ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದ್ದು, ಬೌಲಿಂಗ್ ನಲ್ಲಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮಿಂಚಿದ್ದಾರೆ.
ಕೊನೆಯ ಪಂದ್ಯದಲ್ಲಿ 25.4 ಓವರ್ಗಳನ್ನು ಎಸೆದಿದ್ದ ಅಶ್ವಿನ್ 9 ವಿಕೆಟ್ ಗಳಿಸುವ ಮೂಲಕ ಹಲವು ಸಾಧನೆ ಮಾಡಿದ್ದಾರೆ. ಲೆಜೆಂಡ್ ಸ್ಪಿನ್ನರ್ ಮುತ್ತಯ್ಯ ಮುರಳೀಧರನ್ ಅವರ ದಾಖಲೆ ಮುರಿದಿದ್ದಾರೆ.
100ನೇ ಟೆಸ್ಟ್ ಪಂದ್ಯದಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ವಿಶ್ವ ದಾಖಲೆ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಹೆಸರಿನಲ್ಲಿತ್ತು. 110ನೇ ಪಂದ್ಯದಲ್ಲಿ 141 ರನ್ ನೀಡಿ 9 ವಿಕೆಟ್ ಕಬಳಿಸಿ ಮಿಂಚಿದ್ದರು. ಆದರೆ, ಅಶ್ವಿನ್ 128 ರನ್ ನೀಡಿ 9 ವಿಕೆಟ್ ಕಬಳಿಸುವ ಮೂಲಕ ದಾಖಲೆ ಮುರಿದಿದ್ದಾರೆ.
ಈ ಪಂದ್ಯದ 2ನೇ ಇನಿಂಗ್ಸ್ನಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಭಾರತದ ಪರ ಟೆಸ್ಟ್ನಲ್ಲಿ ಅತೀ ಹೆಚ್ಚು ಬಾರಿ ಐದು ವಿಕೆಟ್ ಪಡೆದ ವಿಶೇಷ ದಾಖಲೆ ಕೂಡ ಮಾಡಿದ್ದಾರೆ. ಅನಿಲ್ ಕುಂಬ್ಳೆ ಅವರ ಹೆಸರಿನಲ್ಲಿದ್ದ ಗಾಖಲೆಯನ್ನು ಅಳಿಸಿ ಹಾಕಿದ್ದಾರೆ. ಕುಂಬ್ಳೆ ಒಟ್ಟು 35 ಬಾರಿ 5 ವಿಕೆಟ್ ಕಬಳಿಸಿದ್ದರು.