`ಕರ್ಮ ಯಾರನ್ನೂ ಬಿಡುವುದಿಲ್ಲ’ : ಮೋದಿಯನ್ನ ಕುಟುಕಿದ ರಾಹುಲ್
ನವದೆಹಲಿ : ಕರ್ಮ ಯಾರನ್ನೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಕೇಂದ್ರ ಸರ್ಕಾರವನ್ನ ಟ್ವಿಟ್ಟರ್ ನಲ್ಲಿ ಕುಟುಕಿದ್ದಾರೆ.
ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ವಿಮಾನ ತಯಾರಕರಿಂದ ಮಧ್ಯವರ್ತಿಗೆ ಹಣ ವರ್ಗಾವಣೆ ಆಗಿರುವ ಬಗ್ಗೆ ಫ್ರೆಂಚ್ ಪತ್ರಿಕೆ ವರದಿ ಮಾಡಿದೆ.
ಇದನ್ನ ಟ್ಯಾಗ್ ಮಾಡಿ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಯಾರೊಬ್ಬರೂ ಅವರ ಕರ್ಮದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.
ರಾಹುಲ್ ತಮ್ಮ ಟ್ವೀಟ್ ನಲ್ಲಿ,
ಕರ್ಮ ಲೆಡ್ಜರ್ ನಂತೆ. ಯಾರೂ ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.
ಇನ್ನು ಈ ಹಿಂದೆ ರಾಹುಲ್ ಗಾಂಧಿ ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು.
