ಪ್ರತಿಭಟನೆ ವೇಳೆ ಮೃತಪಟ್ಟ ರೈತ ಕುಟುಂಗಳಿಗೆ ಉದ್ಯೋಗ – ಪರಿಹಾರಕ್ಕೆ ರಾಹುಲ್ ಗಾಂಧಿ ಆಗ್ರಹ..!
ನವದೆಹಲಿ: ಕೇಂದ್ರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರು ನಡೆಸಿದ್ದ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೂ ತಿರುಗಿತ್ತು. ಅನೇಕ ರೈತರು ಜೀವ ಕಳೆದುಕೊಂಡಿದ್ದಾರೆ.. ಕಡೆಗೂ ರೈತರ ಹೋರಾಟಕ್ಕೆ ಮಣಿದ ಸರ್ಕಾರವು ಪ್ರಯಿಭಟನೆ ಹಿಂಪಡೆದಿದೆ.. ಆದ್ರೆ ಪ್ರತಿಭಟನೆ ಶುರುವಾದಾಗಿನಿಂದಲೂ ಇದೇ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೀಗ ಸದನದಲ್ಲಿ ಸಂತ್ರಸ್ತ ರೈತರ ಕುಟುಂಬಗಳಿಗೆ ಉದ್ಯೋಗ – ಪರಿಹಾರ ಒದಗಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಅಲ್ಲದೇ ವರ್ಷಪೂರ್ತಿ ನಡೆದ ಪ್ರತಿಭಟನೆಯಲ್ಲಿ ಮೃತಪಟ್ಟ ರೈತರ ಮಾಹಿತಿಯೂ ಕೇಂದ್ರ ಸರ್ಕಾರದ ಬಳಿ ಇಲ್ಲ ಎಂದು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಅವರು ಪಂಜಾಬ್ ನಲ್ಲಿ ಪರಿಹಾರ ಹಾಗೂ ಉದ್ಯೋಗಾವಕಾಶ ಸೌಲಭ್ಯ ಪಡೆದ ರೈತರ ಪಟ್ಟಿಯನ್ನೂ ಶೂನ್ಯವೇಳೆಯಲ್ಲಿ ಪ್ರಸ್ತುತಪಡಿಸಿದರು.
ಜೊತೆಗೆ ಪಂಜಾಬ್ ಸರ್ಕಾರವು 400ಕ್ಕೂ ಹೆಚ್ಚು ರೈತರ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದು, ಈ ಪೈಕಿ 152 ಜನರಿಗೆ ಉದ್ಯೋಗವನ್ನೂ ನೀಡಲಾಗಿದೆ. ಹರಿಯಾಣದ 70 ರೈತರ ಪಟ್ಟಿಯೂ ತಮ್ಮ ಬಳಿ ಇದೆ ಎಂದು ರಾಹುಲ್ ಹೇಳಿದರು. ರೈತ ಹೋರಾಟದಲ್ಲಿ ಅಂದಾಜು 700 ರೈತರು ಮೃತಪಟ್ಟಿದ್ದಾರೆ. ಪ್ರಧಾನಿಯೇ ತಪ್ಪನ್ನು ಒಪ್ಪಿಕೊಂಡಿದ್ದಾರೆ, ರೈತರ ಕ್ಷಮೆ ಕೇಳಿದ್ದಾರೆ. ಆದರೆ, ಎಷ್ಟು ಜನ ರೈತರು ಪ್ರತಿಭಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ಕೃಷಿ ಸಚಿವರನ್ನು ಕೇಳಿದರೆ, ತಮಗೆ ಆ ಬಗ್ಗೆ ಮಾಹಿತಿ ಇಲ್ಲ ಎನ್ನುತ್ತಾರೆ ಎಂದು ಟೀಕಿಸಿದ್ದಾರೆ.. ಇದೇ ವೇಳೆ ರೈತ ಕುಟುಂಬಗಳಿಗೆ ದೊರೆಯಬೇಕಾದ ಹಕ್ಕನ್ನು ನೀಡಬೇಕು ಎಂದು ಒತ್ತಾಯಿಸಿದ್ರು..