ಬೆಂಗಳೂರು: ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದನ್ನು ಬಿಜೆಪಿ ಮರೆತಂತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ ಅವರ ಟೀಕೆ ಬಗ್ಗೆ ಕೇಳಿದಾಗ, “ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ” ಎಂದು ಪ್ರಶ್ನಿಸಿದರು.
ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಜೂನ್ 6 ರವರೆಗೆ ಗಡುವು ನೀಡಿರುವ ಕುರಿತು ಮಾತನಾಡಿದ ಡಿಕೆಶಿ, “ಅವರು ಅಲ್ಲಿಯವರೆಗೂ ಕಾಯುವುದೇಕೆ? ಈಗಿನಿಂದಲೇ ಹೋರಾಟ ಮಾಡಲಿ. ಅವರು ಯಾವ ವಿಚಾರಕ್ಕೆ ಬಾಯಿ ಬಿಡಬೇಕೋ ಅದರ ಬಗ್ಗೆ ಬಿಡುತ್ತಿಲ್ಲ” ಎಂದು ಛೇಡಿಸಿದರು.
ಪ್ರಕರಣದ ತನಿಖೆಯಲ್ಲಿ ವಾಸ್ತವಾಂಶ ಪರಿಶೀಲನೆ ನಡೆಯಲಿ. ನಾವು ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ” ಎಂದರು.
ಮೇಲ್ಮನೆ ಚುನಾವಣೆಯ ಹಿನ್ನೆಲೆಯಲ್ಲಿ ನಾನು ಹಾಗೂ ಸಿಎಂ ಹೈಕಮಾಂಡ್ ಗೆ ಪಟ್ಟಿ ಕೊಟ್ಟು ಬಂದಿದ್ದೇವೆ. ಅಲ್ಲಿಂದಲೇ ಅಂತಿಮ ತೀರ್ಮಾನವಾಗುತ್ತದೆ ಎಂದು ಹೇಳಿದ್ದಾರೆ.