ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಮೊದಲ ಸೆಷನ್ನಲ್ಲಿ 2 ವಿಕೆಟ್ ಕಳೆದುಕೊಂಡಿರುವ ಭಾರತ 222 ರನ್ ಕಲೆ ಹಾಕಿ, ಬ್ಯಾಟಿಂಗ್ ಮುಂದುವರೆಸಿದೆ.
ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಭರ್ಜರಿ ಬ್ಯಾಟಿಂಗ್ ನಡೆಸುತ್ತಿದ್ದು, ರಾಹುಲ್ ಅರ್ಧ ಶತಕ ಸಿಡಿಸಿದ್ದಾರೆ. ಭೋಜನ ವಿರಾಮದ ವೇಳೆಗೆ ಟೀಮ್ ಇಂಡಿಯಾ 50 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 222 ರನ್ ಕಲೆಹಾಕಿದೆ. 24 ರನ್ಗಳ ಹಿನ್ನಡೆಯಲ್ಲಿದೆ.
ಮೊದಲ ದಿನದಾಟದಲ್ಲಿ ಭಾರತ 1 ವಿಕೆಟ್ ನಷ್ಟಕ್ಕೆ 119 ರನ್ ಗಳಿಸಿ 127 ರನ್ ಗಳ ಹಿನ್ನಡೆಯಲ್ಲಿತ್ತು. ಎರಡನೇ ದಿನ 76 ರನ್ ಗಳಿಸಿದ್ದ ಯಶಸ್ವಿ ಜೈಸ್ವಾಲ್ ಮತ್ತು 14 ರನ್ ಗಳಿಸಿದ್ದ ಶುಭ್ಮನ್ ಗಿಲ್ ಬ್ಯಾಟಿಂಗ್ ಮುಂದುವರೆಸಿದ್ದರು. ಆದರೆ, ಇಬ್ಬರೂ ಹೆಚ್ಚು ಹೊತ್ತು ಮೈದಾನದಲ್ಲಿ ಉಳಿಯಲಿಲ್ಲ. ಜೈಸ್ವಾಲ್ 74 ಎಸೆತಗಳಲ್ಲಿ 80 ರನ್ ಗಳಿಸಿ ಜೋರೂಟ್ಗೆ ಬೌಲಿಂಗ್ನಲ್ಲಿ ಔಟಾದರೆ, ಗಿಲ್ 66 ಎಸೆತಗಳಲ್ಲಿ 23 ರನ್ ಗಳಿಸಿ ಔಟ್ ಆದರು.
ನಂತರ ಜೊತೆಯಾದ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದಾರೆ. ಈಗಾಗಲೇ ಈ ಜೋಡಿ ಅರ್ಧಶತಕದ ಜೊತೆಯಾಟ ನೀಡಿದೆ. ಊಟದ ವಿರಾಮ ವೇಳೆಗೆ ರಾಹುಲ್ 78 ಎಸೆತಗಳಲ್ಲಿ 6 ಫೋರ್ನೊಂದಿಗೆ 55 ರನ್ ಗಳಿಸಿದರೆ, ಅಯ್ಯರ್ 57 ಎಸೆತಗಳಲ್ಲಿ 34 ರನ್ ಸಾಧಿಸಿದ್ದಾರೆ.