ಎಂಟು ತಿಂಗಳಲ್ಲಿ ಆರು ಮಂದಿ ಕ್ಯಾಪ್ಟನ್ಸ್ : ದ್ರಾವಿಡ್ ಹೇಳಿದ್ದೇನು..?
ಟಿ20 ವಿಶ್ವಕಪ್-2021 ಮುಗಿದ ನಂತರ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರು ಅಧಿಕಾರ ವಹಿಸಿಕೊಂಡಿದ್ದು ಗೊತ್ತೇ ಇದೆ.
ಆದರೆ, ಅವರು ಕೋಚ್ ಜವಾಬ್ದಾರಿ ವಹಿಸಿಕೊಂಡ ಎಂಟು ತಿಂಗಳಲ್ಲಿ ವಿರಾಟ್ ಕೊಹ್ಲಿ, ರೋಹಿತ್, ಧವನ್, ರಾಹುಲ್ ಮತ್ತು ಪಂತ್ ವಿವಿಧ ಸರಣಿಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.
ರೋಹಿತ್ ಶರ್ಮಾ ಗಾಯಗೊಂಡ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಕೆ.ಎಲ್.ರಾಹುಲ್ ಮತ್ತು ಸ್ವದೇಶದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಿಷಬ್ ಪಂತ್ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ.
ಮತ್ತೊಂದೆಡೆ, ಐರ್ಲೆಂಡ್ ವಿರುದ್ಧದ ಎರಡು ಪಂದ್ಯಗಳ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಮೊದಲ ಬಾರಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಎಂಟು ತಿಂಗಳ ಅವಧಿಯಲ್ಲಿ ಎಲ್ಲಾ ಸ್ವರೂಪಗಳಲ್ಲಿ ಒಟ್ಟು ಆರು ಮಂದಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದಾರೆ. ಈ ಬಗ್ಗೆ ಟೀಂ ಇಂಡಿಯಾದ ಹೆಡ್ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ನೀಡಿದ್ದಾರೆ.

ಟೀಂ ಇಂಡಿಯಾ ಕೋಚ್ ಆಗುತ್ತಿರುವುದಕ್ಕೆ ತುಂಬಾ ಖುಷಿಯಾಗಿದೆ. ಕೋಚ್ ಹುದ್ದೆ ದೊಡ್ಡ ಸವಾಲಿನ ಕೆಲಸ. ಕಳೆದ ಎಂಟು ತಿಂಗಳ ಅವಧಿಯಲ್ಲಿ ನಮ್ಮ ತಂಡಕ್ಕೆ ಆರು ಮಂದಿ ನಾಯಕರಾಗಿ ಸೇವೆ ಸಲ್ಲಿಸಿದ್ದಾರೆ.
ವಾಸ್ತವವಾಗಿ .. ನಾನು ಕೋಚ್ ಆಗಿ ಅಧಿಕಾರ ವಹಿಸಿಕೊಂಡಾಗ ಇದು ನನ್ನ ಯೋಜನೆಯಾಗಿರಲಿಲ್ಲ. ಆದರೆ ಕರೋನಾ, ಗಾಯಗಳು, ಆಡಿದ ಪಂದ್ಯಗಳ ಸಂಖ್ಯೆಯಿಂದಾಗಿ ಈ ಪರಿಸ್ಥಿತಿ ಬಂದಿದೆ.
ಇದು ಯುವ ಆಟಗಾರರಿಗೆ ನಾಯಕತ್ವದ ಅವಕಾಶ ನೀಡಿದೆ. ಅದೇ ರೀತಿ ಭವಿಷ್ಯದ ನಾಯಕರನ್ನ ಹುಡುಕಲು ಸಹಾಯಕವಾಗಿದೆ ಎಂದಿದ್ದಾರೆ ರಾಹುಲ್ ದ್ರಾವಿಡ್.







