ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಸದ್ಯ ಡ್ರಗ್ಸ್ ಜಂಜಾಟ , ಸೆರೆವಾಸದ ನಂತರ ಮತ್ತೆ ಕಮ್ ಬ್ಯಾಕ್ ಮಾಡ್ತಿದ್ದಾರೆ.. ಮಲಯಾಳಂ , ತಮಿಳಿನಲ್ಲೂ ಬ್ಯುಸಿಯಾಗಿದ್ದಾರೆ.. ರಾಗಿಣಿ ದ್ವಿವೇದಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.
ಅಂದ್ಹಾಗೆ ತಮಿಳಿನಲ್ಲಿ ಸಂತಾನಂ ಜೊತೆಗೆ ಸಿನಿಮಾದಲ್ಲಿ ಹೆಜ್ಜೆ ಹಾಕಿದ್ದಾರೆ. ಈ ಚಿತ್ರದಲ್ಲಿ ಸಖತ್ ಹಾಟ್ ಆಗಿ ರಾಗಿಣಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಶೂಟಿಂಗ್ ಫೋಟೋಗಳು ಇದೀಗ ವೈರಲ್ ಆಗಿದೆ.
ಕನ್ನಡದ ಪ್ರತಿಭಾವಂತ ನಿರ್ದೇಶಕ ಪ್ರಶಾಂತ್ ರಾಜ್ ಮೊಟ್ಟ ಮೊದಲ ಬಾರಿಗೆ ತಮಿಳಿನಲ್ಲಿ ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಸ್ಟಾರ್ ನಟ ಸಂತಾನಂ ಮತ್ತು ಬಸಣ್ಣಿ ಬಾ ಖ್ಯಾತಿಯ ತಾನ್ಯ ಹೋಪ್ ಗೆ ಪ್ರಶಾಂತ್ ರಾಜ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಈ ಚಿತ್ರದಲ್ಲಿ ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಸ್ಪೆಷಲ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಶೂಟಿಂಗ್‌ನಲ್ಲಿ ಭಾಗಿಯಾಗಿರೋ ರಾಗಿಣಿಯ ಫೋಟೋಗಳು ವೈರಲ್ ಆಗುತ್ತಿದೆ.









