ಕೆ.ಎಚ್ ಮುನಿಯಪ್ಪ ನೀರು ಹಾಕದೆ ಕತ್ತು ಕೊಯ್ಯುತ್ತಾನೆ : ವರ್ತೂರ್ ಪ್ರಕಾಶ್
ಕೋಲಾರ : ಕಾಂಗ್ರೆಸ್ ಪಕ್ಷಕ್ಕೆ ಸೇರುವುದ್ದಕ್ಕೆ ತುದಿಗಾಲಿನಲ್ಲಿ ನಿಂತಿರುವ ಮಾಜಿ ಸಚಿವ ಆರ್ ವರ್ತೂರ್ ಪ್ರಕಾಶ್ ಅವರಿಗೆ ಮಾಜಿ ಸಂಸದ ಕೆ ಹೆಚ್ ಮುನಿಯಪ್ಪ ಅಡ್ಡಿಯಾಗಿದ್ದಾರೆ. ಈ ಹಿನ್ನೆಲೆ ವರ್ತೂರು ಪ್ರಕಾಶ್,ಸಾಬ್ರು ಕುರಿ ಕೊಯ್ಯುವಾಗ ಬಾಯಲ್ಲಿ ನೀರು ಹಾಕ್ತಾರೆ. ಆದರೆ ಕೆ.ಎಚ್ ಮುನಿಯಪ್ಪ ನೀರು ಹಾಕದೆ ಕತ್ತು ಕೊಯ್ಯುತ್ತಾನೆ ಅಂತಾ ಕೆ.ಎಚ್ ಮುನಿಯಪ್ಪ ವಿರುದ್ಧ ಏಕವಚನದಲ್ಲಿ ಆಕ್ರೋಶ ಹೊರಹಾಕಿದ್ದಾರೆ.
ಕೋಲಾರದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಸಂಸದ ಕೆ ಹೆಚ್ ಮುನಿಯಪ್ಪ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು. ಕೆ.ಹೆಚ್ ಮುನಿಯಪ್ಪನಿಗೆ ಬುದ್ಧಿ ಭ್ರಮಣೆ ಆಗಿದೆ. ಸಾಬ್ರು ಕುರಿ ಕೊಯ್ಯುವಾಗ ಬಾಯಲ್ಲಿ ನೀರು ಹಾಕ್ತಾರೆ. ಆದರೆ ಕೆ.ಎಚ್ ಮುನಿಯಪ್ಪ ನೀರು ಹಾಕದೆ ಕತ್ತು ಕೊಯ್ಯುತ್ತಾನೆ ಎಂದು ಗುಡುಗಿದರು.
ನಾನು ಬಿಜೆಪಿ, ಜೆಡಿಎಸ್ ಪಕ್ಷಕ್ಕೆ ಹೋಗಲ್ಲ. ನಾನೇನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಅಂತ ಮುನಿಯಪ್ಪನ ಮನೆಗೆ ಹೋಗಿಲ್ಲ. ಚುನಾವಣೆಯಲ್ಲಿ ನಾನು ಪಕ್ಷೇತರನಾಗಿ ನಿಂತು ಶಾಸಕನಾದರೆ ಹೋಗೋದು ಕಾಂಗ್ರೆಸ್ ಪಕ್ಷಕ್ಕೆ ಎಂದು ಘೋಷಿಸಿದ ವರ್ತೂರ್ ಪ್ರಕಾಶ್, ಕಾಂಗ್ರೆಸ್ ಸೇರಲು ಸಿದ್ದರಾಮಯ್ಯ, ರಮೇಶ್ ಕುಮಾರ್ ಅವರು ಅಡ್ಡ ಹಾಕುತ್ತಿಲ್ಲ. ನನಗೆ ಅಡಡಿಯಾಗಿರುವುದು ಕೆ.ಹೆಚ್ ಮುನಿಯಪ್ಪ ಅಂತಾ ಹೇಳಿದ್ರು.
ಇದೇ ವೇಳೆ ಶರತ್ ಬಚ್ಚೇಗೌಡ ಬಗ್ಗೆ ಮಾತನಾಡಿ, ಹೊಸಕೋಟೆ ಪಕ್ಷೇತರ ಶಾಸರನ್ನ ರತ್ನ ಕಂಬಳಿ ಹಾಕಿ ಕಾಂಗ್ರೆಸ್ ಗೆ ಸೇರಿಸಿಕೊಳ್ಳುತ್ತಿದ್ದಾರೆ. ಅಂತಹ ಸಂದರ್ಭ ನನಗೂ ಬಂದೇ ಬರುತ್ತೆ. ಆಗ ನಾನು ಕಾಂಗ್ರೆಸ್ ಪಕ್ಷ ಸೇರಿಯೇ ಸೇರುತ್ತೇನೆ ಅಂತಾ ವಿಶ್ವಾಸ ವ್ಯಕ್ತಪಡಿಸಿದರು.
