Rahul Gandhi | ನಾವು ಈ ಸೋಲಿನಿಂದ ಕಲಿಯುತ್ತೇವೆ
ನವದೆಹಲಿ : ನಾವು ಈ ಸೋಲಿನಿಂದ ಕಲಿಯುತ್ತೇವೆ. ನಾವು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಪಂಚರಾಜ್ಯ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್ ಹೀನಾಯವಾಗಿ ಸೋಲುಂಡಿದೆ.
ಪಂಜಾಬ್ ನಲ್ಲಿ ಅಧಿಕಾರವನ್ನು ಕಳೆದುಕೊಂಡಿದ್ದರೇ, ಗೋವಾದಲ್ಲಿ ಬಿಜೆಪಿಗೆ ಪೈಪೋಟಿ ನೀಡಿದೆ. ಆದ್ರೆ ಇನ್ನುಳಿದ ಕಡೆ ಕಾಂಗ್ರೆಸ್ ಮಾಯವಾಗಿದೆ.
Humbly accept the people’s verdict. Best wishes to those who have won the mandate.
My gratitude to all Congress workers and volunteers for their hard work and dedication.
We will learn from this and keep working for the interests of the people of India.
— Rahul Gandhi (@RahulGandhi) March 10, 2022
ಈ ಫಲಿತಾಂಶದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಜನರು ನೀಡಿದ ತೀರ್ಪನ್ನು ನಾವು ನಮ್ರತೆಯಿಂದ ಸ್ವೀಕರಿಸುತ್ತಿದ್ದೇನೆ.
ಜನ ಮತ್ತು ದೇಶವನ್ನು ಗೆದ್ದವರಿಗೆ ಶುಭಾಶಯಗಳು. ಪಕ್ಕಕ್ಕಾಗಿ ದುಡಿದ ಪಕ್ಷದ ಎಲ್ಲ ಕಾರ್ಯಕರ್ತರು ಮತ್ತು ಸ್ವಯಂಸೇವಕರಿಗೆ ಅವರ ಶ್ರಮ ಮತ್ತು ಸಮರ್ಪಣೆಗಾಗಿ ನನ್ನ ಕೃತಜ್ಞತೆಗಳು.
ನಾವು ಈ ಸೋಲಿನಿಂದ ಕಲಿಯುತ್ತೇವೆ. ನಾವು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದು ಬರೆದುಕೊಂಡಿದ್ದಾರೆ.
rahul gandhi reaction after election result









