ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆ – Live
ಸೆಪ್ಟೆಂಬರ್10: ರಫೇಲ್ ಯುದ್ಧ ವಿಮಾನವು ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ. ಇದಕ್ಕಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ವಾಯುಪಡೆಯು ಕಾರ್ಯಕ್ರಮವನ್ನು ಆಯೋಜಿಸಿತ್ತು.
ಫ್ರಾನ್ಸ್ನ ರಕ್ಷಣಾ ಸಚಿವೆ ಫ್ಲಾರೆನ್ಸ್ ಪಾರ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಭಾರತದ ಉನ್ನತ ಮಿಲಿಟರಿ ಅಧಿಕಾರಿಗಳು ಅಂಬಾಲಾ ವಾಯುನೆಲೆಯಲ್ಲಿ ಐದು ರಫೇಲ್ ಫೈಟರ್ ಜೆಟ್‌ಗಳನ್ನು ಭಾರತೀಯ ವಾಯುಪಡೆಗೆ ಔಪಚಾರಿಕವಾಗಿ ಸೇರಿಸಲಿರುವ ಸಮಾರಂಭಕ್ಕೆ ಸಾಕ್ಷಿಯಾದರು.
https://twitter.com/Saakshatv_video/status/1303921440119377920?s=19
ಸಮಾರಂಭದ ನಂತರ ದ್ವಿಪಕ್ಷೀಯ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಇನ್ನಷ್ಟು ಗಾಢವಾಗಿಸುವ ಮಾರ್ಗಗಳ ಕುರಿತು ಪಾರ್ಲಿ ಮತ್ತು ಸಿಂಗ್ ಅಂಬಾಲಾದಲ್ಲಿ ಮಾತುಕತೆ ನಡೆಸಲಿದ್ದಾರೆ.
ಐದು ರಾಫೆಲ್ ಜೆಟ್‌ಗಳ ಮೊದಲ ಬ್ಯಾಚ್ ಜುಲೈ 29 ರಂದು ಭಾರತಕ್ಕೆ ಆಗಮಿಸಿತು, ಭಾರತವು ಫ್ರಾನ್ಸ್‌ನೊಂದಿಗೆ ಅಂತರ್-ಸರ್ಕಾರಿ ಒಪ್ಪಂದಕ್ಕೆ ಸಹಿ ಹಾಕಿದ ಸುಮಾರು ನಾಲ್ಕು ವರ್ಷಗಳ ನಂತರ, 36 ವಿಮಾನಗಳನ್ನು 59,000 ಕೋಟಿ ರೂ. ಗೆ ಖರೀದಿ ಮಾಡಿತ್ತು.








