Breaking News – ED ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ…

1 min read

Breaking News – ED ವಿಚಾರಣೆಗೆ ಹಾಜರಾದ ರಾಹುಲ್ ಗಾಂಧಿ…

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ರಾಷ್ಟ್ರೀಯ ಅಧ್ಯಕ್ಷ ಮತ್ತು ವಯನಾಡ್ ಸಂಸದ ರಾಹುಲ್ ಗಾಂಧಿ ಇಂದು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ವಿಚಾರಣೆಗೆ  ಹಾಜರಾಗಿದ್ದಾರೆ.  ಇದೇ ವೇಳೆ ಕಾಂಗ್ರೆಸ್ ಬೆಂಬಲಿಗರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಹುಲ್ ವಿಚಾರಣೆಗೆ ಹಾಜರಾಗುವ ಮೊದಲು ಪ್ರಿಯಾಂಕಾ ಗಾಂಧಿ ವಾದ್ರಾ ಮನೆಗೆ ಬೇಟಿ ನೀಡಿ ಮಾತುಕತೆ ನಡೆಸಿದರು. ಇಲ್ಲಿಂದ ರಾಹುಲ್-ಪ್ರಿಯಾಂಕಾ ಕಾಂಗ್ರೆಸ್ ಪಕ್ಷದ ಕೇಂದ್ರ ಕಚೇರಿಗೆ ಆಗಮಿಸಿ ಪಕ್ಷದ ಮುಖಂಡರ ಜತೆ ಸಭೆ ನಡೆಸಿದರು.

ಸಭೆಯ ನಂತರ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಾಘೇಲ್ ಪಕ್ಷದ ಸಂಸದರು ಮತ್ತು ಇತರ ಮುಖಂಡರೊಂದಿಗೆ ಕಾಲ್ನಡಿಗೆಯಲ್ಲಿ ಇಡಿ ಕಚೇರಿಗೆ ತೆರಳಿದರು. ಪೊಲೀಸರು ಕಾಂಗ್ರೆಸ್ ಮೆರವಣಿಗೆ ಬ್ರೇಕ್ ಹಾಕಿದ್ದಾರೆ.

ರಾಹುಲ್ ಗಾಂಧಿ ಅವರ ತನಿಖೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ಪೊಲೀಸರು ಕಾಂಗ್ರೆಸ್ ಪ್ರಧಾನ ಕಚೇರಿಯಿಂದಲೇ ವಶಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಕಾರ್ಯವೈಖರಿಯನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಪೊಲೀಸರು ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಇಡಿ ಕಚೇರಿಯವರೆಗಿನ ರಸ್ತೆಯನ್ನು ಸೀಲ್ ಮಾಡಿದ್ದಾರೆ. E D ಕಛೇರಿ ಬಳಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd