Rahul Gandhi : ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷ್ಯ ಬೇಕಿಲ್ಲ; ದಿಗ್ವಿಜಯ್ ಸಿಂಗ್ ಹೇಳಿಕೆ ಸರಿ ಇಲ್ಲ ಎಂದ ರಾಹುಲ್ ಗಾಂಧಿ…
ನಮ್ಮ ಸೈನಿಕರು ನಡೆಸಿದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಯಾವುದೇ ಪುರಾವೆಗಳನ್ನ ತೋರಿಸುವ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ‘ಭಾರತ್ ಜೋಡೋ ಯಾತ್ರೆ’ ಅಂಗವಾಗಿ ಜಮ್ಮುವಿಗೆ ಭೇಟಿ ನೀಡುತ್ತಿರುವ ರಾಹುಲ್ ಗಾಂಧಿ ಇತ್ತೀಚೆಗೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.
ಇತ್ತೀಚೆಗೆ ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಸರ್ಜಿಕಲ್ ಸ್ಟ್ರೈಕ್ ಕುರಿತು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. “ಬಿಜೆಪಿ ನಾಯಕರು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಮಾತನಾಡುತ್ತಾರೆ. ಪಾಕಿಸ್ತಾನಿ ಭಯೋತ್ಪಾದಕರನ್ನು ಕೊಂದಿದ್ದೇವೆ ಎನ್ನುತ್ತಾರೆ. ಆದರೆ, ಇದುವರೆಗೂ ಈ ಬಗ್ಗೆ ಸೂಕ್ತ ಸಾಕ್ಷ್ಯಾಧಾರಗಳನ್ನು ತೋರಿಸಲು ಸಾಧ್ಯವಾಗಿಲ್ಲ. ಬಿಜೆಪಿಯವರು ಸುಳ್ಳು ಹೇಳಿ ಆಡಳಿತ ನಡೆಸುತ್ತಿದ್ದಾರೆ ಎಂದು ದಿಗ್ವಿಜಯ್ ಟೀಕಿಸಿದರು. ಈ ಹೇಳಿಕೆಯನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಸೇನಾ ಪಡೆಗಳ ನೈತಿಕ ಸ್ಥೈರ್ಯ ಕುಗ್ಗಿಸಲು ಕಾಂಗ್ರೆಸ್ ನಾಯಕರು ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಟೀಕಿಸಿದೆ.
ತಮ್ಮ ಹೇಳಿಕೆಗೂ ತಮ್ಮ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ದಿಗ್ವಿಜಯ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ದಿಗ್ವಿಜಯ್ ಹೇಳಿಕೆ ತಪ್ಪು. ಸರ್ಜಿಕಲ್ ಸ್ಟ್ರೈಕ್ ಕುರಿತು ದಿಗ್ವಿಜಯ್ ಅವರ ಹೇಳಿಕೆಯನ್ನು ನಾವು ಒಪ್ಪುವುದಿಲ್ಲ. ಪಕ್ಷದ ಅಭಿಪ್ರಾಯಗಳು.. ದಿಗ್ವಿಜಯ್ ಹೇಳಿಕೆಗಿಂತ ಭಿನ್ನವಾಗಿವೆ. ಅದು ನಮ್ಮ ಪಕ್ಷದ ಅಭಿಪ್ರಾಯಗಳಲ್ಲ. ನಾವು ಸರ್ಜಿಕಲ್ ಸ್ಟ್ರೈಕ್ ಬಗ್ಗೆ ದೃಢವಾದ ಅಭಿಪ್ರಾಯ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ನಮ್ಮ ಸೇನೆ ಉತ್ತಮ ಕೆಲಸ ಮಾಡಿದೆ. ಇದಕ್ಕೆ ಅವರು ಯಾವುದೇ ಪುರಾವೆಗಳನ್ನು ತೋರಿಸುವ ಅಗತ್ಯವಿಲ್ಲ,’’ ಎಂದು ರಾಹುಲ್ ಹೇಳಿದರು.
ರಾಹುಲ್ ಹೇಳಿಕೆಯಿಂದ ಈ ವಿಚಾರದಲ್ಲಿ ದಿಗ್ವಿಜಯ್ ಒಂಟಿಯಾಗಿದ್ದಾರೆ. ಅವರ ಹೇಳಿಕೆಯನ್ನ ಪಕ್ಷವೂ ಖಂಡಿಸಿದೆ.
Rahul Gandhi : No need for evidence on surgical strike; Rahul Gandhi said that Digvijay Singh’s statement is not correct.