ADVERTISEMENT
Sunday, November 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಖಜಾನೆ ಖಾಲಿ, ಸರ್ಕಾರವೇ ದಿವಾಳಿಯಾಗಿದೆ: ಪ್ರತಿಪಕ್ಷ ನಾಯಕ ಆರ್. ಅಶೋಕ

admin by admin
November 1, 2026
in Newsbeat, State, ರಾಜ್ಯ
r-ashoka-karnataka-congress-government-financial-crisis-empty-treasury-development-farmers-milk-price-hike

r-ashoka-karnataka-congress-government-financial-crisis-empty-treasury-development-farmers-milk-price-hike

Share on FacebookShare on TwitterShare on WhatsappShare on Telegram

 

ಚಿತ್ರದುರ್ಗ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಏನೋ ದೊಡ್ಡ ಮ್ಯಾಜಿಕ್ ಮಾಡಲಿದೆ ಎಂದು ವ್ಯಾಪಕ ಪ್ರಚಾರ ಮಾಡಲಾಗಿತ್ತು. ಆದರೆ ಇಂದು ಸರ್ಕಾರದ ಪರಿಸ್ಥಿತಿ ನೋಡಿದರೆ ಅದು ಟುಸ್ ಪಟಾಕಿಯಂತಾಗಿದೆ. ಸರ್ಕಾರದ ಬಳಿ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ಓಡಿಸಲು ಡೀಸೆಲ್ ಖರೀದಿಸಲೂ ಹಣವಿಲ್ಲ. ಕಬ್ಬು ಬೆಳೆಗಾರರು ಹೋರಾಟ ನಡೆಸುತ್ತಿದ್ದರೆ ಪರಿಹಾರ ನೀಡಲು ಖಜಾನೆಯಲ್ಲಿ ಹಣವಿಲ್ಲ ಎಂದು ಸರ್ಕಾರ ಹೇಳುತ್ತಿದೆ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದ್ದು, ಸರ್ಕಾರ ನಡೆಸುವ ಸಾಮರ್ಥ್ಯವನ್ನೇ ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.

Related posts

r-ashoka-evm-congress-election-defeat-sir-voter-list-rahul-gandhi-hubballi

ಚುನಾವಣೆಯಲ್ಲಿ ಸೋತಾಗ ಮಾತ್ರ ಕಾಂಗ್ರೆಸ್‌ಗೆ ಇವಿಎಂ ಸರಿ ಇಲ್ಲ, ಗೆದ್ದಾಗ ಎಲ್ಲವೂ ಸರಿ: ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯ

November 1, 2026
india-no-place-for-anarchy-threats-congress-bjp-political-controversy-narendra-modi

ಅರಾಜಕತೆ ಸೃಷ್ಟಿಸುವ ಬೆದರಿಕೆಗಳಿಗೆ ಭಾರತದಲ್ಲಿ ಅವಕಾಶವಿಲ್ಲ –  ಆರ್‌.ಅಶೋಕ

November 1, 2026

ಚಿತ್ರದುರ್ಗದ ಐಬಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣಕಾಸು ಇಲಾಖೆಯ ಬಳಿ ಹಣವಿಲ್ಲ, ಸಾಲ ಪಡೆಯಲು ಹೋದರೂ ಬ್ಯಾಂಕ್‌ಗಳು ಸಾಲ ನೀಡುವ ಪರಿಸ್ಥಿತಿಯಿಲ್ಲ ಎಂದು ಸರ್ಕಾರವೇ ಒಪ್ಪಿಕೊಂಡಿದೆ. ಕಳೆದ ವಿಧಾನಸಭಾ ಅಧಿವೇಶನದಲ್ಲಿಯೇ ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಪ್ರಸ್ತಾಪಿಸಿದ್ದೆ. ಸರ್ಕಾರದ ಖಜಾನೆ ಖಾಲಿಯಾಗಿದೆ ಎಂಬುದು ಸ್ಪಷ್ಟವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಯಾವ ಪುರುಷಾರ್ಥಕ್ಕಾಗಿ ಸರ್ಕಾರ ಅಧಿಕಾರದಲ್ಲಿ ಮುಂದುವರಿಯುತ್ತಿದೆ ಎಂದು ಪ್ರಶ್ನಿಸಿದರು.

