ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಅವರು ಸಂಚರಿಸುವಾಗ ರಸ್ತೆ ತಡೆದು ಅಡ್ಡಿ ಪಡಿಸಿದ ಘಟನೆಗೆ ಸಂಭದಿಸಿದಂತೆ , ಬಿಜೆಪಿ ನಾಯಕರು ಹಾಗೂ ಹಲವರು ತೀವ್ರ ಆಕ್ರೋಶ ವ್ಯಕ್ತಪಡಡಿಸಿದ್ದು ಪಂಜಾಬ್ ಸರ್ಕಾರದ ಭದ್ರತಾ ವ್ಯವಸ್ಥೆಯನ್ನ ತೀಕಿಸುತ್ತಿದ್ದಾರೆ,..
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ರಾಹುಲ್ ಗಾಂಧಿ ಅವರು ‘ನಮ್ಮ ಗಡಿಯಲ್ಲಿ ಭಾರೀ ರಾಷ್ಟ್ರೀಯ ಭದ್ರತಾ ಲೋಪ ಉಂಟಾಗಿದೆ. ಈ ಕುರಿತು ಪ್ರಧಾನಿ ಎಂದಾದರೂ ಪ್ರತಿಕ್ರಿಯಿಸುವರೇ’ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ..
ಪೂರ್ವ ಲಡಾಖ್ನ ಪಾಂಗಾಂಗ್ ಸರೋವರದ ಎರಡೂ ಬದಿಗಳಲ್ಲಿ ಚೀನಾ ಸೇತುವೆಯನ್ನು ನಿರ್ಮಿಸುತ್ತಿರುವ ಮಾಹಿತಿಯು ಉಪಗ್ರಹ ಚಿತ್ರದಲ್ಲಿ ಸೆರೆಯಾಗಿದೆ ಎಂದು ಮೂಲಗಳು ತಿಳಿಸಿದ್ದವು. ಈ ಕುರಿತು ಗುರುವಾರ ಸ್ಪಷ್ಟನೆ ನೀಡಿರುವ ಸರ್ಕಾರವು, ಪಾಂಗಾಂಗ್ ಸರೋವರದ ಚೀನಾ ಬದಿಯಲ್ಲಿ ಸೇತುವೆ ನಿರ್ಮಿಸಲಾಗುತ್ತಿದೆ. ಈ ಕುರಿತು ಸರ್ಕಾರವು ಪರಿಸ್ಥಿತಿಯನ್ನು ಅವಲೋಕಿಸುತ್ತಿದೆ ಎಂದು ಹೇಳಿತ್ತು.
ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯನ್ನು ಕಾಪಾಡಲು ಬೇಕಾದ ಎಲ್ಲ ಅಗತ್ಯ ಕ್ರಮಗಳನ್ನು ಸರ್ಕಾರವು ಕೈಗೊಳ್ಳುತ್ತಿದೆ. ಇದರ ಭಾಗವಾಗಿ, ಸರ್ಕಾರವು ಕಳೆದ ಏಳು ವರ್ಷಗಳ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಬಜೆಟ್ ಗಣನೀಯವಾಗಿ ಹೆಚ್ಚಿಸಿದೆ. ಹಿಂದೆಂದಿಗಿಂತಲೂ ಹೆಚ್ಚಿನ ರಸ್ತೆ ಹಾಗೂ ಸೇತುವೆ ನಿರ್ಮಾಣವನ್ನು ಪೂರ್ಣಗೊಳಿಸಲಾಗಿದೆ. ಇವೆಲ್ಲವೂ ಸ್ಥಳೀಯ ಜನರಿಗೆ ಸಂಪರ್ಕದ ಜೊತೆಗೆ ಸೇನೆಗೆ ಹೆಚ್ಚಿನ ಬಲವನ್ನು ಒದಗಿಸಲಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರರು ತಿಳಿಸಿದ್ದಾರೆ..








