ಬರೀ ಒಣ ಪ್ರಚಾರ, ಲಸಿಕೆ ಎಲ್ಲಿ : ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಕಿಡಿ
ನವದೆಹಲಿ: ಕೋವಿಡ್ ಲಸಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ಆರಂಭದಿಂದಲೂ ಟೀಕಿಸುತ್ತಲೇ ಬಂದಿದ್ದಾರೆ… ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಸಸಖತ್ ಆಕ್ಟೀವ್ ಆಗಿರುವ ರಾಹುಲ್ ಗಾಂಧಿ ಅವರು ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಇದೀಗ ಮತ್ತೊಮ್ಮೆ ಲಸಿಕೆ ವಿಚಾರವಾಗಿ ಕಿಡಿಕಾರಿರುವ ಅವರು ರಾಹುಲ್ ಗಾಂಧಿ, ಮೋದಿ ಸರ್ಕಾರ ಬರೀ ಒಣ ಪ್ರಚಾರ ಮಾಡುತ್ತಿದೆ, ಲಸಿಕೆ ಮಾತ್ರ ಸಿಗುತ್ತಿಲ್ಲ ಎಂದು ಟೀಕಿಸಿದ್ದಾರೆ. ಬರೀ ಮಾತಿನಲ್ಲಿ ಮಾತ್ರ ಮೋದಿ ಸರ್ಕಾರ ಲಸಿಕೆ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಿದೆ. ಲಸಿಕೆ ಬಗ್ಗೆ ಟೊಳ್ಳು ಭರವಸೆ ನೀಡುತ್ತಿದ್ದಾರೆ, ಆದರೆ ಲಸಿಕೆ ಮಾತ್ರ ಸಿಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ವೇರ್ ಆರ್ ವ್ಯಾಕ್ಸಿನ್ ಎಂದು ಹ್ಯಾಶ್ ಟ್ಯಾಗ್ ಹಾಕಿ ಪ್ರಶ್ನಿಸಿದ್ದಾರೆ.
ಸ್ಪುಟ್ನಿಕ್ ವಿ ಗೂ ಕೋವಾಕ್ಸಿನ್ ಮತ್ತು ಕೋವಿಶೀಲ್ಡ್ ಗೂ ಇರುವ ವ್ಯತ್ಯಾಸವೇನು?
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ.. ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಗಮನಕ್ಕೆ – ಇಲ್ಲಿದೆ ಮಹತ್ವದ ಮಾಹಿತಿ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.