ಕಠಿಣ ಸಂದರ್ಭದಲ್ಲೂ ಕಾಂಗ್ರೆಸ್ ಪರ ನಿಂತ ನಾಯಕ ಅಹ್ಮದ್ ಪಟೇಲ್
ನವದೆಹಲಿ : ರಾಜ್ಯ ಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೇರಿದಂತೆ ದೇಶದ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.
ಟ್ವಿಟ್ಟರ್ ನಲ್ಲಿ ರಾಹುಲ್ ಗಾಂಧಿ, ಇಂದು ಅತ್ಯಂತ ದುಃಖದಾಯ ದಿನ. ಅಹ್ಮದ್ ಪಟೇಲ್ ಕಾಂಗ್ರೆಸ್ ಪಕ್ಷದ ಆಧಾರ ಸ್ತಂಭಗಳಲ್ಲಿ ಒಬ್ಬರಾಗಿದ್ದರು.
ಎಂತಹ ಕಠಿಣ ಸಂದರ್ಭಗಳಲ್ಲಿಯೂ ಕಾಂಗ್ರೆಸ್ ಪರವಾಗಿ ನಿಂತ ನಾಯಕ. ಅಹ್ಮದ್ ಪಟೇಲ್ ನಮ್ಮ ದೊಡ್ಡ ಶಕ್ತಿಯಾಗಿದ್ದರು.
ನಾವು ಪಟೇಲರು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ ಎಂದು ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಕಟ್ಟುವಲ್ಲಿ ಅಹ್ಮದ್ ಪಟೇಲ್ ಪ್ರಮುಖ ಪಾತ್ರ
ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಹ್ಮದ್ ಪಟೇಲ್ ಇಂದು ಬೆಳಗಿನ ಜಾವ 3.30ಕ್ಕೆ ನಿಧನ ಹೊಂದಿದ್ದಾರೆ.
ಸೋನಿಯಾ ಗಾಂಧಿ ಆಪ್ತರಲ್ಲಿ ಅಹ್ಮದ್ ಪಟೇಲ್ ಒಬ್ಬರಾಗಿದ್ದರು. ಅಹ್ಮದ್ ಪಟೇಲ್ ಅವರ ಪುತ್ರ ಇಂದು ಬೆಳಗ್ಗೆ 3.30ಕ್ಕೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ಟ್ವಿಟ್ಟರ್ ಮೂಲಕ ಮಾಹಿತಿ ನೀಡಿದ್ದಾರೆ.
ಅಹ್ಮದ್ ಪಟೇಲ್ ಅವರಿಗೆ ಅಕ್ಟೋಬರ್ 1 ರಂದು ಕೊರೊನಾ ಸೋಂಕಿರುವುದು ದೃಢಪಟ್ಟಿತ್ತು. ಹೀಗಾಗಿ ಅವರು ಹೋಂ ಐಸೋಲೆಷನ್ ಆಗಿದ್ದರು.
ಬಳಿಕ ಆಸ್ಪತ್ರೆ ಶಿಫ್ಟ್ ಆಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









