ಆಪ್ತರಿಗೆ ಸರ್ಕಾರ ಬ್ಯಾಂಕುಗಳ ಮಾರಾಟ.. ದೇಶದ ಆರ್ಥಿಕ ಭದ್ರತೆಗೆ ಧಕ್ಕೆ – ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ
ನವದೆಹಲಿ: ಕೇಂದ್ರ ಸರ್ಕಾರ ಬ್ಯಾಂಕುಗಳನ್ನ ಖಾಸಗಿಕರಣ ಮಾಡುತ್ತಿರುವುದನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೀವ್ರವಾಗಿ ವಿರೋಧಿಸಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು ಸಾರ್ವಜನಿಕ ವಲಯ ಬ್ಯಾಂಕುಗಳನ್ನು ತಮ್ಮ ಆಪ್ತರಿಗೆ ಮಾರಾಟ ಮಾಡುವ ಮೂಲಕ ಸರ್ಕಾರ ದೇಶದ ಹಣಕಾಸು ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುತ್ತಿದೆ. ಈ ಮೂಲಕ ಸರ್ಕಾರವು ಲಾಭವನ್ನು ಖಾಸಗೀಕರಣಗೊಳಿಸುತ್ತಿದೆ ಮತ್ತು ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.
ಕೊರೊನಾ | ಕಳೆದ 24 ಗಂಟೆಗಳಲ್ಲಿ 28,903 ಹೊಸ ಕೇಸ್ ಪತ್ತೆ
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತ ಸರ್ಕಾರ ಲಾಭವನ್ನು ಖಾಸಗೀಕರಣಗೊಳಿಸಿ ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ. ಸಾರ್ವಜನಿಕ ವಲಯ ಬ್ಯಾಂಕುಗಳನ್ನು ತಮ್ಮ ಆಪ್ತರಿಗೆ ಮಾರಾಟ ಮಾಡುವ ಮೂಲಕ ಭಾರತದ ಆರ್ಥಿಕ ಭದ್ರತೆಗೆ ಮೋದಿ ನೇತೃತ್ವದ ಮೋದಿ ಸರ್ಕಾರ ಧಕ್ಕೆ ತರುತ್ತಿದೆ ಎಂದು ಆರೋಪಿಸಿದ್ದಾರೆ.