ವೆಸ್ಟ್ ಇಂಡೀಸ್ ನ ಟೆಸ್ಟ್ ಸರಣಿ ನಂತರ ಭಾರತ ತಂಡವು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ಸೆಣಸಾಟ ನಡೆಸಲಿದೆ.
ನಂತರ ಐದು ಪಂದ್ಯಗಳ ಟಿ20 ಸರಣಿಯ ನಂತರ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡಲು ಐರ್ಲೆಂಡ್ಗೆ ಪ್ರಯಾಣಿಸಲಿದೆ. ಆಗಸ್ಟ್ 18, 20 ಮತ್ತು 23ರಂದು ಡಬ್ಲಿನ್ನಲ್ಲಿ ಆಡಲಿದೆ.
ಆದರೆ, ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ ಮತ್ತು ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಸೇರಿದಂತೆ ಅವರ ಕೋಚಿಂಗ್ ಸಿಬ್ಬಂದಿಯು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ನಂತರ, ವಿಶ್ರಾಂತಿಗಾಗಿ ಭಾರತಕ್ಕೆ ಮರಳಲಿದ್ದಾರೆ.
ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಮುಖ್ಯಸ್ಥರಾಗಿರುವ ವಿವಿಎಸ್ ಲಕ್ಷ್ಮಣ್ ಅವರು ಐರ್ಲೆಂಡ್ನಲ್ಲಿ ಭಾರತ ತಂಡದ ಕೋಚಿಂಗ್ ಜವಾಬ್ದಾರಿಯನ್ನು ವಹಿಸಿಕೊಳ್ಳುವ ನಿರೀಕ್ಷೆಯಿದೆ. ಬ್ಯಾಟಿಂಗ್ ಕೋಚ್ ಆಗಿ ಸಿತಾಂಶು ಕೊಟಕ್ ಅಥವಾ ಹೃಷಿಕೇಶ್ ಕಾನಿಟ್ಕರ್ ಭಾರತ ತಂಡ ಸೇರಿಕೊಳ್ಳಲಿದ್ದಾರೆ. ಬೌಲಿಂಗ್ ಕೋಚ್ ಹುದ್ದೆಯನ್ನು ಟ್ರಾಯ್ ಕೂಲಿ ಅಥವಾ ಸಾಯಿರಾಜ್ ಬಹುತುಲೆಗೆ ನೀಡುವ ನಿರೀಕ್ಷೆಯಿದೆ
ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮತ್ತೊಬ್ಬ ಆಟಗಾರ ಕೆಎಲ್ ರಾಹುಲ್ ಚೇತರಿಸಿಕೊಳ್ಳಲು ಇನ್ನೂ ಸ್ವಲ್ಪ ಸಮಯ ಬೇಕಾಗಿದೆ. ಹೀಗಾಗಿ ಕೆಎಲ್ ರಾಹುಲ್ ಐರ್ಲೆಂಡ್ ಸರಣಿ ಮಾತ್ರವಲ್ಲದೆ ಏಷ್ಯಾ ಕಪ್ನಲ್ಲಿಯೂ ಕಾಣಿಸಿಕೊಳ್ಳುವ ಅವಕಾಶ ಇಲ್ಲವಾಗಿದೆ.