ಭೂಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಪರಮಾಪ್ತ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿಯಾದ ಬೆನ್ನಲ್ಲೇ ಸಿಂಧಿಯಾ ಅವರು ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ. ಇದು ಮಧ್ಯಪ್ರದೇಶದ ಕಾಂಗ್ರೆಸ್ ಜಂಘಾಬಲ ಕುಸಿಯುವಂತೆ ಮಾಡಿದೆ.
ಜ್ಯೋತಿರಾಧಿತ್ಯ ಸಿಂಧಿಯಾ ಸೋನಿಯಾ ಗಾಂಧಿ ಅವರಿಗೆ ರಾಜಿನಾಮೆ ಪತ್ರ ರವಾನಿಸಿದ್ದು “ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆ ಎದ್ದು ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಾನು ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ” ಎಂದು ಕಾಂಗ್ರೆಸ್ ನ ಎಲ್ಲಾ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ನಮೂದಿಸಿದ್ದಾರೆ.
ಬೆಳಗಾವಿಗೆ ಕಾಂಗ್ರೆಸ್ ನಾಯಕರ ದಂಡು!
ಬೆಳಗಾವಿ: ಎರಡು ದಿನಗಳ ಕಾಲ ನಡೆಯುತ್ತಿರುವ ಗಾಂಧಿ ಭಾರತ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ದೇಶದ ಕಾಂಗ್ರೆಸ್ (Congress) ನಾಯಕರ ದಂಡೆ ಬೆಳಗಾವಿಗೆ ಆಗಮಿಸಿದೆ ಸಿಎಂ ಸಿದ್ದರಾಮಯ್ಯ ಹಾಗೂ ಇಡೀ...