ಮತ್ತೆ ಎಐಸಿಸಿ ಅಧ್ಯಕ್ಷರಾಗುವತ್ತ ರಾಹುಲ್ ಗಾಂಧಿ ಚಿತ್ತ..!?
ನವದೆಹಲಿ : ಸಾಲು ಸಾಲು ಸೋಲುಗಳಿಂದ ಬಳಲಿಹೋಗಿರುವ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದೆ.
ಕಾಂಗ್ರೆಸ್ ಸದ್ಯ ಯಾವುದು ಸರಿಯಿಲ್ಲ.. ಕಾಂಗ್ರೆಸ್ ಮನೆಯೊಂದು ಮೂರು ಬಾಗಿಲಿನಿಂತಾಗಿರುವುದು ಎಲ್ಲರಿಗೂ ಗೊತ್ತೆ ಇದೆ. ಪಕ್ಷದಲ್ಲಿ ಯುವ – ಹಿರಿಯ ನಾಯಕರ ಮಧ್ಯೆ ಬಹಿರಂಗವಾಗಿಯೇ ಗುದ್ದಾಟ ನಡೆಯುತ್ತಿದ್ದು, ನಾಯಕತ್ವದ ಬಗ್ಗೆಯೂ ಪ್ರಶ್ನೆ ಎದ್ದಿದೆ.
ಈ ಮಧ್ಯೆ ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಎಲ್ಲರ ಬಯಕೆಯಂತೆ ಪಕ್ಷಕ್ಕಾಗಿ ಕೆಲಸ ಮಾಡಲು ಸಿದ್ಧವಾಗಿದ್ದೇನೆ ಎಂದು ಹೇಳುವ ಮೂಲಕ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾಗುವ ಬಗ್ಗೆ ತಿಳಿಸಿದ್ದಾರೆ.
ಕುಮಾರಸ್ವಾಮಿ ಒಳಸಂಚು ಶಾಲೆಯ ಪ್ರಿನ್ಸಿಪಾಲ್ : ಕೆ.ಎನ್. ರಾಜಣ್ಣ
ಶನಿವಾರ ಸೋನಿಯಾ ಗಾಂಧಿ ನಿವಾಸದಲ್ಲಿ ಪಕ್ಷದೊಳಗಿರುವ ಅಸಮಾಧಾನವನ್ನು ಕೊನೆಗೊಳಿಸಲು ಪ್ರಮುಖರ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಒಟ್ಟು 19 ನಾಯಕರು ಉಪಸ್ಥಿತರಿದ್ದರು.
ಸಭೆಯಲ್ಲಿ ಕಾಂಗ್ರೆಸ್‍ನಲ್ಲಿ ಸಕ್ರಿಯ ನಾಯಕತ್ವಕ್ಕೆ ಒತ್ತಾಯಿಸಿ ಪತ್ರ ಬರೆದಿದ್ದ ಭಿನ್ನಮತೀಯ ನಾಯಕರ ಜೊತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಗಂಟೆಗಳ ಸುದೀರ್ಘ ಸಭೆ ನಡೆಸಿದರು.
ಈ ವೇಳೆ ಪಕ್ಷದೊಳಗೆ ಉತ್ತಮ ಸಂವಹನ ಅಗತ್ಯ. ಪಕ್ಷದ ಯಾವುದೇ ಜವಾಬ್ದಾರಿಯನ್ನು ನೀಡಿದರೂ ಅದನ್ನು ನಾನು ನಿರ್ವಹಿಸುತ್ತೇನೆ, ಎಲ್ಲರು ಬಯಸಿದಂತೆ ಪಕ್ಷಕ್ಕಾಗಿ ನಾವು ಕೆಲಸ ಮಾಡಲು ಸಿದ್ಧ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ತಿಳಿದುಬಂದಿದೆ.
ಆಗಾಗಿದ್ದಲ್ಲಿ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









