ADVERTISEMENT
Thursday, November 26, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬೆಂಗಳೂರು ಜಾತ್ರೆಗಿಂತ ಮೊದಲು ನಗರದ ಸಮಸ್ಯೆಗಳಿಗೆ ಮುಕ್ತಿ ಕೊಡಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿ

admin by admin
November 25, 2026
in Newsbeat, State, ರಾಜ್ಯ
r-ashoka-criticizes-congress-govt-over-bengaluru-jatre-demands-focus-on-civic-issues-potholes-garbage-traffic

r-ashoka-criticizes-congress-govt-over-bengaluru-jatre-demands-focus-on-civic-issues-potholes-garbage-traffic

Share on FacebookShare on TwitterShare on WhatsappShare on Telegram

₹20 ಕೋಟಿ ವೆಚ್ಚದಲ್ಲಿ 13 ದಿನಗಳ ಜಾತ್ರೆಗೆ ಸಿದ್ಧತೆ; ಕಸದ ಸಮಸ್ಯೆ, ಗುಂಡಿಮಯ ರಸ್ತೆಗಳು, ಟ್ರಾಫಿಕ್‌ ಜಂಜಾಟಕ್ಕೆ ಪರಿಹಾರ ಯಾವಾಗ ಎಂದು ಪ್ರಶ್ನೆ

ಬೆಂಗಳೂರು: ಬೆಂಗಳೂರಿನಲ್ಲಿ ಅದ್ಧೂರಿ ಜಾತ್ರೆ ಆಯೋಜಿಸುವುದಕ್ಕಿಂತ ಮೊದಲು ನಗರದ ಜನರು ಪ್ರತಿನಿತ್ಯ ಎದುರಿಸುತ್ತಿರುವ ಮೂಲಸೌಕರ್ಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Related posts

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

November 26, 2026
ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

November 26, 2026

ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ನಗರದ ಜನರ ಕಣ್ಣಿಗೆ ಮಣ್ಣೆರಚಲು ಬೆಂಗಳೂರು ಜಾತ್ರೆ ಎಂಬ ಹೊಸ ಗಿಮಿಕ್‌ ಆರಂಭಿಸಿದ್ದೀರಾ? ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ಅದ್ಧೂರಿ ಜಾತ್ರೆ ಆಯೋಜಿಸುವ ಸರ್ಕಾರಕ್ಕೆ ಬೆಂಗಳೂರಿಗರ ನಿತ್ಯದ ಸಂಕಷ್ಟಗಳು ಕಾಣಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಒಂದೆಡೆ ₹20 ಕೋಟಿ ವೆಚ್ಚದಲ್ಲಿ 13 ದಿನಗಳ ಕಾಲ ಬೆಂಗಳೂರು ಜಾತ್ರೆಯ ಸಂಭ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದರೆ, ಮತ್ತೊಂದೆಡೆ ನಗರದ ಜನರು ಕಸದ ಸಮಸ್ಯೆ, ದುರ್ನಾತ, ಗುಂಡಿಮಯ ರಸ್ತೆಗಳು ಹಾಗೂ ಸಂಚಾರ ದಟ್ಟಣೆಯಿಂದ ನರಕಯಾತನೆ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಯಾವ ಸಾಧನೆಗಾಗಿ ಈ ಸಂಭ್ರಮಾಚರಣೆ ಎಂದು ಆರ್‌. ಅಶೋಕ್ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ರಸ್ತೆಗಳು ಗುಂಡಿಮಯವಾಗಿದ್ದು, ವಾಹನ ಸವಾರರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಟ್ರಾಫಿಕ್ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗದೆ ಜನರ ಅಮೂಲ್ಯ ಸಮಯ ರಸ್ತೆಗಳಲ್ಲೇ ವ್ಯರ್ಥವಾಗುತ್ತಿದೆ. ಮಳೆ ಬಂದರೆ ರಸ್ತೆಗಳು ಕೆರೆಗಳಾಗಿ, ಬಡಾವಣೆಗಳು ಜಲಾವೃತವಾಗುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಕಾವೇರಿ ನೀರಿನ ಅಸಮರ್ಪಕ ಪೂರೈಕೆ ಹಾಗೂ ಟ್ಯಾಂಕರ್‌ ಮಾಫಿಯಾದಿಂದ ಜನರು ಹೈರಾಣಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಇದರ ಜೊತೆಗೆ ಆಸ್ತಿ ತೆರಿಗೆ ಹೆಚ್ಚಳ, ಇ-ಖಾತಾ ಹೆಸರಿನಲ್ಲಿ ಹೊಸ ಶುಲ್ಕಗಳ ಹೊರೆ, ಮೆಟ್ರೋ ಮತ್ತು ಬಸ್ ಪ್ರಯಾಣ ದರ ಏರಿಕೆಯಿಂದ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲು ಸಾಧ್ಯವಾಗದೆ ಜನರು ಜೀವ ಕೈಯಲ್ಲಿ ಹಿಡಿದು ರಸ್ತೆಯಲ್ಲಿ ಸಂಚರಿಸುವಂತಾಗಿದೆ. ಒಳಚರಂಡಿ ವ್ಯವಸ್ಥೆ ಹದಗೆಟ್ಟಿದ್ದು, ಕಳಪೆ ರಸ್ತೆ ಕಾಮಗಾರಿ, ಅಪೂರ್ಣ ಯೋಜನೆಗಳು, ಧೂಳು ಮತ್ತು ವಾಯುಮಾಲಿನ್ಯ ಸಿಲಿಕಾನ್ ಸಿಟಿಯ ಜನರ ಬದುಕನ್ನು ದುಸ್ತರಗೊಳಿಸಿವೆ ಎಂದು ಆರೋಪಿಸಿದ್ದಾರೆ.

ಕಲಾವಿದರಿಗೆ ವೇದಿಕೆ ಕಲ್ಪಿಸುವುದಕ್ಕೆ ಅಥವಾ ನಾಡಿನ ಕಲೆ, ಸಂಸ್ಕೃತಿ ಮತ್ತು ಕಲಾವಿದರನ್ನು ಗೌರವಿಸುವುದಕ್ಕೆ ವಿರೋಧವಿಲ್ಲ. ಆದರೆ ಇಂತಹ ಕಾರ್ಯಕ್ರಮಗಳನ್ನು ಆಡಳಿತದ ವೈಫಲ್ಯಗಳನ್ನು ಮುಚ್ಚಿಹಾಕುವ ರಾಜಕೀಯ ವೇದಿಕೆಯನ್ನಾಗಿ ಮಾಡಬಾರದು ಎಂದು ಹೇಳಿದ್ದಾರೆ.

13 ದಿನಗಳ ಜಾತ್ರೆ ಮುಗಿದ ಬಳಿಕ ಬೆಂಗಳೂರಿನ ರಸ್ತೆಗಳು ಗುಂಡಿಮುಕ್ತವಾಗುತ್ತವೆಯೇ? ಕಸದ ಸಮಸ್ಯೆ ಬಗೆಹರಿಯುತ್ತದೆಯೇ? ಸಂಚಾರ ದಟ್ಟಣೆ ಕಡಿಮೆಯಾಗುತ್ತದೆಯೇ? ಜನರಿಗೆ ನಿರಂತರ ಕುಡಿಯುವ ನೀರು ಸಿಗುತ್ತದೆಯೇ? ಎಂದು ಪ್ರಶ್ನಿಸಿರುವ ಅವರು, ಬೆಂಗಳೂರಿಗರಿಗೆ ಬೇಕಿರುವುದು ಜಾತ್ರೆಯ ಸಂಭ್ರಮವಲ್ಲ, ಸುಗಮ ಸಂಚಾರ, ಗುಣಮಟ್ಟದ ರಸ್ತೆಗಳು, ಸ್ವಚ್ಛ ಪರಿಸರ, ಸಮರ್ಪಕ ಕುಡಿಯುವ ನೀರು ಮತ್ತು ಉತ್ತಮ ನಾಗರಿಕ ಸೌಲಭ್ಯಗಳು ಎಂದು ಪ್ರತಿಪಾದಿಸಿದ್ದಾರೆ.

ರೀಲ್ಸ್ ಮಾಡುವುದರಲ್ಲಿ, ಜಾತ್ರೆ ಆಯೋಜಿಸುವುದರಲ್ಲಿ ತೋರುವ ಉತ್ಸಾಹವನ್ನು ನಗರದ ಅಭಿವೃದ್ಧಿಯಲ್ಲೂ ತೋರಿಸಬೇಕು. ಬೆಂಗಳೂರಿಗರು ಜಾತ್ರೆಯ ಪ್ರೇಕ್ಷಕರಲ್ಲ, ಸರ್ಕಾರದ ವೈಫಲ್ಯಗಳಿಗೆ ಪ್ರತಿದಿನ ಬೆಲೆ ತೆರುತ್ತಿರುವ ತೆರಿಗೆದಾರರು. ಪ್ರಚಾರ ಮತ್ತು ಸಂಭ್ರಮಾಚರಣೆಯಿಂದ ನಗರದ ಅಭಿವೃದ್ಧಿ ಸಾಧ್ಯವಿಲ್ಲ. ಅದಕ್ಕೆ ಇಚ್ಛಾಶಕ್ತಿ, ದೂರದೃಷ್ಟಿ ಹಾಗೂ ಜವಾಬ್ದಾರಿಯುತ ಆಡಳಿತ ಬೇಕು ಎಂದು ಆರ್‌. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಜಾತ್ರೆಯ ಸಂಭ್ರಮದ ಹಿಂದೆ ನಗರದ ಆಡಳಿತಾತ್ಮಕ ವೈಫಲ್ಯಗಳನ್ನು ಮುಚ್ಚಿಡಲು ಸಾಧ್ಯವಿಲ್ಲ. ಬೆಂಗಳೂರಿಗೆ ಜಾತ್ರೆಯ ಗಿಮಿಕ್‌ಗಿಂತ ಜವಾಬ್ದಾರಿಯುತ ಆಡಳಿತದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ShareTweetSendShare
Join us on:

Related Posts

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

ಕರ್ನಾಟಕದಲ್ಲೂ ಜಪಾನ್ ಮಾದರಿಯ ಹೈಟೆಕ್ ರೈಲ್ವೆ ನಿಲ್ದಾಣ ನಿರ್ಮಾಣದ ಕನಸು: ಮನದಾಳದ ಆಸೆ ಬಿಚ್ಚಿಟ್ಟ ಸಿಎಂ ಡಿ.ಕೆ. ಶಿವಕುಮಾರ್!

by Shwetha
November 26, 2026
0

ಬೆಂಗಳೂರು: ಜಪಾನ್ ದೇಶದ ವಿಶ್ವದರ್ಜೆಯ ರೈಲ್ವೆ ವ್ಯವಸ್ಥೆ, ಅಲ್ಲಿನ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಅಭೂತಪೂರ್ವ ಅನುಕೂಲತೆಗಳಿಂದ ಪ್ರೇರೇಪಿತರಾಗಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ನಮ್ಮ...

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ರಾಜೀನಾಮೆ ವಿಚಾರಕ್ಕೆ ಕ್ಲಾರಿಟಿ; ಆನೆ ಸ್ಥಳಾಂತರ ಕಾರ್ಯಾಚರಣೆ ಸ್ಥಗಿತ ಭರವಸೆ ಬಳಿಕ ಹಿಂದೆ ಸರಿದ್ರಾ?

by Shwetha
November 26, 2026
0

ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಗೆ ಸ್ಥಳಾಂತರಿಸುವ ವಿಚಾರ ಕಾಂಗ್ರೆಸ್ ಶಾಸಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿತ್ತು. ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಶಾಸಕ...

ಪಶುವೈದ್ಯಾಧಿಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ: ₹3.50 ಕೋಟಿ ಲಂಚದ ವ್ಯವಹಾರ ಆರೋಪ, ₹1.22 ಕೋಟಿ ಆಸ್ತಿ ಜಪ್ತಿ

ಪಶುವೈದ್ಯಾಧಿಕಾರಿ ನೇಮಕಾತಿ ಪ್ರಶ್ನೆಪತ್ರಿಕೆ ಸೋರಿಕೆ: ₹3.50 ಕೋಟಿ ಲಂಚದ ವ್ಯವಹಾರ ಆರೋಪ, ₹1.22 ಕೋಟಿ ಆಸ್ತಿ ಜಪ್ತಿ

by Shwetha
November 26, 2026
0

ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯ (ED) ಮಹತ್ವದ ಮಾಹಿತಿಗಳನ್ನು ಬಹಿರಂಗಪಡಿಸಿದೆ. ಪ್ರಶ್ನೆಪತ್ರಿಕೆ ಹಾಗೂ ಉತ್ತರ...

ಎನ್‌ಡಿಎ ಮುಂದಿನ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದ ರೇವಣ್ಣ: ಕಮಲ ಪಾಳಯದಲ್ಲಿ ಒಳಬೇಗುದಿ, ಕೂಸು ಹುಟ್ಟುವ ಮುನ್ನವೇ ಕುಲಾವಿ ಬೇಡ ಎಂದ ಎಚ್‌ಡಿಕೆ!

ಎನ್‌ಡಿಎ ಮುಂದಿನ ಸಿಎಂ ಅಭ್ಯರ್ಥಿ ಕುಮಾರಸ್ವಾಮಿ ಎಂದ ರೇವಣ್ಣ: ಕಮಲ ಪಾಳಯದಲ್ಲಿ ಒಳಬೇಗುದಿ, ಕೂಸು ಹುಟ್ಟುವ ಮುನ್ನವೇ ಕುಲಾವಿ ಬೇಡ ಎಂದ ಎಚ್‌ಡಿಕೆ!

by Shwetha
November 26, 2026
0

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬಂದಾಗ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಮಾಜಿ ಸಚಿವ...

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

ಕಂಠಿಹಾರ ಕಿತ್ತುಕೊಡಲು ನೀನೇನು ರಾಜನಾ? ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಧುಮುಕಿದ ನಟಿ ತಾರಾ, ಸಚಿವ ನರೇಂದ್ರ ಸ್ವಾಮಿಗೆ ಹಿಗ್ಗಾಮುಗ್ಗಾ ತರಾಟೆ!

by Shwetha
November 26, 2026
0

ಬೆಂಗಳೂರು: ಮಾಸಿಕ 15 ಸಾವಿರ ರೂಪಾಯಿ ನಿಗದಿತ ಗೌರವಧನ ಸೇರಿದಂತೆ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 9 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೀದಿಗಿಳಿದು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram