ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ‘ ಕೊರೊನಾ ಪಾಸಿಟಿವ್’..!
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿರುವುದು ದೃಢವಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೆಲ ಲಘು ರೋಗಲಕ್ಷಣಗಳು ಕಂಡುಬಂದ ತಕ್ಷಣ ಟೆಸ್ಟ್ ಮಾಡಿಸಿದ ವೇಳೆ ಪಾಸಿಟಿವ್ ಬಮದಿದೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ, ದಯವಿಟ್ಟು ಎಲ್ಲಾ ಸುರಕ್ಷತಾ ನಿಯಮಗಳನ್ನು ಅನುಸರಿಸಿ ಮತ್ತು ಸುರಕ್ಷಿತವಾಗಿರಿ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ಇನ್ನೂ ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೂ ಸಹ ಕೋವಿಡ್ ಪಾಸಿಟಿವ್ ಬಂದಿತ್ತು. ಕೋವಿಡ್ ಲಸಿಕೆಯ ಎರಡು ಡೋಸ್ ಗಳನ್ನು ಪಡೆದ ನಂತರ ಸೋಂಕು ತಗುಲಿರುವುದು ದೃಢವಾಗಿತ್ತು.
BIGGBOSS 8 : ತಂತ್ರಗಾರಿಕೆ ಇರಬೇಕು, ಕುತಂತ್ರ ಅಲ್ಲ… ನಿಧಿ , ಮಂಜು , ದಿವ್ಯಾ ವಿರುದ್ಧ ಅರವಿಂದ್ ಫುಲ್ ಗರಂ..!
ಜನರಿಗೆ ಸೇವೆ ನೀಡುವುದರಲ್ಲಿ ಸರ್ಕಾರ ಸೋತಿದೆ : ಹೆಚ್.ವಿಶ್ವನಾಥ್