ಬ್ರಿಸ್ಬೇನ್: ಭಾರತೀಯ ಕ್ರಿಕೆಟ್ ತಂಡದ ಹಿರಿಯ ಆಟಗಾರ ಆರ್. ಅಶ್ವಿನ್ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಗುಡ್ ಬೈ ಹೇಳಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದೆ. ಈ ಪಂದ್ಯದ ನಂತರ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಈ ಟೆಸ್ಟ್ ನ 5 ಪಂದ್ಯಗಳ ಸರಣಿಗೆ ಆಯ್ಕೆಯಾಗಿದ್ದ ಅಶ್ವಿನ್ ಅಡಿಲೇಡ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಆಡಿದ್ದರು. ಮೂರನೇ ಟೆಸ್ಟ್ ಪಂದ್ಯಕ್ಕೆ ಅಶ್ವಿನ್ ಬದಲಾಗಿ ರವೀಂದ್ರ ಜಡೇಜಾ ಕಣಕ್ಕೆ ಇಳಿದಿದ್ದರು.
2010 ರಲ್ಲಿ ಶ್ರೀಲಂಕಾ ವಿರುದ್ಧ ಮೊದಲ ಏಕದಿನ ಪಂದ್ಯ ಆಡುವುದರ ಮೂಲಕ ಅಶ್ವಿನ್ ಅಂತಾರಾಷ್ಟ್ರೀಯ ಕ್ರೀಡೆಯ ಕಣಕ್ಕೆ ಇಳಿದಿದ್ದರು. ಇಲ್ಲಿಯವರೆಗೆ 106 ಟೆಸ್ಟ್ ಕ್ರಿಕೆಟ್ ಆಡಿರುವ ಅಶ್ವಿನ್ 537 ವಿಕೆಟ್ ಪಡೆದಿದ್ದಾರೆ. 59 ರನ್ ನೀಡಿ 7 ವಿಕೆಟ್ ಪಡೆದಿದ್ದು ಇವರ ಅತ್ಯುತ್ತಮ ಸಾಧನೆ. 6 ಶತಕ ಮತ್ತು 14 ಬಾರಿ ಅರ್ಧಶತಕ ಸಿಡಿಸಿದ್ದಾರೆ.
116 ಏಕದಿನ ಪಂದ್ಯಗಳಲ್ಲಿ 156 ವಿಕೆಟ್ ಪಡೆದಿದ್ದಾರೆ. 65 ಟಿ20 ಪಂದ್ಯಗಳಿಂದ 72 ವಿಕೆಟ್ ಪಡೆದಿದ್ದಾರೆ.