ಅಭಿವೃದ್ಧಿ ಕುಂಠಿತ, ರೈತರ ಪಾಲಿಗೆ ಸತ್ತ ಸರ್ಕಾರ

ರಾಜ್ಯದಲ್ಲಿ ರಸ್ತೆಗಳ ಪರಿಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಸ್ತೆಗಳ ಮೇಲೆ ಓಡಾಡುವುದೇ ಕಷ್ಟವಾಗಿದೆ. ಎಲ್ಲೆಡೆ ಹಳ್ಳಗಳು ಬಿದ್ದಿವೆ. ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಹಲವು ತಿಂಗಳುಗಳಾದರೂ ಯಾವುದೇ ಮಹತ್ವದ ಯೋಜನೆಗಳಿಗೆ ವೇಗ ನೀಡಿಲ್ಲ. ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ. ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ರೈತರ ಪಾಲಿಗೆ ಈ ಸರ್ಕಾರ ಸತ್ತಂತಾಗಿದೆ ಎಂದರು.

ಕಬ್ಬು ಬೆಳೆಗಾರರು ನ್ಯಾಯಯುತ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸುತ್ತಿದ್ದಾರೆ. ರೈತರಿಗೆ ಪರಿಹಾರ ನೀಡಬೇಕಾದ ಸರ್ಕಾರ ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳುತ್ತಿದೆ. ಬರಗಾಲದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ₹25,000 ಪರಿಹಾರ ನೀಡಬೇಕೆಂದು ನಾವು ಒತ್ತಾಯಿಸಿದ್ದೆವು. ಆದರೆ ಸರ್ಕಾರ ಪ್ರತಿ ರೈತ ಕುಟುಂಬಕ್ಕೆ ಕೇವಲ ₹2,500 ಪರಿಹಾರ ಘೋಷಿಸಿ, ಅದನ್ನು ನೀಡಲು ಬರೋಬ್ಬರಿ 17 ನಿಬಂಧನೆಗಳನ್ನು ವಿಧಿಸಿದೆ. ಅಲ್ಪ ಮೊತ್ತದ ಪರಿಹಾರ ನೀಡುವುದಕ್ಕೂ ಇಷ್ಟೊಂದು ಷರತ್ತು ವಿಧಿಸುವ ಸರ್ಕಾರಕ್ಕೆ ಮಾನ, ಮರ್ಯಾದೆ ಇದೆಯೇ? ರೈತರಿಗೆ ನೆರವಾಗುವ ಬದಲು ಅವರನ್ನು ಸಂಕಷ್ಟಕ್ಕೆ ದೂಡುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎಲ್ಲೆಡೆ ಭ್ರಷ್ಟಾಚಾರ, ಲೂಟಿ

ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗಿಂತ ಭ್ರಷ್ಟಾಚಾರ ಮತ್ತು ಲೂಟಿಯೇ ಹೆಚ್ಚಾಗಿದೆ. ಬಳ್ಳಾರಿಯಲ್ಲಿ ಸಚಿವರಾಗಿದ್ದ ನಾಗೇಂದ್ರ ಅವರ ವಿರುದ್ಧದ ಅಕ್ರಮ, ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರದ ಆರೋಪಗಳು ಹಾಗೂ ಬೆಂಗಳೂರಿನ ಕಸ ವಿಲೇವಾರಿ ವಿಚಾರದಲ್ಲಿನ ಅವ್ಯವಹಾರ ಸರ್ಕಾರದ ಆಡಳಿತ ವೈಖರಿಯನ್ನು ಬಯಲು ಮಾಡಿವೆ. ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಸರ್ಕಾರ ಒಳಜಗಳ ಮತ್ತು ಅಧಿಕಾರದ ಕಿತ್ತಾಟದಲ್ಲಿ ಮುಳುಗಿದೆ. ರಾಜ್ಯದ ಅಭಿವೃದ್ಧಿಯ ಬಗ್ಗೆ ಯಾರಿಗೂ ಕಾಳಜಿಯಿಲ್ಲ ಎಂದರು.

ಸರ್ಕಾರದಲ್ಲಿ ಒಗ್ಗಟ್ಟಿಲ್ಲ, ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ

ಕಾಂಗ್ರೆಸ್ ಸರ್ಕಾರದಲ್ಲಿ ಗೊಂದಲ ಮತ್ತು ಭಿನ್ನಮತ ಮಿತಿಮೀರಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಿಡಿ ವಿಚಾರ ಹೊರಬಂದ ನಂತರ ಕಳೆದ ಒಂದು ತಿಂಗಳಿನಿಂದ ರಾಜ್ಯದಲ್ಲಿ ಇದೇ ಚರ್ಚೆಯಾಗುತ್ತಿದೆ. ಪ್ರಕರಣದ ಹಿಂದೆ ಯಾರಿದ್ದಾರೆ, ಯಾರು ಇದನ್ನು ಸಿದ್ಧಪಡಿಸಿದ್ದಾರೆ, ಯಾರು ಹಂಚಿದ್ದಾರೆ ಎಂಬುದನ್ನು ಪತ್ತೆಹಚ್ಚುವ ಸಮಗ್ರ ತನಿಖೆ ನಡೆಯಬೇಕು. ಆದರೆ ತನಿಖೆ ಪೂರ್ಣಗೊಳ್ಳುವ ಮೊದಲೇ ಪ್ರಕರಣವನ್ನು ಮುಚ್ಚಿಹಾಕುವ ಮತ್ತು ಕ್ಲೀನ್ ಚಿಟ್ ನೀಡುವ ಪ್ರಯತ್ನ ಏಕೆ ನಡೆಯುತ್ತಿದೆ? ಇದರ ಹಿಂದಿರುವವರನ್ನು ಪತ್ತೆಹಚ್ಚುವುದು ಸರ್ಕಾರದ ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದರು.

ಈ ಪ್ರಕರಣದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆಯಾಗಿದೆ. ಅವರನ್ನು ಮನೆಯಿಂದ ಹೊರಬರಲಾಗದ ಪರಿಸ್ಥಿತಿಗೆ ತಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ಶಾಸಕರಲ್ಲೇ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನವಿದೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಹಣ ಬಿಡುಗಡೆಯಾಗುತ್ತಿಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಒಂದು ನಯಾಪೈಸೆಯನ್ನೂ ನೀಡಿಲ್ಲ ಎಂದು ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಅವರು ತಮ್ಮ ನಿಲುವಿನಲ್ಲಿ ಗಟ್ಟಿಯಾಗಿ ನಿಂತಿದ್ದರೆ, ಮತ್ತೊಂದೆಡೆ ಡಿ.ಕೆ. ಶಿವಕುಮಾರ್ ಅವರ ಬಣದ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಸರ್ಕಾರದಲ್ಲಿ ಒಗ್ಗಟ್ಟಿಲ್ಲ, ಸಮನ್ವಯವಿಲ್ಲ. ಇದೇ ಪರಿಸ್ಥಿತಿ ಮುಂದುವರಿದರೆ ಮೂರನೇ ಮುಖ್ಯಮಂತ್ರಿ ಬಂದರೂ ಆಶ್ಚರ್ಯಪಡಬೇಕಿಲ್ಲ ಎಂದು ಹೇಳಿದರು.

ಹಾಲಿನ ದರ ₹8 ಏರಿಕೆ, ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ

ಕಾಂಗ್ರೆಸ್ ಸರ್ಕಾರ ತನ್ನ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ₹7 ಪ್ರೋತ್ಸಾಹಧನ ನೀಡುವುದಾಗಿ ಭರವಸೆ ನೀಡಿತ್ತು. ಆ ಭರವಸೆಯನ್ನು ಸಮರ್ಪಕವಾಗಿ ಈಡೇರಿಸಿದ್ದರೆ ಇಂದಿನ ಸಮಸ್ಯೆ ಉದ್ಭವಿಸುತ್ತಿರಲಿಲ್ಲ. ಆದರೆ ರೈತರಿಗೆ ನೀಡಬೇಕಾದ ಪ್ರೋತ್ಸಾಹಧನವನ್ನು ನೀಡದೆ, ಅದರ ಹೊರೆಯನ್ನು ಜನಸಾಮಾನ್ಯರ ಮೇಲೆ ವರ್ಗಾಯಿಸಲಾಗುತ್ತಿದೆ. ಹಾಲಿನ ದರವನ್ನು ಏಕಾಏಕಿ ₹8 ಹೆಚ್ಚಿಸಲಾಗಿದೆ. ಇದರಿಂದ ಕಾಫಿ, ಟೀ, ಮೊಸರು ಸೇರಿದಂತೆ ಹಾಲಿನ ಉತ್ಪನ್ನಗಳ ಬೆಲೆಯೂ ಹೆಚ್ಚಾಗಲಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮತ್ತಷ್ಟು ಆರ್ಥಿಕ ಹೊರೆ ಬೀಳಲಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಲವು ಬಾರಿ ಹಾಲಿನ ದರ ಏರಿಕೆ ಮಾಡಿದೆ. ಸಿದ್ದರಾಮಯ್ಯ ಅವರ ಅವಧಿಯಲ್ಲಿ ₹2, ₹3ರಷ್ಟು ಏರಿಕೆ ಮಾಡಲಾಗಿತ್ತು. ಈಗ ಡಿ.ಕೆ. ಶಿವಕುಮಾರ್ ಅವರ ಅವಧಿಯಲ್ಲಿ ಏಕಾಏಕಿ ₹8 ಹೆಚ್ಚಿಸಲಾಗಿದೆ. ಜನರಿಗೆ ನೀಡಬೇಕಾದ ಸಬ್ಸಿಡಿಯನ್ನು ನೀಡದೆ, ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಸರ್ಕಾರವೇ ಭರವಸೆ ನೀಡಿದ ₹7 ಪ್ರೋತ್ಸಾಹಧನವನ್ನು ನೀಡಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ. ಜನರ ಮೇಲೆ ತೆರಿಗೆ ಮತ್ತು ಬೆಲೆ ಏರಿಕೆಯ ಹೊರೆ ಹಾಕುತ್ತಿರುವ ಸರ್ಕಾರದ ವಿರುದ್ಧ ಜನರು ಆಕ್ರೋಶಗೊಂಡಿದ್ದಾರೆ ಎಂದರು.

ಆರ್ಥಿಕವಾಗಿ ದಿವಾಳಿಯಾದ ಸರ್ಕಾರ, ನೌಕರರಿಗೆ ಸಂಬಳ ನೀಡುವುದೂ ಕಷ್ಟವಾಗಬಹುದು

ರಾಜ್ಯದ ಆರ್ಥಿಕ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಸರ್ಕಾರ ಈಗಾಗಲೇ ಆರ್ಥಿಕವಾಗಿ ದಿವಾಳಿಯಾಗಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಸರ್ಕಾರಿ ನೌಕರರಿಗೆ ವೇತನ ನೀಡುವುದಕ್ಕೂ ಹಣದ ಕೊರತೆ ಎದುರಾಗಬಹುದು. ಗ್ಯಾರಂಟಿಗಳ ಹೆಸರಿನಲ್ಲಿ ಪ್ರಚಾರ ನಡೆಸುತ್ತಿರುವ ಸರ್ಕಾರ ಮತ್ತೊಂದೆಡೆ ಬೆಲೆ ಏರಿಕೆ ಮತ್ತು ತೆರಿಗೆಗಳ ಮೂಲಕ ಜನರ ಮೇಲೆ ಹೊರೆ ಹಾಕುತ್ತಿದೆ. ಈ ಸರ್ಕಾರ ಹೆಚ್ಚು ದಿನ ಅಧಿಕಾರದಲ್ಲಿ ಮುಂದುವರಿಯುವ ಪರಿಸ್ಥಿತಿ ಕಾಣುತ್ತಿಲ್ಲ ಎಂದು ಹೇಳಿದರು.

ಎಸ್‌ಐಆರ್ ಮತ್ತು ಇವಿಎಂ ವಿಚಾರದಲ್ಲಿ ಕಾಂಗ್ರೆಸ್‌ನ ದ್ವಂದ್ವ ನಿಲುವು

ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಿರುವುದನ್ನು ಕಾಂಗ್ರೆಸ್ ಪಕ್ಷಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಎಸ್‌ಐಆರ್ ಪ್ರಕ್ರಿಯೆಯನ್ನೇ ವಿವಾದವನ್ನಾಗಿ ಮಾಡಲು ಪ್ರಯತ್ನಿಸುತ್ತಿದೆ. ರಾಜ್ಯದಲ್ಲಿ ಎಸ್‌ಐಆರ್ ಪ್ರಕ್ರಿಯೆ ಸರಿಯಾಗಿ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಪ್ರಕ್ರಿಯೆ ಸಮರ್ಪಕವಾಗಿ ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಅದನ್ನು ವಿರೋಧಿಸುತ್ತಿರುವುದೇಕೆ? ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿಲ್ಲದ ಕಾರಣ ಎಸ್‌ಐಆರ್, ಇವಿಎಂ ಹಾಗೂ ಮತದಾನ ವ್ಯವಸ್ಥೆಯ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಟೀಕಿಸಿದರು.

ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಗಳು ಬ್ಯಾಲೆಟ್ ಪೇಪರ್ ಮೂಲಕವೇ ನಡೆದಿವೆ. ಆ ಚುನಾವಣೆಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆದಾಗ ಬಿಜೆಪಿ ಗೆದ್ದಿದೆ. ಆದರೂ ಕಾಂಗ್ರೆಸ್ ನಾಯಕರು ಇವಿಎಂ ಸರಿಯಿಲ್ಲ, ಬ್ಯಾಲೆಟ್ ಪೇಪರ್ ಬೇಕು ಎಂದು ಹೇಳುತ್ತಿದ್ದಾರೆ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪ್ರಜಾಪ್ರಭುತ್ವದ ಚುನಾವಣಾ ವ್ಯವಸ್ಥೆಯನ್ನೇ ಪ್ರಶ್ನಿಸುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ದೇಶದಲ್ಲಿ ಅಸ್ತಿತ್ವ ಕಳೆದುಕೊಳ್ಳುವ ಭೀತಿಯಲ್ಲಿದೆ. ಅದಕ್ಕಾಗಿಯೇ ಒಂದಲ್ಲ ಒಂದು ವಿಚಾರವನ್ನು ಮುಂದಿಟ್ಟುಕೊಂಡು ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರ್. ಅಶೋಕ ವಾಗ್ದಾಳಿ ನಡೆಸಿದರು.

ShareTweetSendShare
Join us on:

Related Posts

r-ashoka-evm-congress-election-defeat-sir-voter-list-rahul-gandhi-hubballi

ಚುನಾವಣೆಯಲ್ಲಿ ಸೋತಾಗ ಮಾತ್ರ ಕಾಂಗ್ರೆಸ್‌ಗೆ ಇವಿಎಂ ಸರಿ ಇಲ್ಲ, ಗೆದ್ದಾಗ ಎಲ್ಲವೂ ಸರಿ: ಪ್ರತಿಪಕ್ಷ ನಾಯಕ ಆರ್.ಅಶೋಕ ವ್ಯಂಗ್ಯ

by admin
November 1, 2026
0

59ಕ್ಕೂ ಹೆಚ್ಚು ವಿಧಾನಸಭಾ ಚುನಾವಣೆಗಳಲ್ಲಿ ಸೋತರೂ ಜನಾದೇಶ ಒಪ್ಪಿಕೊಳ್ಳದ ಕಾಂಗ್ರೆಸ್, ರಾಹುಲ್ ಗಾಂಧಿ ನಾಯಕತ್ವ ಬದಲಿಸದಿದ್ದರೆ ಪಕ್ಷಕ್ಕೆ ಭವಿಷ್ಯವಿಲ್ಲ ಹುಬ್ಬಳ್ಳಿ, ಅಕ್ಟೋಬರ್‌ 31 ಚುನಾವಣೆಯಲ್ಲಿ ಸೋತಾಗ ಕಾಂಗ್ರೆಸ್...

