ಯುರೋಪ್ ಪ್ರವಾಸಕ್ಕಾಗಿ ಮತ್ತೊಮ್ಮೆ ವಿದೇಶಕ್ಕೆ ಹಾರಿದ ರಾಹುಲ್ ಗಾಂಧಿ….
ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಮ್ಮೆ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಈ ಭಾರಿ ವೈಯಕ್ತಿಕ ಪ್ರವಾಸಕ್ಕಾಗಿ ಯುರೋಪ್ ಗೆ ತೆರಳಿದ್ದಾರೆ. ರಾಷ್ಟ್ರಪತಿ ಚುನಾವಣೆ ಹಾಗೂ ಸಂಸತ್ತಿನ ಮುಂಗಾರು ಅಧಿವೇಶನಗಳು ಇದೇ 18ರಂದು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇದಕ್ಕೂ ಒಂದು ದಿನ ಮುಂಚಿತವಾಗಿ ಭಾನುವಾರ ವಾಪಸಾಗಲಿದ್ದಾರೆ ಎನ್ನಲಾಗಿದೆ.
ಕುತೂಹಲದ ಸಂಗತಿ ಎಂದರೆ ಇದೇ ತಿಂಗಳ 14ರಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಯಲಿದೆ. ಯುರೋಪ್ ಪ್ರವಾಸದ ಕಾರಣ ರಾಹುಲ್ ಗಾಂಧಿ ಗೈರುಹಾಜರಾಗಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವೈಫಲ್ಯದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪ್ರಸ್ತುತ ಸೋನಿಯಾ ಗಾಂಧಿ ಅವರು ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ.
Rahul Gandhi Leaves For Europe, Set To Miss Key Congress Meeting