ಶ್ರೀಲಂಕಾ ಸರಣಿ : ಯಂಗ್ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್
ನವದೆಹಲಿ : ಜುಲೈನಲ್ಲಿ ನಡೆಯಲಿರುವ ಶ್ರೀಲಂಕಾ ವಿರುದ್ಧದ ಆರು ಪಂದ್ಯಗಳ ಸರಣಿಗೆ ಭಾರತೀಯ ತಂಡಕ್ಕೆ ಕೋಚ್ ಆಗಿ ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಹಾಲಿ ಎಸ್ ಸಿ ಎ ಮುಖ್ಯಸ್ಥ ರಾಹುಲ್ ದ್ರಾವಿಡ್ ನೇಮಕವಾಗಿದ್ದಾರೆ.
ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ರವಿಶಾಸ್ತ್ರಿ, ಭಾರತ್ ಅರುಣ್ ಮತ್ತು ವಿಕ್ರಮ್ ರಾಥೋಡ್ ಮೂವರು ಟೆಸ್ಟ್ ತಂಡದೊಂದಿಗೆ ಇಂಗ್ಲೆಂಡ್‍ನಲ್ಲಿ ಇರುವುದರಿಂದ ಎನ್‍ಸಿಎ ಮುಖ್ಯಸ್ಥರಾದ ರಾಹುಲ್ ದ್ರಾವಿಡ್, ಶ್ರೀಲಂಕಾ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ದೃಢಪಡಿಸಿದ್ದಾರೆ.
ಈ ತಿಂಗಳ ಅಂತ್ಯದಲ್ಲಿ ಶ್ರೀಲಂಕಾ ಸರಣಿಗೆ ಭಾರತ ತಂಡ ಪ್ರಕಟವಾಗುವ ಸಾಧ್ಯತೆಗಳಿವೆ. ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡುವ ಮೊದಲು ತಂಡದ ಆಟಗಾರರು ಕ್ವಾರಂಟೈನ್ ಆಗಬೇಕಾಗಿದೆ.