ಹರ್ಭಜನ್ ಸಿಂಗ್ ಅವರನ್ನ ಹಿಂದಿಕ್ಕಿದ ಅಶ್ವಿನ್ R Ashwin saaksha tv
ಕಾನ್ಪುರ : ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಮ್ಯಾಚ್ ನಲ್ಲಿ ಸ್ಪಿನ್ನರ್ ಅಶ್ವಿನ್ ವಿಕೆಟ್ ಬೇಟೆ ಮುಂದುವರೆದಿದೆ.
ಮೊದಲ ಟೆಸ್ಟ್ ಪಂದ್ಯದ ಕೊನೆಯ ಇನ್ನಿಂಗ್ಸ್ ನಲ್ಲಿ ಅಶ್ವಿನ್ ಮೂರು ವಿಕೆಟ್ ಪಡೆಯುವ ಮೂಲಕ ಭಾರತದ ಪರ ಹೆಚ್ಚು ವಿಕೆಟ್ ಪಡೆದ 3ನೇ ಬೌಲರ್ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ. ಅಲ್ಲದೇ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದ್ದಾರೆ.
ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನವಾದ ಇಂದು ಅಶ್ವಿನ್, ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಬ್ಯಾಟರ್ ಟಾಮ್ ಲೇಥಮ್ ವಿಕೆಟ್ ಪಡೆಯುವ ಮೂಲಕ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿದರು.
80ನೇ ಟೆಸ್ಟ್ ಪಂದ್ಯವಾಡುತ್ತಿರುವ ಅಶ್ವಿನ್ ಈವರೆಗೂ 418 ವಿಕೆಟ್ ಗಳನ್ನು ಪಡೆದಿದ್ದಾರೆ. ಹರ್ಭಜನ್ ಸಿಂಗ್ 103 ಟೆಸ್ಟ್ ಪಂದ್ಯಗಳಿಂದ 417 ವಿಕೆಟ್ ಪಡೆದಿದ್ದಾರೆ.









