R varthur prakash| ಕೋಲಾರದಲ್ಲಿ ಬಿಜೆಪಿಯನ್ನ ಗೆಲ್ಲಿಸಬೇಕು
ಕೋಲಾರ : ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ತಂದುಕೊಡಲು ಪಕ್ಷದ ಕಾರ್ಯಕರ್ತರು ಈಗಿನಿಂದಲೇ ದುಡಿಯಬೇಕು ಎಂದು ಮಾಜಿ ಸಚಿವ ಆರ್. ವರ್ತೂರ್ ಪ್ರಕಾಶ್ ಕರೆ ಕೊಟ್ಟಿದ್ದಾರೆ.
ಇಂದು ಕೋಲಾರದ ಭಾರತೀಯ ಜನತಾ ಪಾರ್ಟಿ ಕಾರ್ಯಾಯಲದಲ್ಲಿ ಭಾರತೀಯ ಜನತಾ ಪಾರ್ಟಿ ಕೋಲಾರ ನಗರ ಘಟಕದ ಕಾರ್ಯಕಾರಿಣಿ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಆರ್ ವರ್ತೂರು ಪ್ರಕಾಶ್ ರವರು ಕೋಲಾರದಲ್ಲಿ ಈ ಬಾರಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು.
ಹೀಗಾಗಿ ಈಗಿನಿಂದಲೇ ಕಾರ್ಯಕರ್ತರು ಪಕ್ಷಕ್ಕಾಗಿ ದುಡಿಯಬೇಕು ಎಂದು ಕರೆಕೊಟ್ಟರು.
ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷರಾದ ತಿಮ್ಮರಾಯಪ್ಪ ಕೂಡ ಅಧ್ಯಕ್ಷರಾದ ವಿಜಯ್ ಕುಮಾರ್ ಮಾಜಿ ಅಧ್ಯಕ್ಷರಾದ ಓಂಶಕ್ತಿ ಚಲಪತಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.








