rahul gandhi
ಕ್ಯಾಪ್ಟನ್ ಸತೀಶ್ ಶರ್ಮಾ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್ ಗಾಂಧಿ ಫೋಟೋ ವೈರಲ್..!
ನವದೆಹಲಿ: ಇತ್ತೀಚೆಗೆ ನಿಧನರಾದ ಕಾಂಗ್ರೆಸ್ ನ ಮುಖಂಡ ಹಾಗೂ ಕೇಂದ್ರದ ಮಾಜಿ ಸಚಿವರಾದ ಕ್ಯಾಪ್ಟನ್ ಸತೀಶ್ ಶರ್ಮಾ ಅವರ ಪಾರ್ಥಿವ ಶರೀರಕ್ಕೆ ಹೆಗಲೊಡ್ಡುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅನೇಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹೌದು ಬಹುತೇಕ ಟ್ರೋಲ್ ಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗುವ ರಾಹುಲ್ ಗಾಂಧಿ ಇದೀಗ ಮಾನವೀಯತೆ ಸರಳತೆಗೆ ಸುದ್ದಿಯಲ್ಲಿದ್ದಾರೆ.
Video – ಮಂಗಳನ ಅಂಗಳಕ್ಕಿಳಿದ ರೋವರ್ : ಯಶಸ್ಸಿನ ಹಿಂದಿದೆ ಭಾರತೀಯರದ್ದೇ ಮಹತ್ವದ ಪಾಲು..!
ಕ್ಯಾಪ್ಟನ್ ಸತೀಶ್ ಶರ್ಮಾ ಧೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಬುಧವಾರ ತಮ್ಮ 73ನೇ ವಯಸ್ಸಿನಲ್ಲಿ ಅವರು ಇಹಲೋಕ ತ್ಯಜಿಸಿದರು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಶರ್ಮಾ ಗೋವಾದಲ್ಲಿ ಬುಧವಾರ ರಾತ್ರಿ 8-16 ರ ಸುಮಾರಿನಲ್ಲಿ ಕೊನೆಯುಸಿರೆಳೆದಿದ್ದರು.
ಭಾರತದ ಬದ್ಧ ವೈರಿ ರಾಷ್ಟ್ರ ಪಾಕ್ ನ ಇಂಟ್ರೆಸ್ಟಿಂಗ್ ವಿಚಾರಗಳು ನಿಮಗೆ ಗೊತ್ತಾ..!
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಆಪ್ತರಾಗಿದ್ದ ಕ್ಯಾಪ್ಟನ್ ಸತೀಶ್ ಶರ್ಮಾ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರಾಗಿ ನರಸಿಂಹ ರಾವ್ ಸರ್ಕಾರದಲ್ಲಿ 1993 ರಿಂದ 1996ರವರೆಗೆ ಸೇವೆ ಸಲ್ಲಿಸಿದ್ದರು. ಇನ್ನೂ ಅವರ ಅಂತ್ಯ ಸಂಸ್ಕಾರದ ವೇಳೆ ರಾಹುಲ್ ಗಾಂಧಿ ಅವರ ಪಾರ್ಥಿವ ಶರೀರಕ್ಕೆ ಹೆಗಲೊಡ್ಡಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಅತ್ಯಚಾರ ಸಂತ್ರಸ್ತೆ : ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ – ಮಗು ಸಾವು..!
rahul gandhi