ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ದೇಶ - ವಿದೇಶ

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

Shwetha by Shwetha
July 22, 2026
in ದೇಶ - ವಿದೇಶ, National, Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಎದುರೇ ಹಠಾತ್ ಧರಣಿ ಸತ್ಯಾಗ್ರಹ ನಡೆಸಿದರು.

ಹೈ ಸೆಕ್ಯೂರಿಟಿ ವಲಯದಲ್ಲಿ ಹೈವೋಲ್ಟೇಜ್ ಡ್ರಾಮಾ

Related posts

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

July 22, 2026
ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

July 22, 2026

ದೆಹಲಿಯ ಅತ್ಯಂತ ಬಿಗಿ ಭದ್ರತೆಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದ ಎದುರು ಕಾಂಗ್ರೆಸ್ ನಾಯಕರು ದಿಢೀರ್ ಆಗಿ ಪ್ರತ್ಯಕ್ಷವಾಗಿ ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ಆರಂಭಿಸಿದರು. ಈ ಬೆಳವಣಿಗೆಯಿಂದ ದೆಹಲಿ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳು ಕಂಗಾಲಾದವು. ಪೊಲೀಸರ ಲಾಠಿಚಾರ್ಜ್ ನಿಂದ ಗಾಯಗೊಂಡು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ಕೂಡಲೇ ರಾಹುಲ್ ಮತ್ತು ಪ್ರಿಯಾಂಕಾ ಈ ನಿರ್ಧಾರ ಕೈಗೊಂಡರು.

ಈ ಐತಿಹಾಸಿಕ ಧರಣಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಹಲವು ರಾಜ್ಯಗಳ ಕಾಂಗ್ರೆಸ್ ನಾಯಕರು ಮತ್ತು ಸಂಸದರು ಭಾಗವಹಿಸಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ನಾಯಕರು, ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಪ್ರತಿಭಟನಾಕಾರರು ಕೇವಲ ಘೋಷಣೆಗಳಿಗೆ ಸೀಮಿತವಾಗದೆ, ನೇರವಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಬಿಗಿಪಟ್ಟು ಹಿಡಿದರು. ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಮತ್ತು ಲಾಠಿ ಪ್ರಯೋಗ ಮಾಡಿರುವುದು ಅಕ್ಷಮ್ಯ ಅಪರಾಧ. ದೇಶದ ಯುವಶಕ್ತಿಯ ಮೇಲೆ ದಾಳಿ ಮಾಡಿದ ಈ ಮೂವರು ನಾಯಕರು ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಗುಡುಗಿದರು.

ಧರಣಿಯ ವೇಳೆ ಮಾತನಾಡಿದ ರಾಹುಲ್ ಗಾಂಧಿ, ದೇಶದ ಯುವಕರ ಭವಿಷ್ಯವನ್ನು ಹಾಳುಗೆಡವಿರುವ ಪ್ರಧಾನಿ ಮೋದಿಯವರಿಂದ ನಾವು ಉತ್ತರ ಕೇಳಲು ಇಲ್ಲಿಗೆ ಬಂದಿದ್ದೇವೆ. ನಿನ್ನೆ ವಿದ್ಯಾರ್ಥಿಗಳ ಮೇಲೆ ನಡೆದ ಕ್ರೂರ ಪೊಲೀಸ್ ವರ್ತನೆಗೆ ಮೋದಿಯವರೇ ನೇರ ಹೊಣೆ. ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು. ಯುವಕರ ಧ್ವನಿಯನ್ನು ಹತ್ತಿಕ್ಕಲು ಪೊಲೀಸರನ್ನು ಬಳಸಿಕೊಳ್ಳುತ್ತಿರುವ ಈ ಸರ್ಕಾರ ಹೇಡಿ ಸರ್ಕಾರ ಎಂದು ಸಾಮಾಜಿಕ ಜಾಲತಾಣದಲ್ಲೂ ಹರಿಹಾಯ್ದಿದ್ದಾರೆ.

ಈ ಧರಣಿ ದೇಶಾದ್ಯಂತ ಸಂಚಲನ ಮೂಡಿಸಿದ್ದು, ನೀಟ್ ಹಗರಣದ ಕಿಚ್ಚು ಮತ್ತಷ್ಟು ಜೋರಾಗಿದೆ.

ShareTweetSendShare
Join us on:

Related Posts

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

ವಿದ್ಯಾರ್ಥಿಗಳು ಲಾಠಿ ಏಟು ತಿನ್ನುವಾಗ ಹೋಟೆಲ್ ನಲ್ಲಿ ಬರ್ಗರ್ ಮೆಲ್ಲುತ್ತಿದ್ದ ವಕ್ತಾರ ಉಚ್ಚಾಟನೆ: ವಿಜೇತಾ ದಹಿಯಾ ವಿರುದ್ಧ ಕಾಕ್ರೋಚ್ ಜನತಾ ಪಾರ್ಟಿ ಗರಂ

by Shwetha
July 22, 2026
0

ನವದೆಹಲಿ: ದೇಶಾದ್ಯಂತ ಸದ್ದು ಮಾಡುತ್ತಿರುವ ನೀಟ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನಾ ರ‍್ಯಾಲಿಯ...

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

ವಿದ್ಯಾರ್ಥಿಗಳ ಮೇಲೆ ಲಾಠಿ ಪ್ರಹಾರ ಏಕೆ?; ಸಂಸತ್‌ನಲ್ಲಿ ಚರ್ಚೆಗೆ ವಿರೋಧ ಪಕ್ಷ ಒತ್ತಾಯ

by Shwetha
July 22, 2026
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram