ಬೆಂಗಳೂರು, ಮೇ 18: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕರ್ನಾಟಕದ ರಾಗಿಗೆ ವಿಶ್ವ ಮನ್ನಣೆ ನೀಡುವ ಕೇಂದ್ರ ಸರ್ಕಾರದ ಕ್ರಮಕ್ಕೆ ಮೆಚ್ಚುಗೆ
ವ್ಯಕ್ತಪಡಿಸಿದ್ದಾರೆ. ರಾಗಿ ಕರ್ನಾಟಕದಲ್ಲಿ ಅತಿ ಹೆಚ್ಚು ಬೆಳೆಯುವ ಆಹಾರ ಧಾನ್ಯವಾಗಿದ್ದು, ಅದಕ್ಕೆ ವಿಶ್ವ ಮನ್ನಣೆ ನೀಡುವ ಕೇಂದ್ರ ಸರ್ಕಾರದ ತೀರ್ಮಾನ ಸ್ವಾಗತಾರ್ಹ ಎಂದು ಹೇಳಿದ್ದಾರೆ.
ಆದರೆ ಇದು ಬರೀ ಘೋಷಣೆಯಾಗಿರದೆ, ಕಾರ್ಯ ರೂಪಕ್ಕೆ ಬರಬೇಕು ಆಗ ಮಾತ್ರ ರಾಗಿ ಬೆಳೆಯುವ ರೈತರ ಸಂಖ್ಯೆ ಹೆಚ್ಚಾಗಲು ಸಾಧ್ಯ ಹಾಗೂ ರಾಗಿ ಬೆಳೆಯುವ ರೈತರಿಗೆ ಹೆಮ್ಮೆ ಮೂಡಲು ಸಾಧ್ಯ ಎಂದು ಮಾಜಿ ಪ್ರಧಾನಿ ಹೇಳಿದ್ದಾರೆ .
ಕರ್ನಾಟಕ ದಿಂದ ರೈತನ ಮಗನಾಗಿ ದೆಹಲಿಗೆ ಹೋಗಿ ಪ್ರಧಾನಿಯಾದ ನಾನು ರಾಗಿಯ ಬಗ್ಗೆ ಕಾಳಜಿ ವಹಿಸಿದ್ದೆ. ಬೆಳೆಗಳ ಅಂತರಾಜ್ಯ ಸಾಗಣೆಗೆ ಗ್ರಾಮೀಣ ಮೂಲಸೌಕರ್ಯಕ್ಕೆ ಗಮನಹರಿಸಿದ್ದೆ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೆಗೌಡರು ಹೇಳಿದರು.
ನಿಮ್ಮ ದಾನ ಬೇಡ, ವಿನಾಶಕ್ಕೆ ಪರಿಹಾರ ನೀಡಿ: ನಮಗೆ ನ್ಯಾಯ ಬೇಕು ಭಾರತದ ವಿರುದ್ಧ ಸಿಡಿದೆದ್ದ ನೇಪಾಳ
ಕಾಠ್ಮಂಡು: ಇತ್ತೀಚಿನ ಭೀಕರ ಪ್ರವಾಹ ಮತ್ತು ಭೂಕುಸಿತದಿಂದ ನಲುಗಿ ಹೋಗಿರುವ ನೇಪಾಳ, ಇದೀಗ ಜಗತ್ತಿನ ಬಲಿಷ್ಠ ರಾಷ್ಟ್ರಗಳ ವಿರುದ್ಧ ತಿರುಗಿಬಿದ್ದಿದೆ. ಸಾವಿರಾರು ಜೀವಗಳನ್ನು ಬಲಿಪಡೆದ ಈ ನೈಸರ್ಗಿಕ...








