ಕುಮಾರ್ ವಿಶ್ವಾಸ್ ಮಾಡಿದ ಆರೋಪಕ್ಕೆ ಅರವಿಂದ ಕೆಜ್ರಿವಾಲ್ ಸ್ಪಷ್ಟನೆ ಕೇಳಿದ ರಾಹುಲ್ ಗಾಂಧಿ
ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಪಕ್ಷದ ಮಾಜಿ ಸಹೋದ್ಯೋಗಿ ಕುಮಾರ್ ವಿಶ್ವಾಸ್ ಮಾಡಿರುವ ಆರೋಪ ನಿಜವೇ ಎಂದು ಸ್ಪಷ್ಟಪಡಿಸುವಂತೆ ರಾಹುಲ್ ಗಾಂಧಿ ಕೇಳಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಎರಡು ದಿನ ಮುಂಚಿತವಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಎಎಪಿ ಮುಖ್ಯಸ್ಥರನ್ನ ಪ್ರಶ್ನಿಸಿದ್ದಾರೆ.
ಆಮ್ ಆದ್ಮಿ ಪಕ್ಷದ (ಎಎಪಿ) ಸಂಸ್ಥಾಪಕರಲ್ಲಿ ಒಬ್ಬರಾದ ವಿಶ್ವಾಸ್, ಕೇಜ್ರಿವಾಲ್ ಅವರು ಪಕ್ಷದಲ್ಲಿದ್ದಾಗ ಪಂಜಾಬ್ನಲ್ಲಿ ಪ್ರತ್ಯೇಕತಾವಾದಿಗಳಿಗೆ ಬೆಂಬಲ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.
“ಕೇಜ್ರಿವಾಲ್ಜಿ, ನೇರ ಉತ್ತರ ಕೊಡಿ — ಕುಮಾರ್ ವಿಶ್ವಾಸ್ ಹೇಳುತ್ತಿರುವುದು ಸತ್ಯವೇ? ಹೌದು ಅಥವಾ ಇಲ್ಲ” ಎಂದು ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. Rahul Gandhi asks Kejriwal to clarify on allegations levelled against him by Kumar Vishwas
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ “ಪ್ರತ್ಯುತ್ತರಕ್ಕಾಗಿ ಕಾಯುತ್ತಿದ್ದೇನೆ” ಎಂದು ಹೇಳಿದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ವಿಶ್ವಾಸ್ ಅವರ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಏಕೆ ಸ್ಪಷ್ಟನೆ ನೀಡುತ್ತಿಲ್ಲ ಎಂದು ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದ್ದಾರೆ.
“ತಮ್ಮ ಪಕ್ಷದ ಸಂಸ್ಥಾಪಕ ಕುಮಾರ್ ವಿಶ್ವಾಸ್ ನೀಡಿರುವ ಹೇಳಿಕೆ ಬಗ್ಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ ನೀಡಬೇಕು. ಕುಮಾರ್ ವಿಶ್ವಾಸ್ ಹೇಳಿಕೆಗೆ ಕೇಜ್ರಿವಾಲ್ ಏಕೆ ಪ್ರತಿಕ್ರಿಯಿಸುತ್ತಿಲ್ಲ?” ಎಂದು ಟ್ವೀಟ್ನಲ್ಲಿ ಪ್ರಶ್ನಿಸಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಕೇಜ್ರಿವಾಲ್, “ಈ ಭ್ರಷ್ಟರೆಲ್ಲ ನನ್ನನ್ನು ಭಯೋತ್ಪಾದಕ ಎಂದು ಕರೆಯುತ್ತಿದ್ದಾರೆ. ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವ, ವಿದ್ಯುತ್ ಸಮಸ್ಯೆಗಳನ್ನು ಸರಿಪಡಿಸುವ ವಿಶ್ವದ ಮೊದಲ ಭಯೋತ್ಪಾದಕ ನಾನು. ನಾನು ವಿಶ್ವದ ಮೊದಲ ‘ಸಿಹಿ’ ಭಯೋತ್ಪಾದಕ.
“ಬ್ರಿಟಿಷರು ಭಗತ್ ಸಿಂಗ್ಗೆ ಭಯಪಡುತ್ತಿದ್ದರು ಮತ್ತು ಅದಕ್ಕಾಗಿಯೇ ಅವರನ್ನು ಭಯೋತ್ಪಾದಕ ಎಂದು ಕರೆಯಲಾಗುತ್ತಿತ್ತು. ನಾನು ಭಗತ್ ಸಿಂಗ್ ಅವರ ಶಿಷ್ಯ,” ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ..








