ನವದೆಹಲಿ: ರಾಹುಲ್ ಗಾಂಧಿ ಭಯೋತ್ಪಾದಕ. ಆತ ಭಾರತೀಯನಲ್ಲ ಎಂದು ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು (Ravneet Singh Bittu) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇವರು ಮೊದಲು ಮುಸ್ಲಿಂರನ್ನು ಬಳಸಿಕೊಳ್ಳಲು ಯತ್ನಿಸಿದರು. ಆದರೆ, ಆಗಲಿಲ್ಲ. ಹೀಗಾಗಿ ಸಿಖ್ಖರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ. ರಾಹುಲ್ ಗಾಂಧಿಗೂ ಮೊದಲು ದೇಶದ ಮೋಸ್ಟ್ ವಾಂಟೆಡ್ ವ್ಯಕ್ತಿಗಳು ಹಿಂದೆ ಇಂತಹ ಹೇಳಿಕೆಗಳನ್ನು ನೀಡಿದ್ದರು. ಭಯೋತ್ಪಾದಕರು ಕೂಡ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಶ್ಲಾಘಿಸಿದ್ದಾರೆ. ಅಂತಹ ಜನರು ರಾಹುಲ್ ಗಾಂಧಿ ಬೆಂಬಲಿಸುವುದಾದರೆ ದೇಶದ ನಂ.1 ಭಯೋತ್ಪಾದಕರಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಹುಲ್ ಭಾರತೀಯನಲ್ಲ. ನನ್ನ ಅಭಿಪ್ರಾಯದಲ್ಲಿ ರಾಹುಲ್ ಗಾಂಧಿ ಭಾರತೀಯನಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ದೇಶದ ಹೊರಗೆ ಕಳೆದಿದ್ದಾರೆ. ಅವರ ಸ್ನೇಹಿತರು ಮತ್ತು ಕುಟುಂಬದವರು ಅಲ್ಲಿಯೇ ಇದ್ದಾರೆ. ಅದಕ್ಕಾಗಿಯೇ ಅವರು ಎಲ್ಲೋ ಹೋಗುವುದರಿಂದ ತಮ್ಮ ದೇಶವನ್ನು ಹೆಚ್ಚು ಪ್ರೀತಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.