ಸರ್ಕಾರ ಸರಿಯಾಗಿ ತನ್ನ ಜವಾಬ್ದಾರಿ ನಿಭಾಯಿಸಿದ್ದಿದ್ರೆ ಇಂತಹ ಸ್ಥಿತಿ ಬರುತ್ತಿರಲಿಲ್ಲ : ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸರ್ಕಾರದ ಕಾರ್ಯ ವೈಖರಿಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಾಗ ಟೀಕಾಪ್ರಹಾರ ನಡೆಸುತ್ತಲೇ ಇರುತ್ತಾರೆ. ಇದೀಗ ಮತ್ತೊಮ್ಮೆ ಸರ್ಕಾರದ ಕಾರ್ಯವೈಖರಿಯನ್ನ ಪ್ರಶ್ನಿಸಿ ಟ್ವೀ2ಟ್ ಮಾಡಿದ್ಧಾರೆ. ‘ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ತನ್ನ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿದ್ದರೆ, ಇಂದು ಕೊರೊನಾ ಬಿಕ್ಕಟ್ಟು ನಿಯಂತ್ರಣಕ್ಕಾಗಿ ಪದೇ ಪದೇ ಎದೆ ಬಡಿದುಕೊಂಡು ವಿದೇಶಗಳಿಂದ ನೆರವು ಪಡೆಯವ ಪರಿಸ್ಥಿತಿ ಬರುತ್ತಿರಲಿಲ್ಲ’ ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರ ಈಗ ಎದೆ ಬಡಿದುಕೊಂಡು ವಿದೇಶಗಳಿಂದ ಪರಿಹಾರ ಸಾಮಗ್ರಿಗಳನ್ನು ಪಡೆದುಕೊಳ್ಳುತ್ತಿರುವುದನ್ನು ನೋಡಿದರೆ, ಪರಿಸ್ಥಿತಿ ಬಹಳ ಕರುಣಾಜನಕವಾಗಿದೆ ಎನ್ನಿಸುತ್ತದೆ. ನಗರಗಳ ಬಳಿಕ, ಹಳ್ಳಿಗಳೂ ಸೋಂಕು ಹಬ್ಬುತ್ತಿದೆ. ನಗರಗಳ ಬಳಿಕ ಈಗ ಹಳ್ಳಿಗಳೂ ಭಗವಂತನ ಕೈಯಲ್ಲಿದೆ ಎಂದಿದ್ದಾರೆ.








