ದ್ವೇಷದ ವಿಷ ಬಿತ್ತಿರುವಾಗ ಅಮೃತ ಮಹೋತ್ಸವಕ್ಕೆ ಅರ್ಥವಿದೆಯೇ..? : ರಾಹಹುಲ್ ಗಾಂಧಿ ಪ್ರಶ್ನೆ..?
ನವದೆಹಲಿ : ಸದಾ ಮೋದಿ , ಬಿಜೆಪಿ / ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಸುದ್ದಿಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದೀಗ ಮತ್ತೊಮ್ಮೆ ಕೇಂದ್ರ ಸರ್ಕಾರ, ಮೋದಿ ಅವರ ವಿರುದ್ಧ ವ್ಯಂಗ್ಯಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ. ದ್ವೇಷದ ವಿಷ ಬಿತ್ತಿರುವಾಗ ಅಮೃತ ಮಹೋತ್ಸವಕ್ಕೆ ಅರ್ಥವಿದೆಯೇ..? ಎಂದು ಪ್ರಶ್ನಿಸಿದ್ದಾರೆ.
ಇನ್ನೂ ಸ್ವಾತಂತ್ರ್ಯವೆಂಬುದು ಎಲ್ಲರಿಗೂ ಸಿಗದಿದ್ದಾಗ ಅದು ಎಂತಹ ಸ್ವಾತಂತ್ರ್ಯ. ದೇಶದಲ್ಲಿ ದ್ವೇಷದ ವಿಷವನ್ನು ಬಿತ್ತುತ್ತಿರುವಾಗ ಅಮೃತ ಮಹೋತ್ಸವಕ್ಕೆ ಅರ್ಥವಿದೆಯೇ ಎಂದು ಕಿಡಿಕಾರಿದ್ದಾರೆ. ಇನ್ನೂ ಅಸ್ಸಾಂನ ದರಂಗ್ ಜಿಲ್ಲೆಯಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಸಂದರ್ಭ ಪೊಲೀಸರು ಮತ್ತು ಭೂಮಿ ಕಬಳಿಸಿದ್ದಾರೆ ಎನ್ನಲಾಗಿರುವ ಆರೋಪಿಗಳ ನಡುವಿನ ಸಂಘರ್ಷದ ವೇಳೆ ನಡೆದ ಸಾವು ನೋವು ಹಿಂಸಾಚಾರದ ಕುರಿತಾಗಿ ಮಾತನಾಡಿರುವ ರಾಹುಲ್ ಗಾಂಧಿ ಅವರು ಈ ಹೇಳಿಕೆ ನೀಡಿದ್ದಾರೆ.
ಈ ಹಿಂಸಾಚಾರದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಎದೆಗೆ ಗುಂಡೇಟು ತಗುಲಿ ಬಿದ್ದಿದ್ದ ವ್ಯಕ್ತಿಯ ಮೇಲೆ ಛಾಯಾಗ್ರಾಹಕನೊಬ್ಬ ಹಾರಿ ನೆಗೆದು ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಸತ್ತು ಬಿದ್ದಿರುವ ವ್ಯಕ್ತಿಯ ಮೇಲೆ ನಡೆಸಿದ ದೌರ್ಜನ್ಯ ದ್ವೇಷದ ಪರಮಾವಧಿ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಆತನನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ನೀಡಲಾಯಿತು.