ಕೆ.ಹೆಚ್.ಮುನಿಯಪ್ಪರನ್ನ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಿ : ವರ್ತೂರು ಪ್ರಕಾಶ್ ( R Varthur prakash )
ಕೋಲಾರ : ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ ಅವರನ್ನ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವರ್ತೂರು ಪ್ರಕಾಶ್, ಕೆ.ಹೆಚ್.ಮುನಿಯಪ್ಪ ಜೆಡಿಎಸ್ ಹಾಗೂ ಬಿಜೆಪಿ ಜೊತೆಗೆ ಸಂಬಂಧ ಹೊಂದಿದ್ದಾರೆ.
ಹೀಗಾಗಿ ಮುನಿಯಪ್ಪ ಅವರನ್ನ ಕೂಡಲೇ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಬೇಕು.
ಮೈಸೂರು ಪಾಲಿಕೆ ಚುನಾವಣೆ ಸಂದರ್ಭದಲ್ಲಿ, ಜೆಡಿಎಸ್ ನೊಂದಿಗೆ ಕೈ ಜೋಡಿಸಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಆದರೆ ಅರಹಳ್ಳಿ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಸೇರಿ, ಕಾಂಗ್ರೆಸ್ ಪಕ್ಷ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಪ್ರತಿ ಚುನಾವಣೆಯಲ್ಲಿ ಕೆ.ಹೆಚ್ ಮುನಿಯಪ್ಪ ಬೇರೆ ಪಕ್ಷದೊಂದಿಗೆ ಕೈ ಜೋಡಿಸಿ ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ.
ಈ ಹಿನ್ನೆಲೆ ಅವರನ್ನ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಬೇಕು. ಇದರಿಂದ ನಿಷ್ಟಾವಂತ ಕಾರ್ಯಕರ್ತರು ಬೆಳೆಯುತ್ತಾರೆ ಎಂದು ವರ್ತೂರ್ ಪ್ರಕಾಶ್ ಹೇಳಿದ್ದಾರೆ.