಭ್ಯರ್ಥಿಯ ಆಯ್ಕೆಯಿಂದ ಹಿಡಿದು ಚುನಾವಣಾ ಪ್ರಚಾರದವರೆಗೂ ಎರಡೂ ಪಕ್ಷಗಳ ನಡುವೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ. ಎಲ್ಲರೂ ಒಗ್ಗಟ್ಟಿನಿಂದ ಎನ್‌ಡಿಎ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿದ್ದಾರೆ. ಇದೇ ಒಗ್ಗಟ್ಟು 2028ರ ವಿಧಾನಸಭಾ ಚುನಾವಣೆಯಲ್ಲೂ ಮುಂದುವರಿಯಲಿದೆ ಎಂದರು.

ರಂಗನಾಥ್‌ ಅವರ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಬಳಿಕ ಜವಾಬ್ದಾರಿ ವಹಿಸಿಕೊಂಡು ವಿವಿಧ ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಿ, ಶಾಸಕರು ಹಾಗೂ ಮಾಜಿ ಕಾರ್ಪೊರೇಟರ್‌ಗಳೊಂದಿಗೆ ಸಮನ್ವಯ ಸಾಧಿಸಲಾಯಿತು. ಎರಡೂ ಪಕ್ಷಗಳ ನಾಯಕರು ಒಟ್ಟಾಗಿ ಕೆಲಸ ಮಾಡಿದ್ದರಿಂದ ಈ ಗೆಲುವು ಸಾಧ್ಯವಾಗಿದೆ ಎಂದು ತಿಳಿಸಿದರು.

2028ರ ಚುನಾವಣೆಗೆ ಸ್ಪಷ್ಟ ಸಂದೇಶ

ವಿಧಾನಪರಿಷತ್‌ ಚುನಾವಣೆಯ ಫಲಿತಾಂಶ ರಾಜ್ಯದ ಮತದಾರರ ಮನಸ್ಥಿತಿಯನ್ನು ಪ್ರತಿಬಿಂಬಿಸಿದೆ. ಬಿಜೆಪಿ ಮತ್ತು ಜೆಡಿಎಸ್‌ ಒಟ್ಟಾಗಿ ಚುನಾವಣೆ ಎದುರಿಸಿದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಕಾಂಗ್ರೆಸ್‌ ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿ ಅಸಮಾಧಾನವಿದೆ. ಈ ಫಲಿತಾಂಶವು ಮುಂಬರುವ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ಹೇಳಿದರು.

ಪುಟ್ಟಣ್ಣ ಸೋಲು ಡಿ.ಕೆ.ಶಿವಕುಮಾರ್‌ಗೆ ಹಿನ್ನಡೆ

ಹಲವು ಬಾರಿ ವಿವಿಧ ಪಕ್ಷಗಳಿಂದ ಗೆಲುವು ಸಾಧಿಸಿದ್ದ ಪುಟ್ಟಣ್ಣ ಈ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಅವರನ್ನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಆಪ್ತರೆಂದು ಬಿಂಬಿಸಲಾಗಿತ್ತು. ಹೀಗಾಗಿ ಈ ಸೋಲು ಪುಟ್ಟಣ್ಣ ಅವರಿಗೆ ಮಾತ್ರವಲ್ಲದೆ, ಡಿ.ಕೆ.ಶಿವಕುಮಾರ್‌ ಅವರಿಗೂ ಹಿನ್ನಡೆಯಾಗಿದೆ. ಏಕೆಂದರೆ ಆ ಕ್ಷೇತ್ರದ ಹೊಣೆಯನ್ನು ಅವರೇ ವಹಿಸಿಕೊಂಡಿದ್ದರು ಎಂದು ಆರ್‌.ಅಶೋಕ ಟೀಕಿಸಿದರು.

ಬ್ಯಾಲೆಟ್‌ ಪೇಪರ್‌ನಲ್ಲೂ ಎನ್‌ಡಿಎಗೆ ಗೆಲುವು

ಚುನಾವಣೆಯಲ್ಲಿ ಸೋತಾಗ ಇವಿಎಂ ಬಗ್ಗೆ ಪ್ರಶ್ನೆ ಎತ್ತುವ ಕಾಂಗ್ರೆಸ್‌ ನಾಯಕರು, ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆಸಬೇಕೆಂದು ಒತ್ತಾಯಿಸುತ್ತಾರೆ. ಈಗ ವಿಧಾನಪರಿಷತ್‌ ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಮೂಲಕ ಮತದಾನ ನಡೆದಿದ್ದು, ಅದರಲ್ಲೂ ಎನ್‌ಡಿಎ ಗೆಲುವು ಸಾಧಿಸಿದೆ. ಹೀಗಾಗಿ ಸೋಲಿಗೆ ಇವಿಎಂ ಕಾರಣವೆಂದು ಹೇಳುವ ಕಾಂಗ್ರೆಸ್‌ ನಾಯಕರಿಗೆ ಈ ಫಲಿತಾಂಶ ಸೂಕ್ತ ಉತ್ತರ ನೀಡಿದೆ, ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ ಹಾಗೂ ಆಂತರಿಕ ಸಂಘರ್ಷ ಹೆಚ್ಚಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಕಾಂಗ್ರೆಸ್‌ ಹೈಕಮಾಂಡ್‌ ನಡುವಿನ ಬೆಳವಣಿಗೆಗಳು, ಪಕ್ಷದ ನಾಯಕರ ಹೇಳಿಕೆಗಳು ಸರ್ಕಾರದೊಳಗಿನ ಭಿನ್ನಾಭಿಪ್ರಾಯಗಳನ್ನು ಬಹಿರಂಗಪಡಿಸಿವೆ. ಈ ಎಲ್ಲ ಬೆಳವಣಿಗೆಗಳ ನಡುವೆ ನಡೆದ ಚುನಾವಣೆಯಲ್ಲಿ ಜನರು ತಮ್ಮ ಅಭಿಪ್ರಾಯವನ್ನು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರ ಪೂರ್ಣಾವಧಿ ಅಧಿಕಾರದಲ್ಲಿರುತ್ತದೆಯೇ ಎಂಬ ಅನುಮಾನ ಜನರಲ್ಲಿ ಮೂಡಿದೆ ಎಂದು ಟೀಕಿಸಿದರು.

ಕಾರ್ಯಕರ್ತರ ಪರಿಶ್ರಮಕ್ಕೆ ಅಭಿನಂದನೆ

ಈ ಚುನಾವಣೆಯಲ್ಲಿ ಹಗಲು-ರಾತ್ರಿ ಶ್ರಮಿಸಿದ ಬಿಜೆಪಿ ಮತ್ತು ಜೆಡಿಎಸ್‌ನ ಎಲ್ಲ ನಾಯಕರು, ಶಾಸಕರು, ಮಾಜಿ ಶಾಸಕರು, ಜಿಲ್ಲಾಧ್ಯಕ್ಷರು, ಮಾಜಿ ಕಾರ್ಪೊರೇಟರ್‌ಗಳು ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರ ಮಾರ್ಗದರ್ಶನವೂ ಈ ಗೆಲುವಿಗೆ ಸಹಕಾರಿಯಾಗಿದೆ. ಅವರ ಸಲಹೆಯಂತೆ ಬೆಂಗಳೂರು ವ್ಯಾಪ್ತಿಯಲ್ಲಿ ಮಾಜಿ ಕಾರ್ಪೊರೇಟರ್‌ಗಳನ್ನು ಸಂಪರ್ಕಿಸಿ, ಪ್ರತಿ ವಾರ್ಡ್‌ನಲ್ಲೂ ಸಂಘಟಿತ ಪ್ರಚಾರ ನಡೆಸಲಾಯಿತು. ಎಲ್ಲರ ಸಾಮೂಹಿಕ ಪರಿಶ್ರಮವೇ ಈ ಯಶಸ್ಸಿನ ಹಿಂದಿನ ಶಕ್ತಿಯಾಗಿದೆ ಎಂದರು.

ಬಿಜೆಪಿ–ಜೆಡಿಎಸ್‌ ಮೈತ್ರಿ ಮುಂದಿನ ದಿನಗಳಲ್ಲೂ ಇದೇ ಒಗ್ಗಟ್ಟು ಮತ್ತು ಸಮನ್ವಯದೊಂದಿಗೆ ಮುಂದುವರಿಯಲಿದ್ದು, 2028ರ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾಗಿ ಸ್ಪರ್ಧಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಆರ್‌.ಅಶೋಕ ಹೇಳಿದರು.