india-no-place-for-anarchy-threats-congress-bjp-political-controversy-narendra-modi

ಅರಾಜಕತೆ ಸೃಷ್ಟಿಸುವ ಬೆದರಿಕೆಗಳಿಗೆ ಭಾರತದಲ್ಲಿ ಅವಕಾಶವಿಲ್ಲ –  ಆರ್‌.ಅಶೋಕ

by admin
November 1, 2026
0

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಬಿಜೆಪಿ ಕೂಡ ಹೋರಾಟಗಳನ್ನು ನಡೆಸಿದೆ. ಕಾಂಗ್ರೆಸ್‌ ಕೂಡ ಹೋರಾಟ ಮಾಡಬಹುದು. ಆದರೆ ನೇಪಾಳ ಮತ್ತು ಬಾಂಗ್ಲಾದೇಶದ ಮಾದರಿಯಲ್ಲಿ ದೊಂಬಿ, ಗಲಭೆಗಳನ್ನು...

r-ashoka-31-lakh-voter-id-cards-printing-20-crore-scam-allegation-gba-election

ಸಾಂವಿಧಾನಿಕ ಸಂಸ್ಥೆಗಳ ಮೇಲೆ ಕಾಂಗ್ರೆಸ್‌ಗೆ ನಂಬಿಕೆಯಿಲ್ಲ- ಆರ್‌.ಅಶೋಕ

by admin
November 1, 2026
0

  ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ನವೆಂಬರ್‌ 1ರಂದು ಪ್ರತಿಭಟನೆ ನಡೆಸುವ ವಿಚಾರದಲ್ಲಿಯೂ ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳಿಂದ ವಿರೋಧ ವ್ಯಕ್ತವಾಗುತ್ತಿದೆ. ನಿರ್ದಿಷ್ಟ...

neeta-mukesh-ambani-anant-aashray-township-100-acres-karjat-5000-beneficiaries

100 ಎಕರೆಯಲ್ಲಿ ತಲೆ ಎತ್ತಲಿದೆ `ನೀತಾ ಮುಕೇಶ್ ಅಂಬಾನಿ ಅನಂತ್ ಆಶ್ರಯ ಟೌನ್ ಶಿಪ್

by admin
November 1, 2026
0

* ರಿಲಯನ್ಸ್ ಪ್ರತಿಷ್ಠಾನದ ವಿನೂತನ ಮಾನವೀಯ ಉಪಕ್ರಮ * 5 ಸಾವಿರ ಅನಾಥರು, ವೃದ್ಧರು, ವಿಕಲಚೇತನರಿಗೆ ಶಾಶ್ವತ ಆಸರೆ * ತಮ್ಮ ಹುಟ್ಟುಹಬ್ಬದ ಪ್ರಯುಕ್ತ ನೀತಾ ಅಂಬಾನಿ...

aashirvaad-smart-india-iodine-awareness-campaign-13-lakh-women-south-india

ಉಪ್ಪಿನಲ್ಲಿದೆ ಆರೋಗ್ಯದ ಗುಟ್ಟು: ಕರ್ನಾಟಕ ಸೇರಿ ದಕ್ಷಿಣ ಭಾರತದ 3 ರಾಜ್ಯಗಳ 13 ಲಕ್ಷ ಮಹಿಳೆಯರಿಗೆ ಅಯೋಡಿನ್ ಪಾಠ

by admin
November 1, 2026
0

ಬೆಂಗಳೂರು: ಅಯೋಡಿನ್ ನಮ್ಮ ದೇಹಕ್ಕೆ ಅಗತ್ಯ ಎಂದು ತಿಳಿದಿರುವುದು ಒಂದು ವಿಚಾರವಾದರೆ, ಸೂಕ್ತ ಪ್ರಮಾಣದ ಅಯೋಡಿನ್ ಇರುವ ಉಪ್ಪನ್ನು ಗುರುತಿಸುವುದು, ಅದನ್ನು ಸರಿಯಾಗಿ ಶೇಖರಿಸಿಡುವುದು ಹಾಗೂ ಅಡುಗೆಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram