ADVERTISEMENT
Sunday, November 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಚುನಾವಣೆಯಲ್ಲಿ ಸೋತಾಗ ಮಾತ್ರ ಕಾಂಗ್ರೆಸ್‌ಗೆ ಇವಿಎಂ ಸರಿ ಇಲ್ಲ, ಗೆದ್ದಾಗ ಎಲ್ಲವೂ ಸರಿ: ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯ

admin by admin
November 1, 2026
in Newsbeat, State, ರಾಜ್ಯ
r-ashoka-evm-congress-election-defeat-sir-voter-list-rahul-gandhi-hubballi

r-ashoka-evm-congress-election-defeat-sir-voter-list-rahul-gandhi-hubballi

Share on FacebookShare on TwitterShare on WhatsappShare on Telegram

59ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಸೋತರೂ ಜನಾದೇಶ ಒಪ್ಪಿಕೊಳ್ಳದ ಕಾಂಗ್ರೆಸ್, ರಾಹುಲ್ ಗಾಂಧಿ ನಾಯಕತ್ವ ಬದಲಿಸದಿದ್ದರೆ ಪಕ್ಷಕ್ಕೆ ಭವಿಷ್ಯವಿಲ್ಲ

ಹುಬ್ಬಳ್ಳಿ, ಅಕ್ಟೋಬರ್‌ 31

Related posts

r-ashoka-karnataka-congress-government-financial-crisis-empty-treasury-development-farmers-milk-price-hike

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಖಜಾನೆ ಖಾಲಿ, ಸರ್ಕಾರವೇ ದಿವಾಳಿಯಾಗಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ

November 1, 2026
india-no-place-for-anarchy-threats-congress-bjp-political-controversy-narendra-modi

ಅರಾಜಕತೆ ಸೃಷ್ಟಿಸುವ ಬೆದರಿಕೆಗಳಿಗೆ ಭಾರತದಲ್ಲಿ ಅವಕಾಶವಿಲ್ಲ –  ಆರ್‌.ಅಶೋಕ

November 1, 2026

ಚುನಾವಣೆಯಲ್ಲಿ ಸೋತಾಗ ಕಾಂಗ್ರೆಸ್ ನಾಯಕರಿಗೆ ಇವಿಎಂ ಸರಿ ಇಲ್ಲ ಎಂದು ನೆನಪಾಗುತ್ತದೆ. ಗೆದ್ದಾಗ ಎಲ್ಲವೂ ಸರಿ ಇರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯವಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ಭಾರತೀಯ ಜನತಾ ಪಕ್ಷವು ದೇಶಾದ್ಯಂತ ಪ್ರಜಾಪ್ರಭುತ್ವದ ರಕ್ಷಣೆ, ಸಂವಿಧಾನದ ಆಶಯಗಳ ಪಾಲನೆ ಹಾಗೂ ದೇಶದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡುವ ಉದ್ದೇಶದಿಂದ ಜನಜಾಗೃತಿ ಅಭಿಯಾನ ನಡೆಸುತ್ತಿದೆ. ಆದರೆ ಕಾಂಗ್ರೆಸ್‌ ಪಕ್ಷ ಚುನಾವಣೆಯಲ್ಲಿ ಗೆದ್ದಾಗ ಪ್ರಜಾಪ್ರಭುತ್ವಕ್ಕೆ ಯಾವುದೇ ಅಪಾಯವಿರುವುದಿಲ್ಲ, ಸೋತಾಗ ಮಾತ್ರ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಬಿಂಬಿಸುವ ದ್ವಂದ್ವ ನೀತಿ ಅನುಸರಿಸುತ್ತಿದೆ. 2014ರಿಂದ 2025ರವರೆಗೆ 59ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಸೋತಿರುವ ಕಾಂಗ್ರೆಸ್‌ಗೆ ಜನರ ತೀರ್ಪನ್ನು ಒಪ್ಪಿಕೊಳ್ಳುವ ಮನಸ್ಥಿತಿಯೇ ಇಲ್ಲ. ಚುನಾವಣೆಯಲ್ಲಿ ಸೋಲಲು ಚುನಾವಣಾ ಆಯೋಗವಾಗಲಿ, ಮತದಾರರ ಪಟ್ಟಿಯಾಗಲಿ ಕಾರಣವಲ್ಲ; ರಾಹುಲ್‌ ಗಾಂಧಿಯವರ ನಾಯಕತ್ವದ ಮೇಲಿನ ಜನರ ವಿಶ್ವಾಸದ ಕೊರತೆಯೇ ಪ್ರಮುಖ ಕಾರಣ ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿರುವ ಕರ್ನಾಟಕ, ತೆಲಂಗಾಣ, ಹಿಮಾಚಲ ಪ್ರದೇಶ ಹಾಗೂ ಇತರ ರಾಜ್ಯಗಳಲ್ಲಿ ಚುನಾವಣೆ ನ್ಯಾಯಯುತವಾಗಿ ನಡೆದಿರುತ್ತದೆ. ಅಲ್ಲಿ ಜನಾದೇಶವನ್ನು ಒಪ್ಪಿಕೊಳ್ಳುತ್ತಾರೆ. ಆದರೆ ಬೇರೆ ರಾಜ್ಯಗಳಲ್ಲಿ ಸೋತಾಗ ಮಾತ್ರ ಚುನಾವಣಾ ಪ್ರಕ್ರಿಯೆ, ಮತದಾರರ ಪಟ್ಟಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡುತ್ತಾರೆ. ಎಸ್‌ಐಆರ್‌ ಪ್ರಕ್ರಿಯೆ ಆರಂಭವಾಗುವುದಕ್ಕೂ ಮುನ್ನವೇ ಕಾಂಗ್ರೆಸ್‌ 59ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಸೋತಿದೆ. ಎಸ್‌ಐಆರ್‌ ಬಂದ ನಂತರ ಸೋಲಿಗೆ ಅದನ್ನು ಕಾರಣವನ್ನಾಗಿ ಮಾಡುವುದು ಹಾಸ್ಯಾಸ್ಪದ. ಜನರು ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ. ರಾಹುಲ್‌ ಗಾಂಧಿಯವರ ಮುಖ ನೋಡಿಕೊಂಡು ಮತ ಹಾಕುವ ಪರಿಸ್ಥಿತಿಯಲ್ಲಿ ಇಂದು ಜನರಿಲ್ಲ. ನಾಯಕತ್ವ ಬದಲಾವಣೆ ಮಾಡದಿದ್ದರೆ ಕಾಂಗ್ರೆಸ್‌ಗೆ ಗೆಲುವು ಸಾಧ್ಯವಿಲ್ಲ ಎಂದರು.

ಎಸ್‌ಐಆರ್‌ ವಿರುದ್ಧ ಕಾಂಗ್ರೆಸ್‌ನ ಸುಳ್ಳು ಆರೋಪ

ಎಸ್‌ಐಆರ್‌ ವಿಚಾರದಲ್ಲಿ ಕಾಂಗ್ರೆಸ್‌ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಎಷ್ಟು ಮತಗಳನ್ನು ಅಕ್ರಮವಾಗಿ ತೆಗೆದುಹಾಕಲಾಗಿದೆ ಎಂಬುದಕ್ಕೆ ಯಾವುದೇ ಸ್ಪಷ್ಟ ಅಂಕಿ-ಅಂಶಗಳಿಲ್ಲ. ಕರ್ನಾಟಕದಲ್ಲಿ ನನ್ನ ಮತದಾನದ ಹಕ್ಕು ಕಳೆದುಹೋಗಿದೆ ಎಂದು ಎಷ್ಟು ಮಂದಿ ಅಧಿಕೃತವಾಗಿ ಮೇಲ್ಮನವಿ ಸಲ್ಲಿಸಿದ್ದಾರೆ? ಅಂತಹ ದೂರು ನೀಡಿದವರು ಯಾರು? ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟುಹೋಗಿದ್ದರೆ ಅಥವಾ ಯಾವುದೇ ತಿದ್ದುಪಡಿ ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲು ಈಗಲೂ ಅವಕಾಶವಿದೆ. ಆದರೆ ಕಾಂಗ್ರೆಸ್‌ ಪಕ್ಷ ಯಾವುದೇ ಆಧಾರವಿಲ್ಲದೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ.

ಎಸ್‌ಐಆರ್‌ ಪ್ರಕ್ರಿಯೆ ಮೂಲಕ ಮೃತ ಮತದಾರರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿರುವವರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ ಅವರೂ ಮತದಾರರ ಪಟ್ಟಿಯಲ್ಲಿರುವ ಇಂತಹ ಸಮಸ್ಯೆಗಳ ಬಗ್ಗೆ ಮಾತನಾಡಿದ್ದಾರೆ. ದೇಶದಲ್ಲಿ ಮೃತಪಟ್ಟವರ ಸಂಖ್ಯೆ ದೊಡ್ಡದಿದೆ. ಇಂತಹ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವುದು ಸಹಜ ಪ್ರಕ್ರಿಯೆ. ನಕಲಿ ಹಾಗೂ ದ್ವಿಮತದಾರರನ್ನು ಗುರುತಿಸಿ ತೆಗೆದುಹಾಕುವುದರಲ್ಲಿ ತಪ್ಪೇನಿದೆ? ಸತ್ತವರ ಹೆಸರುಗಳನ್ನು ಪಟ್ಟಿಯಲ್ಲಿ ಹಾಗೆಯೇ ಉಳಿಸಬೇಕೇ? ನಕಲಿ ಮತದಾರರಿಗೆ ಅವಕಾಶ ನೀಡಬೇಕೇ ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿಯೂ ಸುಮಾರು 24 ಲಕ್ಷದ 17 ಸಾವಿರ ಮೃತಪಟ್ಟ ಮತದಾರರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಸುಮಾರು 7.14 ಲಕ್ಷ ನಕಲಿ ಮತದಾರರ ನೋಂದಣಿಗಳನ್ನು ಪತ್ತೆಹಚ್ಚಿ ತೆಗೆದುಹಾಕಲಾಗಿದೆ. ಇಂತಹ ಕ್ರಮಗಳನ್ನು ಸ್ವಾಗತಿಸಬೇಕೇ ಹೊರತು ವಿರೋಧಿಸುವುದಲ್ಲ. ಭಾರತದ ರಾಷ್ಟ್ರಪತಿಗೂ ಒಂದು ಮತ, ಸಾಮಾನ್ಯ ಪ್ರಜೆಗೂ ಒಂದು ಮತ ಎಂಬುದು ಸಂವಿಧಾನದ ಆಶಯ. ಒಬ್ಬ ವ್ಯಕ್ತಿಗೆ ಎರಡು ಕಡೆ ಮತದಾನದ ಹಕ್ಕು ಇರಬಾರದು. ಈ ಅಕ್ರಮಗಳನ್ನು ತಡೆಯುವುದಕ್ಕಾಗಿಯೇ ಎಸ್‌ಐಆರ್‌ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಬೆಂಗಳೂರಿನ ಮತದಾರರ ಪಟ್ಟಿಯಲ್ಲಿ ಸಮಸ್ಯೆ

ಬೆಂಗಳೂರು ನಗರದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಮತದಾನದ ಪ್ರಮಾಣ ಸರಾಸರಿ ಶೇ.45ರಿಂದ 48ರ ಗಡಿಯನ್ನು ದಾಟಿಲ್ಲ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಶೇ.80ರಿಂದ 90ರಷ್ಟು ಮತದಾನವಾಗುತ್ತದೆ. ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಕಡಿಮೆ ಇರುವುದಕ್ಕೆ ಹಲವು ಕಾರಣಗಳಿವೆ ಎಂದು ಈ ಹಿಂದೆ ಹೇಳಲಾಗುತ್ತಿತ್ತು. ಈಗ ಮತದಾರರ ಪಟ್ಟಿಯಲ್ಲಿದ್ದ ಲೋಪಗಳೂ ಬೆಳಕಿಗೆ ಬರುತ್ತಿವೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾರರ ಪಟ್ಟಿಯಲ್ಲಿ ಸುಮಾರು ಒಂದು ಲಕ್ಷ ಮತದಾರರಿದ್ದಾರೆ. ಬೆಂಗಳೂರಿನಲ್ಲಿ ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಸೇರಿದಂತೆ ವಿವಿಧ ರಾಜ್ಯಗಳಿಂದ ಬಂದು ನೆಲೆಸಿರುವ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ ಅನೇಕರು ತಮ್ಮ ಸ್ವಂತ ಊರುಗಳಲ್ಲಿ ಮತದಾನದ ಹಕ್ಕನ್ನು ಉಳಿಸಿಕೊಂಡು, ಬೆಂಗಳೂರಿನಲ್ಲಿಯೂ ಹೆಸರು ಹೊಂದಿರುವ ಸಾಧ್ಯತೆಯಿದೆ. ಕೆಲವರು ತಮ್ಮ ಸ್ವಂತ ಊರನ್ನೇ ಮತದಾನದ ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿರುತ್ತಾರೆ. ಇಂತಹ ಸಂದರ್ಭಗಳಲ್ಲಿ ಅನಗತ್ಯ ಹೆಸರುಗಳನ್ನು ತೆಗೆದುಹಾಕುವುದು ತಪ್ಪೇ? ಒಬ್ಬ ವ್ಯಕ್ತಿಗೆ ಒಂದೇ ಮತ ಇರಬೇಕು ಎಂಬ ಸಂವಿಧಾನದ ಆಶಯವನ್ನು ಜಾರಿಗೊಳಿಸುವುದು ಚುನಾವಣಾ ಆಯೋಗದ ಕರ್ತವ್ಯ ಎಂದರು.

ಬ್ಯಾಲೆಟ್‌ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಸೋಲು

ಇತ್ತೀಚೆಗೆ ನಡೆದ ವಿಧಾನಪರಿಷತ್‌ ಚುನಾವಣೆಗಳಲ್ಲಿ ಎನ್‌ಡಿಎ ನಾಲ್ಕೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಚುನಾವಣೆಗಳು ಬ್ಯಾಲೆಟ್‌ ಪೇಪರ್‌ ಮೂಲಕ ನಡೆದಿವೆ. ಒಂದು ವೇಳೆ ಕಾಂಗ್ರೆಸ್‌ ಹೇಳುವಂತೆ ಇವಿಎಂನಲ್ಲಿ ಅಕ್ರಮಗಳಾಗುತ್ತಿದ್ದರೆ, ಬ್ಯಾಲೆಟ್‌ ಮೂಲಕ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಬೇಕಿತ್ತಲ್ಲವೇ? ಈ ಚುನಾವಣೆಗಳಲ್ಲಿ ಎರಡು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ, ಉಳಿದ ಎರಡು ಸ್ಥಾನಗಳನ್ನು ಬಿಜೆಪಿಯವರು ಗೆಲ್ಲಲಿ ಎಂದು ಕಾಂಗ್ರೆಸ್‌ ನಾಯಕರೇ ಮೊದಲೇ ಹೇಳಿದ್ದರು. ಈಗ ಫಲಿತಾಂಶ ಬಂದ ಮೇಲೆ ಏನು ಹೇಳುತ್ತಾರೆ? ಬ್ಯಾಲೆಟ್‌ ಪೇಪರ್‌ನಲ್ಲಿಯೂ ಕಾಂಗ್ರೆಸ್‌ಗೆ ಸೋಲಾಗಿದೆ. ಕಾಂಗ್ರೆಸ್‌ಗೆ ಈಗ ಬ್ಯಾಲೆಟ್‌ನಲ್ಲೇ ಬಲವಾದ ಏಟು ಬಿದ್ದಿದೆ ಎಂದು ವ್ಯಂಗ್ಯವಾಡಿದರು.

ಚುನಾವಣೆಯಲ್ಲಿ ಸೋತಾಗ ಮಾತ್ರ ಇವಿಎಂ ಸರಿಯಿಲ್ಲ, ಎಸ್‌ಐಆರ್‌ ಸರಿಯಿಲ್ಲ, ಮತದಾರರ ಪಟ್ಟಿ ಸರಿಯಿಲ್ಲ ಎಂಬ ಆರೋಪ ಮಾಡುವುದು ಕಾಂಗ್ರೆಸ್‌ನ ಚಾಳಿಯಾಗಿದೆ. ಗೆದ್ದಾಗ ಎಲ್ಲವೂ ಸರಿಯಾಗಿರುತ್ತದೆ. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯನ್ನು ವಿಸರ್ಜಿಸಿ ಚುನಾವಣೆ ನಡೆಸುವಂತೆ ಸಲಹೆ ನೀಡುತ್ತಿದ್ದಾರೆ. ನಮಗೆ ಸಲಹೆ ನೀಡುವ ಮೊದಲು ಕಾಂಗ್ರೆಸ್‌ ಆಡಳಿತವಿರುವ ನಾಲ್ಕು ರಾಜ್ಯಗಳ ವಿಧಾನಸಭೆಗಳನ್ನು ವಿಸರ್ಜಿಸಿ ಚುನಾವಣೆ ಎದುರಿಸಲಿ. ಅಲ್ಲಿ ಗೆದ್ದು ತೋರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿಯವರಿಗೆ ಚುನಾವಣೆ ನಡೆಸುವಂತೆ ಸಲಹೆ ನೀಡಲಿ. ಗೆದ್ದಾಗ ಚುನಾವಣೆ ಬೇಡ, ಸೋತಾಗ ಮಾತ್ರ ಚುನಾವಣಾ ವ್ಯವಸ್ಥೆ ಸರಿಯಿಲ್ಲ ಎನ್ನುವುದು ಯಾವ ನ್ಯಾಯ ಎಂದು ಪ್ರಶ್ನೆ ಮಾಡಿದರು.

ShareTweetSendShare
Join us on:

Related Posts

r-ashoka-karnataka-congress-government-financial-crisis-empty-treasury-development-farmers-milk-price-hike

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಖಜಾನೆ ಖಾಲಿ, ಸರ್ಕಾರವೇ ದಿವಾಳಿಯಾಗಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ

by admin
November 1, 2026
0

  ಚಿತ್ರದುರ್ಗ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಏನೋ ದೊಡ್ಡ ಮ್ಯಾಜಿಕ್ ಮಾಡಲಿದೆ ಎಂದು ವ್ಯಾಪಕ ಪ್ರಚಾರ ಮಾಡಲಾಗಿತ್ತು. ಆದರೆ ಇಂದು ಸರ್ಕಾರದ ಪರಿಸ್ಥಿತಿ ನೋಡಿದರೆ ಅದು...

india-no-place-for-anarchy-threats-congress-bjp-political-controversy-narendra-modi

ಅರಾಜಕತೆ ಸೃಷ್ಟಿಸುವ ಬೆದರಿಕೆಗಳಿಗೆ ಭಾರತದಲ್ಲಿ ಅವಕಾಶವಿಲ್ಲ –  ಆರ್‌.ಅಶೋಕ

by admin
November 1, 2026
0

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಬಿಜೆಪಿ ಕೂಡ ಹೋರಾಟಗಳನ್ನು ನಡೆಸಿದೆ. ಕಾಂಗ್ರೆಸ್‌ ಕೂಡ ಹೋರಾಟ ಮಾಡಬಹುದು. ಆದರೆ ನೇಪಾಳ ಮತ್ತು ಬಾಂಗ್ಲಾದೇಶದ ಮಾದರಿಯಲ್ಲಿ ದೊಂಬಿ, ಗಲಭೆಗಳನ್ನು...

r-ashoka-31-lakh-voter-id-cards-printing-20-crore-scam-allegation-gba-election

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಾಂಗ್ರೆಸ್‌ಗೆ ನಂಬಿಕೆಯಿಲ್ಲ- ಆರ್‌.ಅಶೋಕ

by admin
November 1, 2026
0

  ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ನವೆಂಬರ್‌ 1ರಂದು ಪ್ರತಿಭಟನೆ ನಡೆಸುವ ವಿಚಾರದಲ್ಲಿಯೂ ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ನಿರ್ದಿಷ್ಟ...

neeta-mukesh-ambani-anant-aashray-township-100-acres-karjat-5000-beneficiaries

100 ಎಕರೆಯಲ್ಲಿ ತಲೆ ಎತ್ತಲಿದೆ `ನೀತಾ ಮುಕೇಶ್ ಅಂಬಾನಿ ಅನಂತ್ ಆಶ್ರಯ ಟೌನ್ ಶಿಪ್

by admin
November 1, 2026
0

* ರಿಲಯನ್ಸ್ ಪ್ರತಿಷ್ಠಾನದ ವಿನೂತನ ಮಾನವೀಯ ಉಪಕ್ರಮ * 5 ಸಾವಿರ ಅನಾಥರು, ವೃದ್ಧರು, ವಿಕಲಚೇತನರಿಗೆ ಶಾಶ್ವತ ಆಸರೆ * ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನೀತಾ ಅಂಬಾನಿ...

aashirvaad-smart-india-iodine-awareness-campaign-13-lakh-women-south-india

ಉಪ್ಪಿನಲ್ಲಿದೆ ಆರೋಗ್ಯದ ಗುಟ್ಟು: ಕರ್ನಾಟಕ ಸೇರಿ ದಕ್ಷಿಣ ಭಾರತದ 3 ರಾಜ್ಯಗಳ 13 ಲಕ್ಷ ಮಹಿಳೆಯರಿಗೆ ಅಯೋಡಿನ್ ಪಾಠ

by admin
November 1, 2026
0

ಬೆಂಗಳೂರು: ಅಯೋಡಿನ್ ನಮ್ಮ ದೇಹಕ್ಕೆ ಅಗತ್ಯ ಎಂದು ತಿಳಿದಿರುವುದು ಒಂದು ವಿಚಾರವಾದರೆ, ಸೂಕ್ತ ಪ್ರಮಾಣದ ಅಯೋಡಿನ್ ಇರುವ ಉಪ್ಪನ್ನು ಗುರುತಿಸುವುದು, ಅದನ್ನು ಸರಿಯಾಗಿ ಶೇಖರಿಸಿಡುವುದು ಹಾಗೂ ಅಡುಗೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram