ರಾಗಿಣಿ 31ನೇ ಹುಟ್ಟುಹಬ್ಬ-  ರಕ್ತದಾನ ಶಿಬಿರ ಆಯೋಜನೆ

1 min read

ರಾಗಿಣಿ 31ನೇ ಹುಟ್ಟುಹಬ್ಬ-  ರಕ್ತದಾನ ಶಿಬಿರ ಆಯೋಜನೆ

ಬೆಂಗಳೂರು :  ಸ್ಯಾಂಡಲ್ ವುಡ್ ನ ತುಪ್ಪದ ಬೆಡಗಿ ರಾಗಿಣಿಗೆ ಇಂದು 31ನೇ ವರ್ಷದ  ಹುಟ್ಟುಹಬ್ಬದ ಸಂಭ್ರಮ.. ಈ ಹುಟ್ಟುಹಬ್ಬವನ್ನ ರಾಗಿಣಿ ಅರ್ಥಪೂರ್ಣವಾಗಿ ಆಚರಿಸಿಕೊಂಡಿದ್ದಾರೆ. ರಕ್ತದಾನ ಶಿಬಿರವನ್ನು ಏರ್ಪಡಿಸುವ ಮೂಲಕವಾಗಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ್ದಾರೆ.

ಕೊರೊನಾ ಪರಿಸ್ಥಿತಿಯಲ್ಲಿ ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ರಕ್ತದಾನ ಶಿಬಿರ ಏರ್ಪಡಿಸಿದ್ದಾರೆ. ಬೆಂಗಳೂರಿನ ಜಯನಗರದ ಜೈನ್ ಯೂನಿವರ್ಸಿಟಿಯಲ್ಲಿ ಬ್ಲಡ್ ಕ್ಯಾಂಪ್ ಆಯೋಜಿಸಲಾಗಿದ್ದು, ಜೆನೆಕ್ಸ್ಟ್ ಚಾರಿಟೇಬಲ್ ಟ್ರಸ್ಟ್ ಹಾಗೂ ರಾಷ್ಟ್ರೋತ್ಥಾನ ಬ್ಲಂಡ್ ಬ್ಯಾಂಕ್ ನೇತೃತ್ವದಲ್ಲಿ ರಕ್ತದಾನ ನಡೆದಿದೆ.

ಅಂದ್ಹಾಗೆ ಇತ್ತೀಚೆಗೆ ನಟಿ ರಾಗಿಣಿ ಕಲೋವಿಡ್ ಲಸಿಕೆ ತೆಗೆದುಕೊಳ್ಳುವ ಮೊದಲು ರಕ್ತದಾನ ಮಾಡಿದ್ದರು. ಡ್ರಗ್ ಲಿಂಕ್  ಕೇಸ್ ನಲ್ಲಿ ಜೈಲಿಗೆ ಹೋಗಿ ಸುಮಾರು ದಿನಗಳ ಕಾಲ ಇದ್ದು ಬಳಿಕ ಜಾಮೀನಿನ ಮೇಲೆ ಹೊರಬಂದಿರುವ ನಟಿ ಅನೇಕ ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದಾರೆ. ಸ್ಮಷಾಣ ಕಾಯುವವರು ಬಡವರಿಗೆ ದಿನಸಿ ವತರಣೆ ಮಾಡಿದ್ದಾರೆ.

ಇನ್ನೂ ಮೊದಲನೇ ಅಲೆಯ ಲಾಕ್ ಡೌನ್ ಸಮಯದಲ್ಲಿಯೂ ಹಸಿದವರಿಗೆ ಊಟ ನೀಡಿ ,  ಮಾಸ್ಕ್ , ದಿನಸಿ ವಿತರಣೆ ಮಾಡಿದ್ದ ರಾಗಿಣಿ ಆ ಸಂದರ್ಧಲ್ಲೇ ಜೈಲು ಸೇರುವಂತಾಗಿತ್ತು..  ಇದೀಗ 2ನೇ ಅಲೆಯ ಸಂದರ್ಭದಲ್ಲೂ ಸಮಾಜ ಮುಖಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ 500 ಮಾಸ್ಕ್, 1000 ಜನರಿಗೆ ಊಟ ನೀಡುತ್ತಿದ್ದಾರೆ. ಈಗ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರವನ್ನು ಏರ್ಪಡಿಸಿರುವ ಖುಷಿಯಲ್ಲಿದ್ದಾರೆ. ಹಲವಾರು ಅಭಿಮಾನಿಗಳು ಈ ವೇಳೆ ರಕ್ತದಾನವನ್ನು ಮಾಡಿದ್ದಾರೆ.

ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್  ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..

ಈ ನಡುವೆ  ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ  ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.

ಕೊರೊನ ಮಹಾಮಾರಿ:

ಕೊರೊನ ವೈರಸ್  ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.

ತಪ್ಪದೇ ಹೊರಗೆ ಹೋದಾಗ  ಸ್ವಚ್ಛವಾದ ಮಾಸ್ಕ ಧರಿಸಿ.

ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .

ಜನ ನಿಬಿಡ ಪ್ರದೇಶದಿಂದ ದೂರವಿರಿ.

ಮನೆ ಸಮೀಪದ  ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.

ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.

ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ  ಸ್ನಾನ ಮಾಡಿ.

ನಮ್ಮ  ಹೋರಾಟ ಕೊರೊನ ನಿರ್ಮೂಲನೆಯತ್ತ.

ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd