Rahul Gandhi : ಮೋದಿ ವಿರುದ್ಧದ ಹೇಳಿಕೆಗೆ ಭಾರಿ ಬೆಲೆ ತೆತ್ತ ರಾಹುಲ್ ಗಾಂಧಿ – ‘ಲೋಕಸಭೆ ಸದಸ್ಯತ್ವದಿಂದ ಅನರ್ಹ’
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೆಸರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಪ್ರಮುಖ ನಾಯಕ ರಾಹುಲ್ ಗಾಂಧಿ ಗೆ ಮತ್ತೊಂದು ಭಾರಿ ಹಿನ್ನಡೆ ಉಂಟಾಗಿದೆ, ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಆರೋಪಿ ಎಂದು ಸಾಬೀತಾಗಿರುವ ಕಾರಣ 2019 ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.
1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8(3)ರ ಅಡಿಯಲ್ಲಿ ಅವರನ್ನ ಅನರ್ಹಗೊಳಿಸಲಾಯಿತು. ಇದರಿಂದಾಗಿ ಅವರ ಸಂಸತ್ ಸದಸ್ಯತ್ವವನ್ನು ಈಗಾಗಲೇ ರದ್ದುಪಡಿಸಲಾಗಿದೆ ಎಂದು ಲೋಕಸಭೆ ಸಚಿವಾಲಯ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
“ಕೇರಳದ ವಯನಾಡ್ ಸಂಸದೀಯ ಕ್ಷೇತ್ರವನ್ನ ಪ್ರತಿನಿಧಿಸುವ ಲೋಕಸಭಾ ಸದಸ್ಯರಾದ ರಾಹುಲ್ ಗಾಂಧಿ ಅವರನ್ನ 23 ಮಾರ್ಚ್ 2023 ರಿಂದ ಜಾರಿಗೆ ಬರುವಂತೆ ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಲಾಗುತ್ತದೆ ಏಕೆಂದರೆ ಅವರು ಆರ್ಟಿಕಲ್ 102 (1) (ಇ) ನಿಬಂಧನೆಗಳ ಅಡಿಯಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ಭಾರತದ ಸಂವಿಧಾನದ ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8 ರ ಅಡಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ, ”ಎಂದು ಲೋಕಸಭೆ ಸೆಕ್ರೆಟರಿಯೇಟ್ ಇಂದು ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ.
ಸೂರತ್ ನ್ಯಾಯಾಲಯ ನೀಡಿದ ತೀರ್ಪಿನ ಕುರಿತು ರಾಹುಲ್ ಗಾಂಧಿ ಅವರು ಈಗಾಗಲೇ ಹೈಕೋರ್ಟ್ಗೆ ಮೊರೆ ಹೋಗಿದ್ದಾರೆ. ಆದರೆ, ಅದಕ್ಕೂ ಮುನ್ನ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಈಗಾಗಲೇ ವಾಗ್ದಾಳಿ ಶುರುವಿಟ್ಟುಕೊಂಡಿದೆ.
Rahul Gandhi disqualified as Lok Sabha MP after getting convicted in Modi surname case