ಬೆಂಗಳೂರು : ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹುಟ್ಟುಹಬ್ಬದ ಹಿನ್ನೆಲೆ ಆರ್. ಗುಂಡೂರಾವ್ ಫೌಂಡೇಶನ್ ವತಿಯಿಂದ ‘ಗೋ ಗ್ರೀನ್ ಗಾಂಧಿನಗರ’ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನಕ್ಕೆ ಗಾಂಧಿನಗರದ ಶೇಷಾದ್ರಿಪುರಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ ಹುತಾತ್ಮರಾದ ಅಮರ ಸೈನಿಕರಿಗೆ ಫೌಂಡೇಶನ್ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಇನ್ನು ಅಭಿಯಾನದ ಮೂಲಕ ಗಾಂಧಿನಗರ ಕ್ಷೇತ್ರದ ಏಳು ವಾರ್ಡ್ಗಳಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಡಲಾಗುತ್ತಿದೆ. ಹೊಂಗೆ, ಬೇವು, ಸಂಪಿಗೆ, ನೇರಳೆ ಮತ್ತು ಕಾಡು ಬಾದಾಮಿ ಮಾದರಿಯ ಗಿಡಗಳನ್ನು ನೆಡಲು ಉದ್ದೇಶಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಶಾಸಕ ದಿನೇಶ್ ಗುಂಡೂರಾವ್ ಅವರ ಮಗಳು ಅನನ್ಯ ಗುಂಡೂರಾವ್, ಬಿಬಿಎಂಪಿ ಸದಸ್ಯೆ ಶ್ರೀಮತಿ ಲತಾ ನವೀನ್ ಕುಮಾರ್, ಕಾಂಗ್ರೆಸ್ ಮುಖಂಡ ನವೀನ್ ಕುಮಾರ್, ರಘುನಾಥ್ ಸೇರಿದಂತೆ ಹಲವು ಪ್ರಮುಖರು ಕಾರ್ಯಕ್ರಮದಲ್ಲಿ ಹಾಜರಿದ್ದರು.