ಟೀಂ ಇಂಡಿಯಾದ ಮಾಜಿ ನಾಯಕ ಮತ್ತು ಕನ್ನಡಿಗ ರಾಹುಲ್ ದ್ರಾವಿಡ್ ಅವರಿಗೆ ಕ್ರಿಕೆಟ್ ಕ್ಷೇತ್ರದಲ್ಲಿನ ಅಮೂಲ್ಯ ಸೇವೆಗೆ ಕರ್ನಲ್ CK ನಾಯುಡು ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.
ಆಟಗಾರನಾಗಿ ಹಾಗೂ ತಂಡದ ನಾಯಕನಾಗಿ ಭಾರತ ತಂಡವನ್ನು ಅನೇಕ ಸ್ಮರಣೀಯ ಗೆಲುವುಗಳತ್ತ ಮುನ್ನಡೆಸಿದ ದ್ರಾವಿಡ್, ನಂತರ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದರು. ಅವರ ಮಾರ್ಗದರ್ಶನದಲ್ಲಿ ಭಾರತ 2024ರ T20 ವಿಶ್ವಕಪ್ ಗೆದ್ದು ಮಹತ್ವದ ಸಾಧನೆ ಮಾಡಿತ್ತು.
ದ್ರಾವಿಡ್ ತಮ್ಮ ಕೋಚಿಂಗ್ ಅವಧಿಯಲ್ಲಿ ಹಲವು ಯುವ ಪ್ರತಿಭಾವಂತ ಆಟಗಾರರನ್ನು ಬೆಳೆಸಿ ಕ್ರಿಕೆಟ್ಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಕ್ರಿಕೆಟ್ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
ಬಿಸಿಸಿಐ ವತಿಯಿಂದ ಮಾರ್ಚ್ 15ರಂದು ನಡೆಯುವ ಸಮಾರಂಭದಲ್ಲಿ ರಾಹುಲ್ ದ್ರಾವಿಡ್ ಅವರಿಗೆ ಈ ಗೌರವವನ್ನು ನೀಡಿ ಸನ್ಮಾನಿಸಲಾಗುತ್ತದೆ.







