Rahul Gandhi | ತಾಯಿಯ ಶ್ಯೂ ಲೇಸ್ ಕಟ್ಟಿದ ರಾಹುಲ್ ಗಾಂಧಿ
ಮಂಡ್ಯ : ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೆಜ್ಜೆ ಹಾಕಿದ್ದಾರೆ.
ಮಂಡ್ಯದ ಪಾಂಡವಪುರದ ಬೆಳ್ಳಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಪಾದಯಾತ್ರೆ ಶುರುವಾಗಿದೆ.
ಪಾದಯಾತ್ರೆಯಲ್ಲಿ ನಡೆಯುತ್ತಿದ್ದಾಗ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಶ್ಯೂ ಲೇಸ್ ಬಿಚ್ಚಿತ್ತು.
ಆಗ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರ ಶ್ಯೂ ಲೇಸ್ ಕಟ್ಟಿದ್ದಾರೆ.
ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಎರಡು ದಿನಗಳ ವಿರಾಮದ ಬಳಿಕ ಪೂರ್ವನಿಗದಿಯಂತೆ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಸೋನಿಯಾ ಗಾಂಧಿ ಕೆಲಹೊತ್ತು ಹೆಜ್ಜೆ ಹಾಕಿದರು.

ಆ ಮೂಲಕ ಪಾದಯಾತ್ರೆಗೆ ಸೋನಿಯಾ ಗಾಂಧಿ ಬಲ ತುಂಬಿದ್ದಾರೆ. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವರು ಹೆಜ್ಜೆ ಹಾಕಿದರು.
ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಹೊತ್ತು ಮಾತ್ರ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದರು.
ಇದಾದ ಬಳಿಕ ಸೋನಿಯಾ ಗಾಂಧಿ ಅವರನ್ನು ರಾಹುಲ್ ಗಾಂಧಿ ಕಾರು ಹತ್ತಿಸಿ ಕಳುಹಿಸಿದರು.