ಕೊಹ್ಲಿ 3ನೇ ಟೆಸ್ಟ್ ಪಂದ್ಯವಾಡುತ್ತಾರಾ : ದ್ರಾವಿಡ್ ಹೇಳಿದ್ದೇನು..? rahul-dravid reaction on virat kohli injury saaksha tv
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾವನ್ನು ದಕ್ಷಿಣ ಆಫ್ರಿಕಾ 7 ವಿಕೆಟ್‌ಗಳಿಂದ ಸೋಲಿಸಿದೆ.
ಇದರೊಂದಿಗೆ ಮೂರು ಟೆಸ್ಟ್ ಮ್ಯಾಚ್ ಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ ಸಮಬಲ ಸಾಧಿಸಿದೆ. ಕೇಪ್ ಟೌನ್ ನಲ್ಲಿ ನಡೆಯಲಿರುವ ಮುಂದಿನ ಮೂರು ಟೆಸ್ಟ್ ಪಂದ್ಯಗಳು ಉಭಯ ತಂಡಗಳಿಗೂ ನಿರ್ಣಾಯಕ.
ದಕ್ಷಿಣ ಆಫ್ರಿಕಾ ನೆಲದಲ್ಲಿ ಇನ್ನೂ ಟೆಸ್ಟ್ ಸರಣಿ ಗೆಲ್ಲದ ಭಾರತಕ್ಕೆ ಇದೊಂದು ಸುವರ್ಣಾವಕಾಶ. ಆದ್ರೆ ಆಫ್ರಿಕಾ ನೆಲದಲ್ಲಿ ಟೀಂ ಇಂಡಿಯಾವನ್ನು ಗಾಯದ ಸಮಸ್ಯೆ ಕಾಣುತ್ತಿದೆ.
ಬೆನ್ನಿನ ನೋವಿನಿಂದಾಗಿ ನಾಯಕ ವಿರಾಟ್ ಕೊಹ್ಲಿ ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು.
ಎರಡನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್. ಕೇಪ್‌ಟೌನ್‌ನಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್‌ಗೆ ವಿರಾಟ್ ಕೊಹ್ಲಿ ಮರಳುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
“ವಿರಾಟ್ ಕೊಹ್ಲಿ ಪ್ರಸ್ತುತ ಚೇತರಿಸಿಕೊಳ್ಳುತ್ತಿದ್ದಾರೆ. ಶೀಘ್ರದಲ್ಲೇ ಕೇಪ್ ಟೌನ್‌ನಲ್ಲಿ ನೆಟ್ ಸೆಷನ್‌ನಲ್ಲಿ ಭಾಗವಹಿಸುತ್ತಾರೆ ಎಂದು ನಾನು ಭಾವಿಸುತ್ತೇನೆ.
ನಾನು ಅವರ ಗಾಯದ ಬಗ್ಗೆ ಕಾಲಕಾಲಕ್ಕೆ ವೈದ್ಯರೊಂದಿಗೆ ಚರ್ಚಿಸುತ್ತೇನೆ. ಅವರು ಮೂರನೇ ಟೆಸ್ಟ್‌ಗೆ ಲಭ್ಯರಾಗುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ ರಾಹುಲ್ ದ್ರಾವಿಡ್.
ಇನ್ನು ಈ ಸರಣಿಯಲ್ಲಿ ನಮ್ಮ ಬ್ಯಾಟ್ಸ್‌ಮನ್‌ಗಳು ಅಮೋಘ ವಾಗಿ ಆಡುತ್ತಿದ್ದಾರೆ. ನಾವು ಇನ್ನೊಂದು 50-60 ರನ್ ಗಳಿಸಿದ್ದರೆ ಚೆನ್ನಾಗಿತ್ತು.ಹಾಗೆಯೇ ಹನುಮ ವಿಹಾರಿ ಎರಡೂ ಇನ್ನಿಂಗ್ಸ್‌ನಲ್ಲಿ ಅಮೋಘ ಆಟವಾಡಿದರು ಎಂದರು.








