ರಕ್ತದಾನ ಮಾಡಿ…. ಜೀವ ಉಳಿಸಿ – ತುಪ್ಪದ ಬೆಡಗಿ ರಾಗಿಣಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಕೇಸ್ ನಲ್ಲಿ ಸಿಲುಕಿ ಪರಪ್ಪನನ ಅಗ್ರಹಾರದಲ್ಲಿ ಜೈಲುವಾಸ ಅನುಭವಿಸಿ ಜಾಮೀನಿನ ಮೇಲೆ ಹೊರಬಂದಿರುವ ನಟಿ ರಾಗಿಣಿ ಸದ್ಯ ಕೋವಿಡ್ ಸಂಕಷ್ಟದಲ್ಲಿ ಬಡವರಿಗೆ ಸಹಾಯ ಮಾಡ್ತಿದ್ದಾರೆ.
ಕಷ್ಟದಲ್ಲಿರುವ ಕುಟುಂಬಗಳಿಗೆ ದಿನಸಿ ಕಿಟ್ ಹಾಗೂ ಆಹಾರ ನೀಡುವ ಮೂಲಕ ರಾಗಿಣಿ ದ್ವಿವೇದಿ ನೆರವಾಗುತ್ತಿದ್ದಾರೆ. ಇದೇ ವೇಳೆ ಲಸಿಕೆ ಹಾಕಿಸಿಕೊಳ್ಳುವ ಮುನ್ನ ರಕ್ತದಾನ ಮಾಡಿ ಎಂದು ಜಾಗೃತಿ ಮೂಡಿಸುತ್ತಿದ್ದಾರೆ.
ಅದಕ್ಕೂ ಮುನ್ನ ಖುದ್ದು ತಾವು ಸಹ ರಕ್ತದಾನ ಮಾಡಿದ್ಧಾರೆ. ರಕ್ತ ಮತ್ತು ಪ್ಲಾಸ್ಮಾಕ್ಕೆ ತುಂಬಾ ಅಗತ್ಯವಿರುವುದರಿಂದ ನಾನು ರಕ್ತದಾನವನ್ನು ಮಾಡಿದ್ದೇನೆ. ಕೆಲವು ಜೀವಗಳನ್ನು ಉಳಿಸಲು ಸಹಾಯವಾಗುತ್ತದೆ. ರಕ್ತದಾನವನ್ನು ಮಾಡಿ ಎಂದು ಮನವಿ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನ ಹಂಚಿಕೊಂಡಿದ್ಧಾರೆ.
ಒಮ್ಮೆ ಯಾವುದೇ ಲಸಿಕೆ ಹಾಕಿಸಿಕೊಂಡರೆ 28 ದಿನಗಳ ಕಾಲ ರಕ್ತದಾನ ಮಾಡುವಂತಿಲ್ಲ. ಇದ್ರಿಂದಾಗಿ ರಕ್ತದ ಅಭಾವ ಎದುರಾಗಲಿದೆ ಎಂದು ಸಾಕಷ್ಟು ಮಂದಿ ಸೆಲೆಬ್ರಿಟಿಗಳು ರಕ್ತದಾನ ಮಾಡಿ ಇತರರಿಗೂ ರಕ್ತದಾನ ಮಾಡುವಂತೆ ಮನವಿ ಮಾಡುತ್ತಿದ್ದಾರೆ.
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.