ನವದೆಹಲಿ : ಕೊರೊನಾ ವೈರಸ್ ದೇಶದ ಆರ್ಥಿಕತೆಗೆ ಭಾರಿ ಹೊಡೆತ ನೀಡಿದೆ. ಕೊರೊನಾ ಬಿಕ್ಕಟ್ಟಿನಿಂದ ಮುಂದಿನ ದಿನಗಳಲ್ಲಿ ಸೃಷ್ಟಿಯಾಗಬಹುದಾದ ಆರ್ಥಿಕ ತೊಂದರೆಗಳ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಬಿಐ ಮಾಜಿ ಮುಖ್ಯಸ್ಥ ರಘುರಾಮ್ ರಾಜನ್ ಅವರು ಇಂದು ವಿಡಿಯೊ ಮೂಲಕ ಚರ್ಚೆ ನಡೆಸಿದ್ದಾರೆ.
A conversation with Dr Raghuram Rajan, former RBI Governor, on dealing with the #Covid19 crisis. https://t.co/cdJtJ7ax0T
— Rahul Gandhi (@RahulGandhi) April 30, 2020
ಕೊರೊನಾ ವೈರಸ್ ಸೋಂಕಿನಿಂದ ಆರ್ಥಿಕತೆ ಮೇಲಾಗುವ ಪರಿಣಾಮ ಕುರಿತು ಮಾತನಾಡಿದ ರಘುರಾಮ್ ರಾಜನ್, ದೀರ್ಘಕಾಲದ ಲಾಕ್ ಡೌನ್ ನಿಂದ ಆರ್ಥಿಕತೆ ಸ್ಥಿರವಾಗಿ ಉಳಿಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ರಾಹುಲ್ ಗಾಂಧಿ ಕೇಳಿದ ಪ್ರಶ್ನೆವೊಂದಕ್ಕೆ ಪ್ರತಿಕ್ರಿಯೆ ನೀಡಿದ ರಾಜನ್ ಅವರು, ‘ದೇಶದಲ್ಲಿ ಬಡವರ ಪ್ರಾಣ ಉಳಿಸಬೇಕೆಂದರೆ, ನಮಗೆ 65,000 ಕೋಟಿ ಹಣದ ಅವಶ್ಯಕತೆ ಇದೆ’ ಎಂದು ಉತ್ತರಿಸಿದ್ದಾರೆ.
ದೀರ್ಘಕಾಲದ ಲಾಕ್ ಡೌನ್ ಹೊಂದುವುದು ಸರಳವಾಗಿ ಕಾಣಿಸಬಹುದು. ಆದರೆ ಇದು ನಮ್ಮ ಆರ್ಥಿಕತೆಯನ್ನು ಸ್ಥಿರವಾಗಿರಲು ಬಿಡುವುದಿಲ್ಲ. ‘ನಾವು ಜಾಣತನದಿಂದ ಲಾಕ್ ಡೌನ್ ಅನ್ನು ತೆರವುಗೊಳಿಸಬೇಕಿದೆ. ಲಾಕ್ ಡೌನ್ ತೆರವುಗೊಳಿಸಬೇಕೆಂದರೆ, ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿಡಲೇಬೇಕಾದ ಅನಿವಾರ್ಯತೆ ಇದೆ’ ಎಂದು ರಾಜನ್ ಅಭಿಪ್ರಾಯಪಟ್ಟಿದ್ದಾರೆ.