ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಆದೇಶಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ. ರಫೇಲ್ ಯುದ್ಧ ವಿಮಾನ ಖರೀದಿ ಕುರಿತು ಸ್ವತಂತ್ರ ತನಿಖೆಗೆ ಆದೇಶಿಸಬೇಕೆಂದು ಕೋರಿ ವಕೀಲ ಎಂ.ಎಲ್.ಶರ್ಮಾ ಅವರು ಹೊಸದಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.
ಅರ್ಜಿ ಸಲ್ಲಿಸಿದ 2 ವಾರಗಳ ಬಳಿಕ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ತಿಳಿಸಿದೆ. ರಫೇಲ್ ಖರೀದಿ ವೇಳೆ ಭಾರತದ ಮಧ್ಯವರ್ತಿಗೆ ಫ್ರಾನ್ಸ್ನ ಡಸಾಲ್ಟ್ ಕಂಪನಿಯು 9 ಕೋಟಿ ರೂ. ನೀಡಿತ್ತು ಎಂಬ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ವಕೀಲರಾದ ಎಂ.ಎಲ್. ಶರ್ಮಾ ಎಂಬುವರು ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ತನಿಖೆಗೊಳಪಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.
ನಿದ್ದೆಗೆ ಜಾರಿದ್ದ ಪತಿಯ ಕೈಕಾಲು ಕಟ್ಟಿ ಕೊಲೆ ಮಾಡಿದ ಹೆಂಡತಿ …!








