ಟೆನ್ನಿಸ್ ದಿಗ್ಗಜ ರಫೆಲ್ ನಡಾಲ್ ಸೋಲಿನ ಮೂಲಕ ವಿದಾಯ ಹೇಳಿದ್ದಾರೆ.
ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲನ್ನು ಅನುಭವಿಸಿದ ಸ್ಪೇನ್ನ (Spain) ಟೆನಿಸ್ ದಿಗ್ಗಜ ರಫೆಲ್ ನಡಾಲ್ (Rafael Nadal) ತಮ್ಮ ಬದುಕಿಗೆ ವಿದಾಯ ಹೇಳಿದ್ದಾರೆ. ರಫೆಲ್ ಅವರು ನೆದರ್ಲ್ಯಾಂಡ್ (Netherland) ವಿರುದ್ಧದ ಡೇವಿಸ್ ಕಪ್ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೋಲು ಅನುಭವಿಸಿದರು. ಈ ಮೂಲಕ ತಮ್ಮ ವೃತ್ತಿ ಜೀವನಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ನಿವೃತ್ತಿ ಘೋಷಿಸಿದ ನಂತರ ಸ್ಪ್ಯಾನಿಷ್ ರಾಷ್ಟ್ರಗೀತೆಯ ಸಂದರ್ಭದಲ್ಲಿ ರಫೆಲ್ ಭಾವುಕರಾಗಿದ್ದರು. ಈ ವೇಳೆ ಅಲ್ಲಿದ್ದ ಅಭಿಮಾನಿಗಳು ಹುರುದುಂಬಿಸಿದರು. ಭಾವುಕರಾಗಿ ಮಾತನಾಡಿದ ರಫೆಲ್, ಇಂದು ನನ್ನ ಭಾವನಾತ್ಮಕ ದಿನ, ವೃತ್ತಿಪರನಾಗಿ ಇಂದು ನನ್ನ ಕೊನೆಯ ಪಂದ್ಯ. ಕೊನೆಯ ಬಾರಿ ಈ ರೀತಿಯಾಗಿ ರಾಷ್ಟ್ರಗೀತೆ ಕೇಳುತ್ತಿರುವುದು ವಿಶೇಷವಾಗಿದೆ ಎಂದಿದ್ದಾರೆ.
2004ರಲ್ಲಿ ವೃತ್ತಿಜೀವನಕ್ಕೆ ಕಾಲಿಟ್ಟ ರಫೆಲ್ 30 ಡೇವಿಸ್ ಕಪ್ ಸಿಂಗಲ್ಸ್ ಪಂದ್ಯಗಳಲ್ಲಿ 29 ಪಂದ್ಯಗಳನ್ನು ಗೆದ್ದಿದ್ದಾರೆ.