ShareTweetSendShare
Join us on:

Related Posts

shashil-g-namoshi-nda-victory-north-east-teachers-constituency-karnataka

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಮೈತ್ರಿಕೂಟದ ಭರ್ಜರಿ ವಿಜಯ!

by admin
October 28, 2026
0

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಶ್ರೀ ಶಶಿಲ್ ಜಿ. ನಮೋಶಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಈ ಗೆಲುವು...

sv-sankanur-hat-trick-victory-west-graduates-constituency-karnataka

ಹ್ಯಾಟ್ರಿಕ್ ವಿಜಯ ದಾಖಲಿಸಿರುವ ಶ್ರೀ ಎಸ್.ವಿ. ಸಂಕನೂರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

by admin
October 28, 2026
0

ಪಶ್ಚಿಮ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಎನ್‌ಡಿಎ ಅಭ್ಯರ್ಥಿಯಾಗಿ ಸತತ ಮೂರನೇ ಬಾರಿಗೆ ಭರ್ಜರಿ ಗೆಲುವು ಸಾಧಿಸಿ ಹ್ಯಾಟ್ರಿಕ್ ವಿಜಯ ದಾಖಲಿಸಿರುವ ಶ್ರೀ ಎಸ್.ವಿ. ಸಂಕನೂರ ಅವರಿಗೆ...

km-suresh-nda-victory-south-east-graduates-constituency-karnataka-legislative-council

ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಶ್ರೀ ಕೆ.ಎಂ. ಸುರೇಶ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

by admin
October 28, 2026
0

ಈ ಐತಿಹಾಸಿಕ ಗೆಲುವು ಎನ್‌ಡಿಎ ಮೈತ್ರಿಕೂಟದ ಒಗ್ಗಟ್ಟು, ಸಂಘಟನಾ ಶಕ್ತಿ ಹಾಗೂ ಪದವೀಧರ ಮತದಾರರು ನಮ್ಮ ಮೈತ್ರಿಕೂಟದ ಮೇಲೆ ಇಟ್ಟಿರುವ ಅಚಲ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ನಾಲ್ಕು ಕ್ಷೇತ್ರಗಳಲ್ಲಿ...

r-ashoka-alleges-20-crore-voter-id-scam-31-lakh-duplicate-cards-karnataka

31 ಲಕ್ಷ ಬೋಗಸ್‌ ಮತದಾರರ ಗುರುತಿನ ಚೀಟಿ ಮುದ್ರಣ, ಎಸ್‌ಐಆರ್ ಬಗ್ಗೆ ಗೊತ್ತಿದ್ದರೂ ಟೆಂಡರ್‌ ಕರೆಯಲಾಗಿದೆ, ಸರ್ಕಾರದಿಂದ ₹20 ಕೋಟಿ ಬೃಹತ್ ಹಗರಣ: ಪ್ರತಿಪಕ್ಷ ನಾಯಕ ಆರ್.ಅಶೋಕ

by admin
October 28, 2026
0

ಜಿಬಿಎ ಚುನಾವಣೆಯಲ್ಲಿ ವೋಟ್‌ ಚೋರಿ ಮಾಡಲು ಕಾಂಗ್ರೆಸ್‌ ಪ್ಲಾನ್‌, ತಪ್ಪಿಲ್ಲದಿದ್ದರೆ ಕೂಡಲೇ ಗುರುತಿನ ಚೀಟಿ ವಿತರಿಸಲಿ ಬೆಂಗಳೂರು, ಎಸ್‌ಐಆರ್‌ ನಡೆಯಲಿದೆ ಎಂದು ಗೊತ್ತಿದ್ದರೂ ರಾಜ್ಯ ಚುನಾವಣಾ ಆಯೋಗದಿಂದ 90...

radisson-purple-palms-resort-spa-madikeri-coorg-karnataka

ಕರ್ನಾಟಕದ ಕಾಶ್ಮೀರ ಕೊಡಗಿಗೆ ಲಗ್ಗೆ ಇಟ್ಟ ‘ರಾಡಿಸನ್’: ಪ್ರವಾಸಿಗರಿಗಾಗಿ ಅತ್ಯಾಧುನಿಕ ‘ಪರ್ಪಲ್ ಪಾಮ್ಸ್ ರೆಸಾರ್ಟ್ ಆಂಡ್ ಸ್ಪಾ’ ಆರಂಭ

by admin
October 28, 2026
0

ಮಂಜಿನ ನಗರಿ, ಕಾಫಿ ನಾಡು ಕೊಡಗಿಗೆ ಪ್ರತಿಷ್ಠಿತ 'ರಾಡಿಸನ್ ಹೋಟೆಲ್ ಗ್ರೂಪ್' ಲಗ್ಗೆ ಇಟ್ಟಿದೆ. 'ರಾಡಿಸನ್ ಇಂಡಿವಿಜುವಲ್ಸ್ ಪ್ರೀಮಿಯರ್' ಬ್ರಾಂಡ್‌ನ ಅಡಿಯಲ್ಲಿ 'ಪರ್ಪಲ್ ಪಾಮ್ಸ್ ರೆಸಾರ್ಟ್ ಆಂಡ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram